ಕುಂದಾದ್ರಿ ಬೆಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಕುಂದಾದ್ರಿ ಬೆಟ್ಟ'''ವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇ...
( ಯಾವುದೇ ವ್ಯತ್ಯಾಸವಿಲ್ಲ )

೧೧:೫೦, ೯ ಡಿಸೆಂಬರ್ ೨೦೦೯ ನಂತೆ ಪರಿಷ್ಕರಣೆ

ಕುಂದಾದ್ರಿ ಬೆಟ್ಟವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇದೆ. ತೀರ್ಥಹಳ್ಳಿಯಿಂದ ಆಗುಂಬೆ ಕಡೆ ಹೋಗುವಾಗ ಗುಡ್ಡೆಕೇರಿ ಎಂಬ ಗ್ರಾಮದಿಂದ ಸುಮಾರು ೯ ಕಿ.ಮೀ ದೂರದಲ್ಲಿ ಕುಂದಾದ್ರಿ ಬೆಟ್ಟವಿದೆ. ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ ಹಾಗು ನಡೆದು ಹೋಗಲು ಕಾಲು ದಾರಿ ಕೂಡ ಇದೆ. ಕುಂದಾದ್ರಿ ಬೆಟ್ಟವು ಜೈನರ ಪವಿತ್ರ ಯಾತ್ರಾ ಸ್ಥಳವಾಗಿದೆ. ಬೆಟ್ಟದ ಮೇಲೆ ಪಾರ್ಶ್ವನಾಥ ಚೈತ್ಯಾಲಯವಿದೆ. ಇಲ್ಲಿಗೆ ಪ್ರತಿ ವರ್ಶ ಸಾವಿರಾರು ಪ್ರವಾಸಿಗರು ಬೇಟಿ ನೀಡುತ್ತಾರೆ ಹಾಗು ನೂರಾರು ಚಾರಣಿಗರು ಚಾರಣ ಮಾಡಲು ಬರುತ್ತಾರೆ. ಬೆಟ್ಟದ ಮೇಲಿನಿಂದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಹಬ್ಬವಾಗುತ್ತದೆ. ಎಲ್ಲಿ ನೋಡಿದರಲ್ಲಿ ದಟ್ಟ ಕಾಡು, ತೋಟಗಳು, ಹೊಲ-ಗದ್ದೆಗಳು. ಬೆಟ್ಟಕ್ಕೆ ಬೇಟಿ ನೀಡುವವರು ಊಟ ಮತ್ತು ನೀರಿನ ವ್ಯವಸ್ಥೆ ಮಾಡಿಕೊಂಡು ಬಂದರೆ ಉತ್ತಮ.