ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 2401:4900:22E1:E76E:1:0:D5CE:FC40 (talk) to last revision by MalnadachBot
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೫೦ ನೇ ಸಾಲು:
* ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲ ದಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. ೧೯೪೯ ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.<ref>Sarvepalli Gopal: ''Radhakrishnan; a Biography'' (1989) p.17</ref>
 
 
== ಮೊಟ್ಟ ಮೊದಲ ಉಪರಾಷ್ಟ್ರಪತಿಯಾಗಿ==
* 1951-52 ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ 'ರಾಧಾಕೃಷ್ಣನ್', ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. 'ರಾಧಾಕೃಷ್ಣನ್' ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ '[[ಭಾರತ ರತ್ನ|ಭಾರತ ರತ್ನ ಪ್ರಶಸ್ತಿ]]' ನೀಡಿ ಗೌರವಿಸಿತು.
* ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.