ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
==ಪ್ರಾಧ್ಯಾಪಕ ಮತ್ತು ಬರಹಗಾರರಾಗಿ==
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. ಇನ್ನೂ ಎಂಟನೆಯ ತರಗತಿಯಲ್ಲಿ ಓದುತ್ತಿರುವಾಗಲೇ ಅವರು ‘ಆವರ್ತ’ ಎಂಬ ಕಥೆ ಬರೆದರು. ಇದುವರೆಗೆ ಕಥೆ, ಕಾದಂಬರಿ, ಪ್ರವಾಸ ಕಥನಗಳನ್ನು ಒಳಗೊಂಡ ಅವರ 21 ಪ್ರಕಟಣೆಗಳು ಬೆಳಕು ಕಂಡಿವೆ. ‘ಹಾಡುಗಳು’, ‘ನನ್ನ ಪ್ರೀತಿಯ ಹುಡುಗನಿಗೆ’, ‘ಮಲೆನಾಡಿನ ಹುಡುಗಿ, ಬಯಲು ಸೀಮೆಯ ಹುಡುಗ’, ‘ಸನ್ನಿಧಿ’, ‘ಪ್ರೇಮ ಕಥಾ ಸಂಪುಟ’, ‘ಅಕಾಲ’, ‘ಛಿದ್ರ’ ನಾಗತಿಹಳ್ಳಿಯವರ ಪ್ರಸಿದ್ಧ ಕಥಾ ಸಂಕಲನ ಗಳು. ‘ಬಾ ನಲ್ಲೆ ಮಧುಚಂದ್ರಕೆ’, ‘ಚುಕ್ಕಿ ಚಂದ್ರಮರ ನಾಡಿನಲ್ಲಿ’, ‘ವಲಸೆ ಹಕ್ಕಿಯ ಹಾಡು’ ಅವರ ಕಾದಂಬರಿಗಳು.
‘ಆಯನ’, ‘ಅಮೆರಿಕ! ಅಮೇರಿಕಾ!!’, ‘ದಕ್ಷಿಣ ಧ್ರುವದಿಂ’, ‘ಹೊಳೆದಂಡೆ’ ಮುಂತಾದವು ಅವರ ಪ್ರವಾಸ ಕಥನಗಳು’. ‘ನನ್ನ ಪ್ರೀತಿಯ ಹುಡುಗಿಗೆ’ ಹಲವು ಸಂಪುಟಗಳಲ್ಲಿ ಮೂಡಿಬಂದಿರುವ ಅವರ ಆತ್ಮಕಥೆಯಾಗಿದೆ. ‘ಶತಮಾನದಂಚಿನಲ್ಲಿ’ ಅವರ ವಿವಿಧ ಲೇಖನಗಳ ಸಂಗ್ರಹ ಸಂಪುಟವಾಗಿದೆ.
 
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
 
===ಕೃತಿಗಳು===