ಮುತ್ತುಸ್ವಾಮಿ ದೀಕ್ಷಿತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು added image #WPWP
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಚು replaced [[Category: → [[ವರ್ಗ: , general fixes enabled
೮ ನೇ ಸಾಲು:
}}
 
'''ಮುತ್ತುಸ್ವಾಮಿ ದೀಕ್ಷಿತರು''' ([[ಮಾರ್ಚ್ ೨೪]], [[೧೭೭೫]]) ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು. ಇನ್ನಿಬ್ಬರು ತ್ಯಾಗರಾಜರು ಮತ್ತು ಶ್ಯಾಮಾ ಶಾಸ್ತ್ರಿಗಳು. ಬಹುತೇಕ ವಾಗ್ಗೇಯಕಾರರು ತೆಲುಗಿನಲ್ಲಿ ಹೆಚ್ಚು ಕೃತಿಗಳನ್ನು ರಚಿಸಿದ್ದರೆ ದೀಕ್ಷಿತರ ಕೃತಿಗಳೆಲ್ಲವೂ ಸಂಸ್ಕೃತದಲ್ಲಿ ರಚಿತವಾಗಿರುವುದು ಮಹತ್ವದ ವಿಚಾರವಾಗಿದೆ. ‘ಗುರುಗುಹ’ ಎಂಬ ಕಾವ್ಯನಾಮದ ಹಾಸುಹೊಕ್ಕು ದೀಕ್ಷಿತರ ಕೃತಿಗಳಲ್ಲಿ ಕಂಡುಬರುವುದು ಮತ್ತೊಂದು ಪ್ರಧಾನ ಅಂಶ. ಕರ್ಣಾಟಕ ಸಂಗೀತದಲ್ಲಿ ಹಂಸಧ್ವನಿಯಲ್ಲಿರುವ ‘ವಾತಾಪಿ ಗಣಪತಿಂ ಭಜೇ’ ಕೃತಿಯನ್ನು ಅರಿಯದವರೇ ಇಲ್ಲ. ಅಂತಹ ಅಸಂಖ್ಯಾತ ಮಹಾನ್ ಕೃತಿಗಳ ಕರ್ತಾರರಾದವರು ಮುತ್ತುಸ್ವಾಮಿ ದೀಕ್ಷಿತರು. ಇವರ ಸಂಗೀತ ಶೈಲಿಯನ್ನು ನಾರಿಕೇಳಪಾಕಕ್ಕೆ ಹೋಲಿಸಲಾಗುತ್ತದೆ. ತೆಂಗಿನಕಾಯಿಯಲ್ಲಿ, ಹೇಗೆ ಹೊರಗೆ ಕಠಿಣವಾದ ಕರಟವಿದ್ದು ಒಳಗೆ ಸವಿಯಾದ ಎಳನೀರೂ, ರುಚಿಯಾದ ಕಾಯಿಯೂ ಇರುತ್ತದೋ ಅದೇ ರೀತಿ, ಮೇಲ್ನೋಟಕ್ಕೆ ಇವರ ಕೃತಿಗಳು ಕಠಿಣವಾಗಿ ತೋರಿದರೂ,ಅವುಗಳಲ್ಲಿನ ಸಂಗೀತ ಸಾಹಿತ್ಯದ ಅಂಶಗಳಿಂದಾಗಿ, ಅವರ ಅತಿ ಉತ್ತಮ ದರ್ಜೆಯ ವಾಗ್ಗೇಯಕಾರತ್ವಕ್ಕೆ ನಿದರ್ಶನವಾಗಿವೆ.
 
==ಜೀವನ==
ಮುತ್ತುಸ್ವಾಮಿ ದೀಕ್ಷಿತರು ಜನಿಸಿದ ದಿನ ಮಾರ್ಚ್ ೨೪, ೧೭೭೫. ಮುತ್ತುಸ್ವಾಮಿ ದೀಕ್ಷಿತರ ಪೂರ್ವಜರು ತಮಿಳುನಾಡು ಆಂಧ್ರಪ್ರದೇಶಗಳ ಗಡಿ ಪ್ರದೇಶವಾದ ವಿರಿಂಚಿಪುರಂನಲ್ಲಿದ್ದವರು. ದೀಕ್ಷಿತರ ತಂದೆ ರಾಮಸ್ವಾಮಿ ದೀಕ್ಷಿತರೂ ಮಹಾನ್ ಮೇಧಾವಿ ಸಂಗೀತ ವಿದ್ವಾಂಸರು. ಇನ್ನೆರಡು ಸಂಗೀತ ತ್ರಿಮೂರ್ತಿಗಳಂತೆ ಮುತ್ತುಸ್ವಾಮಿ ದೀಕ್ಷಿತರು ಜನಿಸಿದ್ದೂ ತಮಿಳುನಾಡಿನ ತಿರುವಾರೂರಿನಲ್ಲಿ. ಇವರು ತಮ್ಮ ಜೀವನಕಾಲದಲ್ಲಿ ಹಲವಾರುಕಡೆ ಪ್ರಯಾಣಿಸಿ, ಹಲವೆಡೆ ವಾಸಿಸಿ, ಕೊನೆಗೆ ತಿರುನೆಲ್ವೇಲಿ ಬಳಿಯ ಎಟ್ಟಯಪುರಮ್ ನ ಆಸ್ಥಾನದಲ್ಲಿ ಆಶ್ರಯ ಪಡೆದವರು. ಮುತ್ತುಸ್ವಾಮಿ ದೀಕ್ಷಿತರು ತಮ್ಮ 16ನೇ ವಯಸ್ಸಿಗೇ ವೇದಾಧ್ಯಯನ, ಕಾವ್ಯಾಲಂಕಾರ, ಜ್ಯೋತಿಷ್ಯ ಶಾಸ್ತ್ರ, ವೈದ್ಯ ಮತ್ತು ಮಂತ್ರಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆದಿದ್ದರು.
 
==ದೈವಾನುಗ್ರಹ==
೩೩ ನೇ ಸಾಲು:
 
==ವಿದಾಯ==
ಆಶ್ವೀಜ ಬಹುಳ ಚತುರ್ದಶಿ - ನರಕ ಚತುರ್ದಶಿ ದೀಪಾವಳಿ ಪರ್ವ ದಿನವಾದ್ದರಿಂದ ದೀಕ್ಷಿತರು (ಅಕ್ಟೋಬರ್ ೨೧, ೧೮೩೫) ಆ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಸಾಯಂಕಾಲ ತಮ್ಮ ಎಲ್ಲಾ ಶಿಷ್ಯರನ್ನೂ ಕರೆದು ತಾವೇ ರಚಿಸಿದ ಪೂರ್ವಿ ಕಲ್ಯಾಣಿ ರಾಗದ "ಮೀನಾಕ್ಷಿ ಮುದಂ ದೇಹಿ" ಕೃತಿಯನ್ನು ವೀಣೆಯಲ್ಲಿ ನುಡಿಸುತ್ತಾ, ಎಲ್ಲರಿಗೂ ಹಾಡಲು ಹೇಳುತ್ತಾರೆ. "ಮೀನಲೋಚನಿ ಪಾಶಮೋಚನಿ" ಎಂಬ ಅನುಪಲ್ಲವಿಯ ಸಾಹಿತ್ಯವನ್ನು ಪದೇ ಪದೇ ಹಾಡಿಸುತ್ತಾ, ವೀಣೆ ಬದಿಗಿಟ್ಟು ತಂಬೂರಿಯ ನಾದ ಕೇಳುತ್ತಾ, ಆ ಜಗನ್ಮಾತೆಯ ಮಡಿಲಿನಲ್ಲಿ ಒರಗಿ ಬಿಡುತ್ತಾರೆ ತಾಯಿಯಲ್ಲಿ ಅವರ ಆತ್ಮ ಲೀನವಾಗಿ ಬಿಡುತ್ತದೆ. ನಮ್ಮ ಸಂಗೀತ ಪ್ರಪಂಚದಲ್ಲಿ ದೀಪಾವಳಿಯನ್ನು "ದೀಕ್ಷಿತರ ದಿನ" ಎಂದೇ ಆಚರಿಸಲಾಗುತ್ತಿದೆ.
 
==ಆಕರಗಳು==
೪೦ ನೇ ಸಾಲು:
*[http://www.guruguha.org/wiki/Alphabetical.html ದೀಕ್ಷಿತರ ಕೃತಿಗಳು ಅರ್ಥರೂಪದೊಂದಿಗೆ]
 
[[Categoryವರ್ಗ:ಭಾರತದ ಸಂಗೀತಗಾರರು]]
[[Categoryವರ್ಗ:ಶಾಸ್ತ್ರೀಯ ಸಂಗೀತಗಾರರು]]
[[Categoryವರ್ಗ:ಕರ್ನಾಟಕ ಸಂಗೀತ]]
[[Categoryವರ್ಗ:ಸಂಗೀತಗಾರರು]]