ರಾಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೯ ನೇ ಸಾಲು:
ರಾಗಿಹಿಟ್ಟಿನಿಂದ ರೊಟ್ಟಿ, ಮುದ್ದೆ, ಉಪ್ಪಿಟ್ಟು , ದೋಸೆ, ಗಂಜಿ, ಹಾಲ್ಬಾಯಿ (ಸಿಹಿ) ಎಂಬ ತಿನಿಸುಗಳನ್ನು ತಯಾರಿಸುತ್ತಾರೆ. ಮಕ್ಕಳ ಪೌಷ್ಟಿಕ ಆಹಾರವೆಂದರೆ- ಒಡ್ಡರಾಗಿಹಿಟ್ಟು. ಇದು ಅತ್ಯಂತ ವಿಟಮಿನ್-ಯುಕ್ತ ಆಹಾರ. ಜೀರ್ಣಿಸಿಕೊಳ್ಳಲು ಸುಲಭ. ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ-ಮುಟ್ಟಾಗಿಯೂ ಇರುತ್ತಾರೆ. ರಾಗಿ ಮಾಲ್ಟನ್ನು ಸರಿಯಾಗಿ ಡಬ್ಬಿಗಳಲ್ಲಿ ಶೇಖರಿಸಿ ಮಾರುವು ಕಂಪೆನಿಗಳು ಚೆನ್ನಾಗಿ ಹಣ ಮಾಡುತ್ತಿವೆ. ಮಧುಮೇಹ(ಡಾಯಾಬೆಟೆಸ್) ರೋಗಿಗಳಿಗೆ ಇದು ವೈದ್ಯರಿಂದ ಶಿಫಾರಿಸ್ ಪಡೆದ ಪೇಯ. ರಾಗಿ ಅರಳನ್ನು ಹುರಿದು, ಅದನ್ನು ನುಣ್ಣಗೆ ಬೀಸಿ ಪುಡಿಮಾಡಿ, ಅದಕ್ಕೆ ಸರಿಯಾದ ಪ್ರಮಾಣದಲ್ಲಿ ಬೆಲ್ಲದ ಪುಡಿಬೆರೆಸಿ, ಹುಣಸೆಹುಳಿ, ಯಾಲಕ್ಕಿಪುಡಿ ಸೇರಿಸಿ,ಸೇವಿಸಿದರೆ, ಬಹಳ ಚೆನ್ನಾಗಿರುತ್ತದೆ. ಅರಳು ಪುಡಿಯನ್ನು ಮೊಸರಿನಲ್ಲಿ ಸೇರಿಸಿ, ಸಕ್ಕರೆ ಅಥವಾ ಬೆಲ್ಲದ ಜೊತೆಯೂ ಸೇವಿಸಬಹುದು.
 
=='''ಪೋಷಕಾಂಶಗಳ ವಿವರ'''==
 
ರಾಗಿ ಅತ್ಯಧಿಕ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳನ್ನೊಳಗೊಂಡಿದೆ. ಇದು ಒಂದು ಉತ್ತಮ ಆಹಾರ ಬೆಳೆಯಾಗಿದ್ದು ಮಕ್ಕಳು ದೊಡ್ದವರೆನ್ನೆದೆ ಉಪಯೋಗಿಸಬಹುದು. ರಾಗಿಮುದ್ದೆ ಅತ್ಯಂತ ಜನಪ್ರಿಯ ಆಹಾರ ಪ್ರಕಾರವಾಗಿದೆ.
"https://kn.wikipedia.org/wiki/ರಾಗಿ" ಇಂದ ಪಡೆಯಲ್ಪಟ್ಟಿದೆ