ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು 2405:204:5684:4BBE:0:0:13F7:10B0 (ಚರ್ಚೆ) ರ 1101836 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
ಚುNo edit summary
ಟ್ಯಾಗ್: 2017 source edit
೨೪ ನೇ ಸಾಲು:
 
== ಓದು/ವಿದ್ಯಾಭ್ಯಾಸ ==
* ಡಾ.ಜಿ.ಎಸ್.ಶಿವರುದ್ರಪhejejಶಿವರುದ್ರಪ್ಪ [[ಶಿವಮೊಗ್ಗ]]ಜಿಲ್ಲೆಯ [[ಶಿಕಾರಿಪುರ|ಶಿಕಾರಿಪುರದ ]] ತಾಲೂಕಿನ ಈಸೂರುಗ್ರಾಮದಲ್ಲಿ [[ಫೆಬ್ರವರಿ ೭]], [[೧೯೨೬]] ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
* ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. [[ಮೈಸೂರು]] ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ([[೧೯೪೯]]) ಪದವಿ ಪಡೆದರು.
*ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. ([[೧೯೫೩]]) ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -'''ಸೌಂದರ್ಯ ಸಮೀಕ್ಷೆ'''. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.