ವರಮಹಾಲಕ್ಷ್ಮಿ ವ್ರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೨ ನೇ ಸಾಲು:
==ವ್ರತ ಆಚರಿಸುವ ವಿಧಾನ==
[[ಶುಕ್ರವಾರ|ಶುಕ್ರವಾರದ]] ದಿನ, [[ಸಾಯಂಕಾಲ|ಸಾಯಂಕಾಲದವರೆವಿಗೂ]] [[ಉಪವಾಸ]] ಇರಬೇಕು. ವ್ರತ ಮಾಡುವವರು [[ ಸಂಕಲ್ಪ ]]ಮಾಡಿ ದೇವಿಯನ್ನು [[ಕಲಶ]] ಮತ್ತು ವಿಗ್ರಹಗಳಲ್ಲಿ ಆವಾಹನೆ ಮಾಡಿ ಪೂಜಿಸುವರು. ಕಲಶದಲ್ಲಿ [[ಅಕ್ಕಿ]] ತುಂಬಿಸಿ [[ಖರ್ಜೂರ]], [[ಗೋಡಂಬಿ]],[[ದ್ರಾಕ್ಷಿ]], [[ಬಾದಾಮಿ (ಪದಾರ್ಥ)|ಬಾದಾಮಿ]], [[ಕಲ್ಲುಸಕ್ಕರೆ]] ಮತ್ತು ಕೆಲವು ಹಣ್ಣುಗಳನ್ನು ಇರಿಸುವರು. ಈ ಕಳಸಕ್ಕೆ '''ಲಕ್ಷ್ಮೀ ಕಳಸ''' ಎನ್ನುತ್ತಾರೆ. ಅದರ ಮೇಲೆ ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಲಾಗುತ್ತದೆ.
`
 
 
ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು. ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ನೈವೇದ್ಯ ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ [[ಸಜ್ಜಪ್ಪ|ಸಜ್ಜಪ್ಪವನ್ನು]] ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು. ದೇವಿಯ ಮೂರ್ತಿಗೂ [[ಅರಿಶಿನ]], [[ಕುಂಕುಮ]],[[ಪಾರಿಜಾತ|ಹೂವು]], ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.