ಕಳಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 157.45.96.76 (talk) to last revision by InternetArchiveBot
೨೫ ನೇ ಸಾಲು:
ಕಳಸ [[ಚಿಕ್ಕಮಗಳೂರು]] ಜಿಲ್ಲೆಯ ಒಂದು ತಾಲ್ಲೂಕು. ಭದ್ರಾ ನದಿಯ ಬಲದಂಡೆಯ ಬಳಿ ಉ.ಅ ೧೩ಲಿ ೧೪` ಮತ್ತು ಪೂ.ರೇ. ೭೫ಲಿ ೨೬`ನಲ್ಲಿ ಸಹ್ಯಾದ್ರಿಯ ಉತ್ತುಂಗ ಶ್ರೇಣಿಗಳ ನಡುವಣ ಕಣಿವೆಯಲ್ಲಿದೆ. ಇದರೊಂದಿಗೆ ದಕ್ಷಿಣದಲ್ಲಿ ದುಗ್ಗಪ್ಪನ ಕಟ್ಟೆ(ಸಣ್ಣ ಗುಡ್ಡ)ಯಿಂದ ಆವೃತವಾಗಿದೆ. ಸಮುದ್ರ ಮಟ್ಟದಿಂದ ಕಳಸವು ೮೦೭ ಮೀಟರ್ ಎತ್ತರದಲ್ಲಿದೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಸುಮಾರು ೧೧೦ಕಿಲೋಮೀಟರ್ ದೂರದಲ್ಲಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಿಂದ ೩೧೦ ಕಿಲೋಮೀಟರ್ ಹಾಗೂ ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಿಂದ ಕಳಸಕ್ಕೆ ೯೨ ಕಿಲೋ ಮೀಟರ್ ಅಂತರವಿದೆ.
 
== ವ್ಯುತ್ಪತ್ತಿ ==
 
 
ಕಳಸ ಎಂಬ ಪದವು ಸಂಸ್ಕೃತ ಮೂಲವಾದ ‘ಕಲಶ’ದಿಂದ ಬಂದಿರಬಹುದೆಂದು ಹೇಳಲಾಗಿದೆ. ಕಲಶವೆಂದರೆ ಹಿಂದೂ ಸಂಪ್ರದಾಯದ ಪ್ರಕಾರ ದೇಗುಲಗಳ ವಾಸ್ತುಶಿಲ್ಪದಲ್ಲಿ ಗರ್ಭಗುಡಿಯ ಮೇಲಿರುವುದು. ಸಾಮಾನ್ಯ ಅರ್ಥದಲ್ಲಿ ಕಲಶವೆಂದರೆ ಪವಿತ್ರ ಪಾತ್ರೆ ಎನ್ನಬಹುದು. ಮೂರು ಕಡೆಯಿಂದ ಆವರಿಸಿರುವ ಭದ್ರೆ ಮತ್ತು ದಕ್ಷಿಣದಲ್ಲಿರುವ ದುಗ್ಗಪ್ಪನ ಕಟ್ಟೆಯಿಂದಾಗಿ ಎತ್ತರದಿಂದ ನೋಡಿದಾಗ ಪಟ್ಟಣವು ಮಡಕೆಯನ್ನು ಹೋಲುವಂತಿರುವುದರಿಂದ ಕಳಸವೆಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಬೆಟ್ಟದ ತಳದಲ್ಲಿ ಶ್ರೀ ಕಳಸೇಶ್ವರ ಸ್ವಾಮಿಯ ದೇವಾಲಯವಿದೆ.
 
"https://kn.wikipedia.org/wiki/ಕಳಸ" ಇಂದ ಪಡೆಯಲ್ಪಟ್ಟಿದೆ