ಗೋಲ ಗುಮ್ಮಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
saravash
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦ ನೇ ಸಾಲು:
==ಗೋಲ್ ಗುಮ್ಮಟದ ವೈಶಿಷ್ಟ್ಯತೆ==
ಕಾರ್ಡೋಬಾದಲ್ಲಿರುವ ಬೃಹತ್ ಮಸೀದಿಯಲ್ಲಿ ಮಾತ್ರ ಇಂತಹ ರಚನೆಯನ್ನು ಬಳಸಲಾಗಿದೆ. ಎತ್ತರದ ಬಿಂದುವಿನಲ್ಲಿ ಕೊನೆಯಾಗುವ ಎಂಟು ಕಮಾನುಗಳು, ನಿಯತವಾದ ಜಾಗಗಳಲ್ಲಿ ಒಂದನ್ನೊಂದು ಅರ್ಧಿಸುತ್ತವೆ. ಈ ಗುಂಬಜ್ ನಲ್ಲಿರುವ ಪ್ರತಿಧ್ವನಿಗುಣವು ಅದರ ವಿಶೇಷ ಲಕ್ಷಣಗಳಲ್ಲಿ ಒಂದು. ಇಲ್ಲಿ ಆಡಿದ ಮಾತು ಅಥವಾ ಮಾಡಿದ ಶಬ್ದವು ಹನ್ನೊಂದು ಬಾರಿ ಪ್ರತಿಧ್ವನಿಸುತ್ತದೆ. ಅದನ್ನು ಮೂವತ್ತೇಳು ಕಿಲೋಮೀಟರುಗಳ ದೂರದಿಂದ ಕೇಳಬಹುದು. ಹಾಲ್ ನಿಂದ 33.22 ಮೀಟರುಗಳ ಎತ್ತರದಲ್ಲಿ ಸುಮಾರು ಮೂರೂಕಾಲು ಅಡಿ ಅಗಲದ ಗ್ಯಾಲರಿಯಿದೆ. ಇದು ಗುಂಬಜಿನ ಒಳ ಪರಿಧಿಯ ಸುತ್ತಲೂ ವೃತ್ತಾಕಾರವಾಗಿ ಹರಡಿಕೊಂಡಿದೆ. ಇದನ್ನು ‘ಪಿಸುಗುಟ್ಟುವ ಗ್ಯಾಲರಿ’(ವಿಷ್ಪರಿಂಗ್ ಗ್ಯಾಲರಿ) ಎಂದು ಕರೆಯುತ್ತಾರೆ. ಏಕೆಂದರೆ, ಇಲ್ಲಿ ಅತ್ಯಂತ ಮೆಲುದನಿಯಲ್ಲಿ ಆಡಿದ ಮಾತನ್ನು ಕೂಡ ಗ್ಯಾಲರಿಯ ಒಂದು ತುದಿಯಿಂದ ಇನ್ನೊಂದು ತುದಿಯವರೆಗೂ ಕೇಳಬಹುದು. ಒಂದೇ ಒಂದು ಬಾರಿ ಗಟ್ಟಿಯಾಗಿ ಚಪ್ಪಾಳೆ ತಟ್ಟಿದರೆ, ಅದು ಹತ್ತು ಸಲ ಪ್ರತಿಧ್ವನಿಸುತ್ತದೆ. ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ.
 
==ಛಾಯಾಂಕಣ==
{{Gallery
"https://kn.wikipedia.org/wiki/ಗೋಲ_ಗುಮ್ಮಟ" ಇಂದ ಪಡೆಯಲ್ಪಟ್ಟಿದೆ