ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2401:4900:33D0:5B1B:2:1:56:2A14 (ಚರ್ಚೆ) ರ 1082102 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೩೧ ನೇ ಸಾಲು:
ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಮತ್ತು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ್ ಸನ್ನಿಧಾನ ಅವರ ಮೊದಲ ಮಗನಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ೧೮೮೪ ಜೂನ್ ೪ರಂದು ಮೈಸೂರು ಅರಮನೆಯಲ್ಲಿ ಜನಿಸಿದರು. ೧೮೯೪ರಲ್ಲಿ ಕಲ್ಕತ್ತ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಹತ್ತನೇ ಚಾಮರಾಜೇಂದ್ರ ಒಡೆಯರ್ ಗಂಟಲು ನೋವಿನಿಂದಾಗಿ ಆಕಸ್ಮಿಕ ವಾಗಿ ಮರಣ ಹೊಂದಿದರು, ಇನ್ನೂ ಹತ್ತು ವರ್ಷ ವಯಸ್ಸಿನವರಾಗಿದ್ದ ಕೃಷ್ಣರಾಜ ಒಡೆಯರ್ ಅವರು ರಾಜ್ಯಭಾರವನ್ನು ವಹಿಸಿಕೊಳ್ಳಬೇಕಾಯಿತು. ತಾಯಿ ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಕೃಷ್ಣರಾಜ ಒಡೆಯರ್ ೧೯೦೨ರಲ್ಲಿ ೧೮ ವಯಸ್ಸು ತಲುಪುವವರೆಗೆ ರಾಜ್ಯವನ್ನು ರಾಜಪ್ರತಿನಿಧಿಯಾಗಿ ಆಳಿದರು. ೧೯೦೨ ಫೆಬ್ರವರಿ ೨ರಂದು ಕೃಷ್ಣರಾಜ ಒಡೆಯರ್ ಅವರು ತಾಯಿಯಿಂದ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷ ಆಗಸ್ಟ್ ಎಂಟರಂದು ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಆಗಿನ ಬ್ರಿಟೀಷ್ ಬಾರತದ ವೈಸ್‍ರಾಯ್ ಲಾರ್ಡ್ ಕರ್ಜನ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ವಿದ್ಯುಕ್ತವಾಗಿ ಮೈಸೂರಿನ ಮಹಾರಾಜರೆಂದು ಘೋಷಿಸಿದರು.<ref>{{Cite newspaper The Times |articlename=The Maharajah of Mysore |day_of_week=Monday |date=11 August 1902 |page_number=15 |issue=36843| }}</ref>
 
ಮಹಾರಾಜರು ಪಿ. ರಾಘವೇಂದ್ರ ರಾವ್ ಅವರ ನಿರ್ದೇಶನದಡಿಯಲ್ಲಿ ಲೋಕರಾಜನ್ ಅರಮನೆಯಲ್ಲಿ ತನ್ನ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಹೊಂದಿದರು. ಪಾಶ್ಚಿಮಾತ್ಯ ಅಧ್ಯಯನಗಳು ಜೊತೆಗೆ, ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಶಿಕ್ಷಣ ಪಡೆದರು. ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಶ್ಚಿಮ ಶಾಸ್ತ್ರೀಯ ಸಂಗೀತವನ್ನು ಕೂಡ ಕಲಿತರು. ಮುಂದೆ ಅಜ್ಮೀರ್ ನ ಮೇಯೊ ಕಾಲೇಜ್‍ನಲ್ಲಿ ಶಿಕ್ಷಣ ಮುಂದುವರೆಸಿದರು, ಆದರೆ ಅನಾರೋಗ್ಯದ ಕಾರಣ ಮೈಸೂರಿಗೆ ಮರಳಬೇಕಾಯ್ತು. ಬಾಂಬೆ ಸಿವಿಲ್ ಸರ್ವೀಸ್‍ನ ಸರ್ ಸ್ಟುವರ್ಟ್ ಫ್ರೇಸರ್ ಅವರು ಆಡಳಿತ ನಿರ್ವಹಣೆ, ನ್ಯಾಯಶಾಸ್ತ್ರ, ತತ್ವಶಾಸ್ತ್ರ ಬಗ್ಗೆ ಶಿಕ್ಷಣವನ್ನು ನೀಡಿದರು. ಬಳಿಕ ರಾಜ್ಯದಲ್ಲಿ ಪ್ರವಾಸಗಳನ್ನು ಮಾಡುವ ಮೂಲಕ ರಾಜ್ಯದ ಅವಶ್ಯಕತೆ ಹಾಗೂ ಆಡಳಿತದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು.sgbb
 
== ಆಡಳಿತ ಸುಧಾರಣೆ ==