ಗೋವಿಂದ ಪೈ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೨ ನೇ ಸಾಲು:
 
==ಸಾಹಿತ್ಯ==
*ತಂದೆಯವರ ಮರಣದ ನಂತರ ಹಿರಿಯ ಮಗನಾದ ಇವರ ಮೇಲೆ ಮನೆತನದ ಎಲ್ಲ ಜವಾಬ್ದಾರಿ ಬಿತ್ತು. ಬಿ.ಎ ಪದವಿ ಪೂರ್ಣಗೊಳಿಸಲಿಲ್ಲ. ಮನೆಯಲ್ಲಿಯೇ ಅಮೂಲ್ಯ ಗ್ರಂಥಗಳನ್ನು ತರಿಸಿ ಓದಿದರು. ಕಾಲೇಜಿನಲ್ಲಿದ್ದಾಗ [[ಲ್ಯಾಟಿನ್]] , [[ಫ್ರೆಂಚ್]], [[ಸಂಸ್ಕೃತ|ಸಂಸ್ಕ್ಕತ]], [[ಪಾಳಿ ಭಾಷೆ|ಪಾಳಿ]], [[ಬಂಗಾಳಿ ಭಾಷೆ|ಬಂಗಾಲಿ]], ಭಾಷೆಗಳ ನ್ನು ಅಭ್ಯಸಿಸಿದ್ದರು. ಮನೆಯಲ್ಲಿ ಇನ್ನೂ ಹಲವು ಭಾಷೆಗಳನ್ನು ಅಭ್ಯಸಿಸಿ ಬಹುಭಾಷಾ ಪ್ರವೀಣರಾಗಿದ್ದರು. ಇವರ ಗ್ರಂಥಾಲಯದಲ್ಲಿ ೪೩ ಭಾಷೆಗಳ ಸಾವಿರಾರು ಗ್ರಂಥ ಸಂಗ್ರಹವಿತ್ತು. ಇವರ ಮಾತೃಭಾಷೆ [[ಗೌಡ ಸಾರಸ್ವತ ಬ್ರಾಹ್ಮಣರು|ಕೊಂಕಣಿ]], ಪರಿಸರದ ಭಾಷೆ [[ತುಳು]], ರಕ್ತಗತವಾದ ಭಾಷೆ ಕನ್ನಡ.
*ಕಲಿತದ್ದು ಇಂಗ್ಲೀಷಿನಲ್ಲಿ. [[ಮಲಯಾಳಂ|ಮಲೆಯಾಳ]] ಮತ್ತು [[ತಮಿಳು]] ಆಜು ಬಾಜು ಭಾಷೆಗಳಾಗಿದ್ದವು. ಮರಾಠಿ ಗುಜರಾತಿ ಜರ್ಮನ್ ಗ್ರೀಕ್ ಮೊದಲಾದವು ಆಸಕ್ತ ಭಾಷೆಗಳಾಗಿದ್ದವು. [[ಮರಾಠಿ]], [[ಜರ್ಮನ್]] [[ಗ್ರೀಕ್ ಭಾಷೆ|ಗ್ರೀಕ್]] ಮೊದಲಾದ ಭಾಷೆಗಳನ್ನು ಕಲಿತು ಒಟ್ಟು ೨೫ ಭಾಷೆಗಳಲ್ಲಿ ಪ್ರಾವಿಣ್ಯತೆ ಪಡೆದು ಕೊಂಡಿದ್ದರು. ಗೋವಿಂದ ಪೈಯವರು ನಂತರ ಮಂಜೇಶ್ವರದಲ್ಲಿ ನೆಲಸಿದ್ದರಿಂದ '''ಮಂಜೇಶ್ವರ ಗೋವಿಂದ ಪೈ''' ಎಂದೇ ಹೆಸರು ಗಳಿಸಿದರು.
*ಗೋವಿಂದ ಪೈಗಳು '[[ಗಿಳಿವಿಂಡು]]', '[[ನಂದಾದೀಪ]]' ಎಂಬ ಕಾವ್ಯ ಸಂಕಲನಗಳನ್ನು ಹೊರ ತಂದಿದ್ದಾರೆ. ‘ವೈಶಾಖಿ’ ಹಾಗು ‘ಗೊಲ್ಗೊಥಾ’ ಎನ್ನುವ ಎರಡು ಖಂಡಕಾವ್ಯಗಳನ್ನು ಬರೆದಿದ್ದಾರೆ ‘ಹೆಬ್ಬೆರೆಳು’ ಎನ್ನುವ ಪದ್ಯಗಳನ್ನು ಒಳಗೊಂಡ ಏಕಾಂಕ ನಾಟಕವನ್ನೂ, ‘ಚಿತ್ರಭಾನು’ ಎನ್ನುವ ಗದ್ಯನಾಟಕವನ್ನೂ ಬರೆದಿದ್ದಾರೆ. 'ತಾಯಿ‘, 'ಕಾಯಾಯ್ ಕೊಮಾಜಿ' ಎಂಬ ಸಾಮಾಜಿಕ ನಾಟಕಗಳನ್ನು ಬರೆದದ್ದಲ್ಲದೆ, ಜಪಾನಿನ ನೋ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
*ಅವರ ‘ಕನ್ನಡದ ಮೊರೆ’ ಎಂಬ ಪ್ರಬಂಧ ಸಂಕಲನದಲ್ಲಿ ಅವರು ಬರೆದ ಹಲವು ವ್ಯಕ್ತಿ ಚಿತ್ರಗಳು, ಆತ್ಮಕಥನಗಳು ಮತ್ತು ಭಾಷಣಗಳು ಅಡಕವಾಗಿವೆ. ಪ್ರಬಂಧರೂಪದಲ್ಲಿ ಅವರ 'ಆತ್ಮಕಥನ' ಮೂಡಿಬಂದಿದೆ. ಲೇಖಕನ ಕಷ್ಟನಿಷ್ಟುರಗಳನ್ನು ವರ್ಣಿಸುವ ‘ಬರಹಗಾರನ ಹಣೆಬರಹ’.
ತಮ್ಮ ಗುರುಗಳಾದ ಪಂಜೆಯವರಲ್ಲಿದ್ದ ಪೂಜ್ಯಭಾವದ ಪ್ರತೀಕದಂತಿರುವ 'ಕನಸಾದ ನನಸು', ಒಡನಾಡಿಗಳಾದ ಎಂ.ಎನ್. ಕಾಮತ್, ಕಿಲ್ಲೆ ಅವರ ಸ್ನೇಹದ ಬಗ್ಗೆ ಬರೆದಿರುವ ಅವರ ಬರಹಗಳು, ಎಂ.ಆರ್. ಶ್ರೀನಿವಾಸಮೂರ್ತಿಗಳಿಗೆ ನೆನಪು, ಬೇಂದ್ರೆಯವರಿಗೆ ಐವತ್ತು ದಾಟಿದ್ದಕ್ಕೆ ಸಲ್ಲಿಸಿದ ಹರಕೆ ಇವು ಅವರ ಇನ್ನಿತರ ಪ್ರಬಂಧಗಳಾಗಿವೆ.
೩೧ ನೇ ಸಾಲು:
*ವೈಶಾಖಿ, ಪ್ರಾಕೃತದ ಆಳವಾದ ಅಧ್ಯಯನದ ಫಲ ಗೋಲ್ಗೋಥಾ ಖಂಡ ಕಾವ್ಯಕ್ಕೆ ಗ್ರೀಕ್ ಮೂಲ ಸಾಮಗ್ರಿಯ ಅವಲೋಕನ ಕಾರಣ, ಹೆಬ್ಬೆರಳು ಚಿತ್ರಭಾನು ನಾಟಕಗಳು, ಅಲ್ಲದೆ ‘ ನೋ’ ಎಂಬ ಜಪಾನಿ ನಾಟಕಕಾರನ ಎಂಟು ಕೃತಿಗಳ ಅನುವಾದ ಜೊತೆಗೆ ಸಂಶೋಧನೆ ಮತ್ತು ವಿಮರ್ಶೆ ಮೊದಲಾದವು ಬೆಳಕು ಕಂಡವು. ಅವುಗಳಲ್ಲಿ ಸೃಜನಶೀಲ ಕೃತಿಗಳ ಸಂಖ್ಯೆಯೇ ಅಧಿಕ. ಇವರ ಸಾಂಸಾರಿಕ ಜೀವನ ಸುಖದ ಅವಧಿ ಬಹು ಕಡಿಮೆ. ಹುಟ್ಟಿದ ಒಂದು ಹೆಣ್ಣು ಮಗು ಬೇಗನೆ ತೀರಿ ಹೋಯಿತು. 1927 ರಲ್ಲಿ ಇವರ ಹೆಂಡತಿ ಕೃಷ್ಣಾಬಾಯಿ ಮರಣ ಹೊಂದಿದರು.
*ಆಗ ಪೈಯವರಿಗೆ 44 ವಯಸ್ಸು. ಅವರು ಮರು ಮದುವೆಯಾಗದೆ ವಾನ ಪ್ರಸ್ಥಾಶ್ರಮ ಸ್ವೀಕರಿಸಿದರು. ಅವರ ಜೀವನದಲ್ಲಿ ಅದು ಹೊಸ ತಿರುವು ನೀಡಿತು. ತಮಗಾದ ಅನಾನುಕೂಲವನ್ನು ಅವರು ತಮ್ಮ ಸಾಹಿತ್ಯ ಸೇವೆಗೆ ಪೂರಕವಾಗಿಸಿ ಕೊಂಡರು. ಅವರ ಬಹುತೇಕ ಸಂಶೋಧನ ಕೃತಿಗಳು ಈ ಅವಧಿಯಲ್ಲಿಯೇ ಹೊರ ಬಂದವು. ಕಾಲಮಾನದ ದೃಷ್ಟಿಯಿಂದ ಸೃಜನ, ಅವರ ಪೂರ್ವಾರ್ಧ ಜೀವನದ ಕೃಷಿ, ಸಂಶೋಧನ ಉತ್ತರಾರ್ಧ ಜೀವನದ ಕೃಷಿ.
*ಇನ್ನು ನುಡಿಯಮೆಲಿನ ಅವರ ಅಭಿಮಾನವನ್ನು ಒಂದೆರಡು ಮಾತುಗಳಲ್ಲಿಯೇ ಹೇಳಿ ಮುಗಿಸಬಹುದು. ಅವರ ಮಾತೃಭಾಷೆ ಕೊಂಕಣಿಯಾದರೂ ಅವರ ಕೈಂಕರ್ಯವೆಲ್ಲ ಕನ್ನಡಕ್ಕೆ ಮೀಸಲಾಗಿತ್ತು. |ಈ ಬಗ್ಗೆ ಅವರೇ ಹೇಳಿಕೊಂಡಿರುವ ಮಾತುಗಳು ಮನನೀಯವಾಗಿದೆ. “ನಾನು ಎರಡು ತಾಯಂದಿರ ಕೂಸು. ಕೊಂಕಣಿ ನನ್ನ ಹೆತ್ತ ತಾಯಿ, ಕನ್ನಡ ಸಾಕು ತಾಯಿ…. ಆದರೆ ತಾಯಿಯ ಮೊಲೆಯಲ್ಲಿಹಾಲಿಲ್ಲ. ಕೊಂಕಣಿಯಲ್ಲಿ ಸಾಹಿತ್ಯವಿಲ್ಲ. ಆಕೆ ಆ ಬಗ್ಗೆ ನನ್ನನ್ನು ಕನ್ನಡದ ಮೊರೆಯಲ್ಲಿ ಹಾಕಿದಳು. ಈ ದಾಯಿಯಾದರೆ ಪಯಸ್ವಿನಿ. ಅಷ್ಟು ಕಾಲದಿಂದ ಎಷ್ಟೋ ಕವಿಗಳನ್ನು ಊಡಿಸಿಯೂ ಮತ್ತೂ ಬತ್ತದ, ದೇವರ ದ್ಯೆಯಿಂದ ಸರ್ವದಾ ಬತ್ತಬಾರದ ಸದಾಸ್ನುಹಿ. ತನ್ನ ಮೊಲೆಯನ್ನು ಆಕೆ ತಾಯಿಗೂ ಮಿಕ್ಕ ಅಳ್ತಿಯಿಂದ ನನಗೆ ಉಣಿಸಿದಳು. ಆಕೆಯ ಅಕ್ಕರೆಯ ಸಾಲವನ್ನೂ ಏಳೇಳು ಜನ್ಮಕ್ಕೂ ತೆತ್ತು ತೀರಿಸಲಾರೆ”. ಆಯಾ ಜನರ ಮಾತೃಭಾಷೆಯೇ ಶಿಕ್ಷಣದ ಮಾಧ್ಯಮವಾಗಬೇಕೆಂಬ ತತ್ವವನ್ನು ಒಪ್ಪಿದ್ದ ಪೈ ಅವರು “ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೇ ಬಿಜ್ಜೆ! ಹೆರರ ನಾಲಗೆಯೆಂಜಲೆನ್ನಗಂ ಸವಿಯೋ?” ಎಂದು ಎಚ್ಚರಿಸಿರುವರು. ಎಮ್. ಗೋವಿಂದ ಪೈ ಅವರು ತಮ್ಮ ಕಾವ್ಯ ಪ್ರತಿಭೆಯನ್ನು ಯಾವ ಪಂಥ ಇಲ್ಲವೇ ಪ್ರಚಾರಕ್ಕೂ ಒತ್ತೆ ಇಟ್ಟವರಲ್ಲ.
 
==ಸಂಶೋಧನೆ==
"https://kn.wikipedia.org/wiki/ಗೋವಿಂದ_ಪೈ" ಇಂದ ಪಡೆಯಲ್ಪಟ್ಟಿದೆ