ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
==ಪರಿಚಯ==
'''ಡಾ. ಸರ್ವೆಪಲ್ಲಿ ರಾಧಾಕೃಷ್ಣನ್''' , (ಜನನ : ೫ ನೇ ಸೆಪ್ಟೆಂಬರ್, ೧೮೮೮./ 5 ಸೆಪ್ಟೆಂಬರ್ 1888 - 17 ಏಪ್ರಿಲ್ 1975) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ (೧೯೦೫-೧೯೦೬) ಶಿಕ್ಷಣ ಪಡೆದಿದ್ದರು. ಶಿಕ್ಷಕರಾಗಿದ್ದ 'ಡಾ. ಸರ್ವಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾಗಿದ್ದರು. ಇವರು ಒಬ್ಬ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.
 
==ಜನನ/ ಬಾಲ್ಯ ಹಾಗೂ ವಿದ್ಯಾಭ್ಯಾಸ==
* 'ಸರ್ವಪಲ್ಲಿ ರಾಧಾಕೃಷ್ಣನ್' ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ 'ತಿರುತ್ತಣಿ' ಎಂಬಲ್ಲಿ ಸೆಪ್ಟೆಂಬರ್ ೫, ೧೮೮೮ ರಲ್ಲಿ. ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, 'ರಾಧಾಕೃಷ್ಣನ್' ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು.
* ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿ ಸೀತಮ್ಮ. ಇವರು ಜಮೀನ್ದಾರರ ಬಳಿ ರೆವಿನ್ಯೂ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ರಾಧಾಕೃಷ್ಣನ್ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿ ಮಾಡುವ ಹಂಬಲವಿತ್ತು.
* 'ಸ್ಕಾಲರ್‌ಶಿಪ್ ಹಣ'ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ '[[ತತ್ವಜ್ಞಾನ]]' ವಿಷಯದ ಮೇಲೆ 'ಬಿ.ಎ' ಮತ್ತು 'ಎಂ.ಎ. ಪದವಿ'ಗಳನ್ನು ಪಡೆದು ಕೊಂಡರು. 'ಸ್ನಾತಕೋತ್ತರ ಪದವಿ'ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ ೨೦ ವರ್ಷದ ಬಾಲಕನ ತಲೆಯಲ್ಲಿದ್ದ 'ಹಲವು ಬಗೆಯ ಸಿದ್ಧಾಂತಗಳು', 'ವೇದಾಂತ ವಿಚಾರಗಳು' ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.{{sfn|Flood|196|p=249}}
 
==ವಿವಾಹ==