ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
[[Image:Tyagaraja.jpg|thumb|right|ಶ್ರೀ ತ್ಯಾಗರಾಜರು (೧೭೬೭? - ೧೮೪೭)]]
 
'''ಶ್ರೀ ತ್ಯಾಗರಾಜರು''' [[ಕರ್ನಾಟಕ ಸ೦ಗೀತ]] ಪದ್ಧತಿಯ ಮುಖ್ಯ ರಚನಕಾರರಲ್ಲಿ ಒಬ್ಬರು. [[ಮುತ್ತುಸ್ವಾಮಿ ದೀಕ್ಷಿತ]] ಮತ್ತು [[ಶ್ಯಾಮಾ ಶಾಸ್ತ್ರಿ]] ಇವರ ಜೊತೆಯಲ್ಲಿ ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು. ಅವರು ಶ್ರೀರಾಮನ ಪರಮ ಭಕ್ತರಾಗಿದ್ದರು.
 
==ಜೀವನ==
೯ ನೇ ಸಾಲು:
==ಸಂಗೀತ==
 
ತ್ಯಾಗರಾಜರು ಸಂಗೀತದ ಮೊದಲ ಶಿಕ್ಷಣವನ್ನು ಶ್ರೀ ಸೊಂಟಿ ವೆಂಕಟರಮಣಯ್ಯನವರಿಂದ ಪಡೆದರು. ದೇವರನ್ನು ಅನುಭವಿಸುವ ದಾರಿಯಾಗಿ ಸಂಗೀತವನ್ನು ಕಂಡ ತ್ಯಾಗರಾಜರು ಭಾವ ಪೂರ್ಣ ಸಂಗೀತಕ್ಕೆ ರಾಗ- ಮತ್ತು ತಾಳ-ಬದ್ಧ ಸಂಗೀತಕ್ಕಿ೦ತ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದವರು. ೧೩ ನೆಯ ವಯಸ್ಸಿನಲ್ಲಿಯೇ ತಮ್ಮ ಕೃತಿಗಳಲ್ಲಿ ಒಂದಾದ "ನಮೋ ನಮೋ ರಾಘವ" ವನ್ನು ರಚಿಸಿದರು. ಇವರ "ಎಂದರೋ ಮಹಾನುಭಾವುಲು" ಕೃತಿಯನ್ನು ಕೇಳಿದ ನಂತರ ಸೊಂಟಿ ವೆಂಕಟರಮಣಯ್ಯನವರು ತಂಜಾವೂರಿನ ರಾಜರಿಗೆ ಇವರ ಬಗ್ಗೆ ಶಿಫಾರಸು ನೀಡಿದರು. ಆದರೆ ತ್ಯಾಗರಾಜರು ಮಹಾರಾಜರ ಆಸ್ಥಾನ ಸಂಗೀತಗಾರರಾಗುವ ಆಹ್ವಾನವನ್ನು ನಿರಾಕರಿಸಿದರು. ಅವರು ಶ್ರೀ ನಾರದ ರಿಂದ ತಮ್ಮ ಸಂಗೀತದ ಪಾಂಡಿತ್ಯಕ್ಕಾಗಿ ಆರ್ಶಿವಾದವನ್ನು ಪಡೆದ ಸಂಧರ್ಭದಲ್ಲಿ ಶ್ರೀನಾರದ ಮುನಿ ಕ್ರಿತಿಯನ್ನು ಹಾಡಿದರು ಎಂಬ ನಂಬಿಕೆ.
 
ದಕ್ಷಿಣ ಭಾರತದ ಎಲ್ಲ ಮುಖ್ಯ ದೇವಸ್ಥಾನಗಳಿಗೆ ಭೇಟಿಯಿತ್ತ ತ್ಯಾಗರಾಜರು ಅಲ್ಲಿನ ದೇವ-ದೇವತೆಗಳ ಬಗ್ಗೆ ಕೃತಿಗಳನ್ನು ರಚಿಸಿದ್ದಾರೆ. ಒಟ್ಟು ಅಸಂಖ್ಯಾತ ಕೃತಿಗಳನ್ನು ರಚಿಸಿರುವ ತ್ಯಾಗರಾಜರು ಕರ್ನಾಟಕ ಸಂಗೀತದ ಮೂಲಪುರುಷರಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದಾರೆ.
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ