ಚಾಣಕ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅಕ್ಷರ ದೋಷ ಪರಿಹರಿಸಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Rescuing 1 sources and tagging 0 as dead.) #IABot (v2.0.8
೧೦ ನೇ ಸಾಲು:
}}
 
'''ಕೌಟಿಲ್ಯ''' ಎಂದೇ ಪ್ರಸಿದ್ಧನಾದ '''ಚಾಣಕ್ಯ''' (ಸು. [[ಕ್ರಿ.ಪೂ.]] ೩೫೦ - ೨೮೩), [[ಪ್ರಾಚೀನ ಭಾರತ]]ದ ಅದ್ವಿತೀಯ [[ಅರ್ಥಶಾಸ್ತ್ರಜ್ಞ]]. [[ಮೌರ್ಯ ಸಾಮ್ರಾಜ್ಯ]] ಸ್ಥಾಪನೆಯಲ್ಲಿ ಚಾಣಕ್ಯನ ಪಾತ್ರ ಮಹತ್ವದ್ದು.<ref>[{{Cite web |url=http://www.kanaja.in/%E0%B2%9A%E0%B2%BE%E0%B2%A3%E0%B2%95%E0%B3%8D%E0%B2%AF/ |title=ಚಾಣಕ್ಯ ಅಸಾಧಾರಣ ಪುರುಷ ] |access-date=2016-12-04 |archive-date=2017-04-13 |archive-url=https://web.archive.org/web/20170413103542/http://kanaja.in/%E0%B2%9A%E0%B2%BE%E0%B2%A3%E0%B2%95%E0%B3%8D%E0%B2%AF/ |url-status=dead }}</ref>."ವಿಷ್ಣುಗುಪ್ತ" ಎಂಬುದು ಚಾಣಕ್ಯನ ನಿಜವಾದ ಹೆಸರು. ಚಣಕನ ಮಗನಾದ್ದರಿಂದ ಚಾಣಕ್ಯನೆಂದು ಹೆಸರು ಬಂದಿತೆಂದು ಹೇಳಲಾಗುತ್ತದೆ. ವಿಷ್ಣುಗುಪ್ತ [[ತಕ್ಷಶಿಲೆ]]ಯ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿದ್ದನು. ತಕ್ಷಶಿಲೆ [[ಗಾಂಧಾರ]]ದಲ್ಲಿತ್ತು. ಗಾಂಧಾರದ ರಾಜ [[ಅಂಬಿ]], [[ಯವನರು|ಯವನ]] ಚಕ್ರವರ್ತಿಯಾದ [[ಅಲೆಕ್ಸಾಂಡರ]]ನ ಜೊತೆ ಒಪ್ಪಂದ ಮಾಡಿಕೊಂಡು ಇಡೀ ಭಾರತವನ್ನು ಯವನರ ಕೈಗೊಪ್ಪಿಸಲು ಹೊಂಚು ಹಾಕುತ್ತಾನೆ. ಆಗ ತನ್ನ ವಿದ್ಯಾರ್ಥಿಗಳ ಬೆಂಬಲದಿಂದ ಅಚಾರ್ಯ ವಿಷ್ಣುಗುಪ್ತನು ಬಂಡೇಳುತ್ತಾನೆ. ಈತನ ಶಿಷ್ಯನೆ [[ಚಂದ್ರಗುಪ್ತ ಮೌರ್ಯ]].
==ಅಸಾಧಾರಣ ಪ್ರತಿಭಾವಂತ. ಹಿಡಿದ ಕೆಲಸವನ್ನು ಪಟ್ಟು ಹಿಡಿದು, ಸಾಧಿಸುವ ಸ್ವಭಾವದವನು. ಸಕಲ ಶಾಸ್ತ್ರ ಪಾರಂಗತ, ಅರ್ಥಶಾಸ್ತ್ರ ಪ್ರವೀಣ. ರಾಜನೀತಿ ವಿಶಾರದ. ಸಾಮ, ದಾನ, ಭೇದ, ದಂಡ ಎಂಬ ಚತರೋಪಾಯ ಚತುರದ್ಯೆಯಲ್ಲಿ ತುಂಬಾ ಅನುಭವಿ, ಸೂಕ್ಷ್ಮಮತಿ. ಆತನ ಮನಸ್ಸಿನ ಅಭಿಪ್ರಾಯವನ್ನು ಹೀಗೆಂದು ತಿಳಿಯಲು ಯಾರಿಗೂ ಸಾಧ್ಯವಿಲ್ಲ. ಬಹಳ ರಹಸ್ಯವಾಗಿ ಕೆಲಸ ಮಾಡುವವನು. ಬಹುದೂರದ ಅಲೋಚನೆ, ಯಾವ ಕೆಲಸದಲ್ಲಿಯೇ ಆಗಲಿ ಆತ ಇಟ್ಟ ಗುರಿ, ಮಾಡಿದ ಅಂದಾಜು ಎಂದೂ ತಪ್ಪುತ್ತಿರಲಿಲ್ಲ. ಮಹಾತ್ಯಾಗಿ, ಮಹಾ ತಪಸ್ವಿ. ಹೊರನೋಟಕ್ಕೆ ತುಂಬ ಕಠಿಣ ಸ್ವಭಾವದವನು. ಅಪಾರ ಲೋಕಾನುಭವವಿದ್ದವನು. ಶತ್ರುಗಳನ್ನು ಸಂಹಾರ ಮಾಡುವುದರಲ್ಲಿ ಬಗೆಬಗೆಯ ತಂತ್ರಗಳನ್ನು ಸಮಯವರಿತು ಎಚ್ಚರಿಕೆಯಿಂದ ಮಾಡುವಾತ. ಆತನಿಗೆ ತಿಳಿಯದ ಶಾಸ್ತ್ರವಿಲ್ಲ. ಗೊತ್ತಿಲ್ಲದ ವಿಚಾರವಿಲ್ಲ. ಅದೊಂದು ಪ್ರತಿಭಾಪುಂಜ. “ಚಾಣಕ್ಯ ತಂತ್ರ” ಎಂಬ ಮಾತು ಈಗಲೂ ಗಾದೆಯಾಗಿದೆ.
ನಂದವಂಶವನ್ನು ಸರ್ವನಾಶಮಾಡಿ, ಚಂದ್ರಗುಪ್ತನಿಗೆ ರಾಜ್ಯವನ್ನು ಕೊಡಿಸಿ, ಮೌರ್ಯ ಸಾಮ್ರಾಜ್ಯ ಸ್ಥಾಪಕನಾಗಿ ಮೆರೆದ ಪುಣ್ಯ ಪುರುಷ ಚಾಣಕ್ಯ.
"https://kn.wikipedia.org/wiki/ಚಾಣಕ್ಯ" ಇಂದ ಪಡೆಯಲ್ಪಟ್ಟಿದೆ