ಕಾರ್ನಾಡ್ ಸದಾಶಿವ ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೫ ನೇ ಸಾಲು:
ಸದಾಶಿವರಾಯರು ಮಂಗಳೂರಿನಲಿ ಪ್ರಾರಂಭಿಕ ಶಿಕ್ಷಣ ಪಡೆದರು. ಮುಂದೆ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಓದಿ ಪದವೀ ಧರರಾದರು. ಮುಂಬಯಿ ಯಲ್ಲಿ ನ್ಯಾಯಶಾಸ್ತ್ರ ಪದವಿ ಗಳಿಸಿ ಮಂಗಳೂರಿನಲ್ಲಿ 1906ರಲ್ಲಿ ವಕೀಲಿಯನ್ನಾರಂ ಭಿಸಿದರು.
==ಸ್ವಾತಂತ್ರ್ಯ ಚಳವಳಿ==
ಇವರು ಬಲು ಬೇಗ ವೃತ್ತಿಜೀವನದಲ್ಲಿ ಯಶಸ್ಸು ಗಳಿಸಿದರಾದರೂ ಇವರ ಮನಸ್ಸು ದೇಶದ ಉನ್ನತಿಗಾಗಿ ಸದಾ ತುಡಿಯುತ್ತಿತ್ತು. ಸ್ತ್ರೀಯರ ಪ್ರಗತಿಗಾಗಿ ಮಹಿಳಾ ಸಭಾ ಎಂಬ ಸಂಸ್ಥೆಯೊಂದನ್ನು ಪ್ರಾರಂಭಿಸಿದರು. ಇವರೂ ಇವರ ಪತ್ನಿ ಶಾಂತಾಬಾಯಿಯವರೂ ಈ ಸಂಸ್ಥೆಯ ಆಶ್ರಯದಲ್ಲಿ ಮಹಿಳೆಯರಿಗೆ ಉಪಯುಕ್ತ ಕಸಬುಗಳನ್ನು ಹೇಳಿಕೊಡುತ್ತಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಚಳವಳಿ ತೀವ್ರವಾದಾಗ ಯುವಕರಿಗೆ ರಾಷ್ಟ್ರೀಯ ಶಿಕ್ಷಣವನ್ನು ನೀಡುವತ್ತ ಇವರ ಮನಸ್ಸು ಹರಿಯಿತು. ಇವರು '''ತಿಲಕ್ ವಿದ್ಯಾಲಯ''' ಎಂಬ ರಾಷ್ಟ್ರೀಯ ವಿದ್ಯಾಶಾಲೆಯನ್ನ ಆರಂಭಿಸಿದರು. ಹಿಂದಿ ಭಾಷೆಯನ್ನು ಬೋಧಿಸುವುದರ ಜೊತೆಗೆ ಅಲ್ಲಿ ನೂಲುವುದು, ನೇಯುವುದು ಮುಂತಾದ ಉಪಯುಕ್ತ ಕೈಕಸಬುಗಳನ್ನೂ ಹೇಳಿಕೊಡಲಾಗುತ್ತಿತ್ತು.
 
ಇವರು ಗಾಂಧೀಯವರು ಸತ್ಯಾಗ್ರಹ ಚಳವಳಿಯನ್ನಾರಂಭಿಸಿದಾಗ ಕರ್ನಾಟಕದಲ್ಲಿ ಅದರ ಪ್ರತಿಜ್ಞೆಗೆ ಸಹಿಹಾಕಿದವರಲ್ಲಿ ಇವರು ಮೊದಲಿಗರು. ಇವರು ಈ ಚಳವಳಿಯಲ್ಲಿ ದುಮುಕಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಸು ಬಲಗೊಂಡಿತು. ದಕ್ಷ ಹಾಗೂ ನಿಷ್ಠಾವಂತ ಸತ್ಯಾಗ್ರಹಿಗಳ ತರಬೇತಿಗಾಗಿ ಇವರು ಧಾರಾಳವಾಗಿ ಹಣ ಸುರಿದರು. ಹಲವು ವರ್ಷಗಳ ಕಾಲ ಇವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಕರ್ನಾಟಕ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರೂ ಆಗಿದ್ದರಲ್ಲದೆ ಅದರ ಅಧ್ಯಕ್ಷರೂ ಆಗಿದ್ದರು (1931-34). ಇವರ ಖ್ಯಾತಿ ಅಖಿಲಭಾರತ ಮಟ್ಟಕ್ಕೂ ಏರಿತು. ಇವರು ಅಖಿಲಭಾರತ ಕಾಂಗ್ರೆಸ್ ಸಮಿತಿಯ ಸದಸ್ಯರಾದರು.