"ಭಾರತ ಬಿಟ್ಟು ತೊಲಗಿ ಚಳುವಳಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
robot Adding: gu:ભારત છોડો આંદોલન; cosmetic changes
ಚು (robot Adding: gu:ભારત છોડો આંદોલન; cosmetic changes)
'''ಭಾರತ ಬಿಟ್ಟು ತೊಲಗಿ ಚಳುವಳಿ'''ಯು ಒಂದು [[ಅಸಹಕಾರ ಚಳುವಳಿ]]ಯಾಗಿದ್ದು ಆಗಸ್ಟ್ [[೧೯೪೨]]ರಲ್ಲಿ [[ಮಹಾತ್ಮಾ ಗಾಂಧಿ]]ಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. [[೮ ಆಗಸ್ಟ್]] ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ '''ಮಾಡು ಇಲ್ಲವೆ ಮಡಿ''' ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು. ಆದರೆ ಈ ಘೋಷಣೆಯ ೨೪ ಗಂಟೆಗಳೊಳಗೆ ಬಹುತೇಕ ಕಾಂಗ್ರೆಸ್ ನಾಯಕರು ಬಂಧಿತರಾಗಿ ಆ ವರ್ಷವನ್ನು ಕಾರಾಗೃಹದಲ್ಲಿ ಕಳೆಯಬೇಕಾಯಿತು.
[[imageಚಿತ್ರ:QUITIN2.JPG|thumb|[[ಬೆಂಗಳೂರು|ಬೆಂಗಳೂರಿನಲ್ಲಿ]] ಚಳುವಳಿಯ ನೋಟ]]
 
== ಎರಡನೇ ಮಹಾಯುದ್ಧ ಮತ್ತು ಭಾರತದ ಪಾತ್ರ ==
೧೯೪೨ರ ವೇಳೆಯಲ್ಲಿ ಬ್ರಿಟಿಷರು ಭಾರತದ ನಾಯಕರನ್ನು ಲೆಕ್ಕಿಸದೇ ಭಾರತದ ಸೇನೆಯನ್ನು ಎರಡನೇ ಮಹಾಯುದ್ಧದಲ್ಲಿ ಬಳಸಿಕೊಂಡರು. ಇದರಿಂದ ಕುಪಿತರಾದ [[ಸುಭಾಷ್ ಚಂದ್ರ ಬೋಸ್]] [[ಭಾರತೀಯ ರಾಷ್ಟ್ರೀಯ ಸೇನೆ]]ಯನ್ನು [[ಜಪಾನ್|ಜಪಾನೀಯರ]] ಸಹಾಯದಿಂದ ಒಗ್ಗೂಡಿಸಿದರು. ಈ ಸೇನೆಯು [[ಅಸ್ಸಾಂ]], [[ಬಂಗಾಳ]], ಮತ್ತು [[ಬರ್ಮಾ]] ಕಾಡುಗಳಲ್ಲಿ ಛಲದಿಂದ ಹೋರಾಡಿದರೂ ಜಪಾನೀಯರ ಸಹಾಯದ ಕೊರತೆಯಿಂದ ಮತ್ತು ಆಯುಧಗಳ ಕೊರತೆಯಿಂದ ಸೋತುಹೋದರು. ಬೋಸರ ಧೈರ್ಯ-ಸಾಹಸಗಳಿಂದ ಉತ್ತೇಜಿತರಾದ ಹೊಸ ಪೀಳಿಗೆಯ ಭಾರತೀಯರು ಈ ಚಳುವಳಿಯನ್ನು ಸೇರಿದರು.
 
ಎರಡನೇ ಮಹಾಯುದ್ಧ ಪ್ರಾರಂಭವಾದಾಗ, ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿಯು ಬ್ರಿಟಿಷ್ ಸರ್ಕಾರವನ್ನು ಸಮರ್ಥಿಸುವುದೆಂದೂ, ಇದಕ್ಕೆ ಪ್ರತಿಯಾಗಿ ಭಾರತಕ್ಕೆ ಸ್ವಾತಂತ್ರ್ಯ ಕೊಡಬೇಕೆಂದೂ ಬ್ರಿಟಿಷ್ ಸರ್ಕಾರವನ್ನು ಒತ್ತಾಯಿಸಿತು<ref>ಕಾಂಗ್ರೆಸ್ ಪಕ್ಷದ ಅಧಿಕೃತ ವೆಬ್ ಸೈಟ್ ನಲ್ಲಿ ಲೇಖನ ''ಎರಡನೇ ಮಹಾಯುದ್ಧ ಮತ್ತು ಕಾಂಗ್ರೆಸ್'' http://www.aicc.org.in/the_congress_and_the_freedom_movement.htm#the.</ref>. ಆದರೆ ಸರ್ಕಾರ ಇದಕ್ಕೆ ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಪಕ್ಷದ ಈ ನಿಲುವಿಗೆ ಅಹಿಂಸಾವಾದಿಯಾದ ಗಾಂಧೀಜಿಯ ಬೆಂಬಲವಿರಲಿಲ್ಲ. ಅವರಿಗೆ ಬ್ರಿಟಿಷ್ ಸರ್ಕಾರ, ಧೋರಣೆ, ಮತ್ತು ನಾಯಕತ್ವದ ಮೇಲೆ ಅತೀವ ಶಂಕೆಯಿತ್ತು.
 
== ಶೀಘ್ರ ಸ್ವಾತಂತ್ರ್ಯಕ್ಕಾಗಿ ಗೊತ್ತುವಳಿ ==
[[೧೪ ಜುಲೈ]], [[೧೯೪೨]]ರಂದು ಕಾಂಗ್ರೆಸ್ ಪಕ್ಷವು ಬ್ರಿಟನ್ನಿನಿಂದ ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಗೊತ್ತುವಳಿ ಹೊರಡಿಸಿತು. ಈ ಬೇಡಿಕೆ ನೆರವೇರದಿದ್ದರೆ, [[ಅಸಹಾಕಾರ ಚಳುವಳಿ]]ಯನ್ನು ನಡೆಸುವುದಾಗಿಯೂ ಘೋಷಿಸಲಾಯಿತು. ಆದರೆ ಪಕ್ಷದಲ್ಲಿಯೇ ಹಲವಾರು ನಾಯಕರು ಇದನ್ನು ವಿರೋಧಿಸಿದರು. [[ಸಿ ರಾಜಗೋಪಾಲಾಚಾರಿ|ಚಕ್ರವರ್ತಿ ರಾಜಗೋಪಾಲಾಚಾರಿ]]ಯವರು ಈ ಕಾರಣದಿಂದ ಹಲವಾರು ಪ್ರಾದೇಶಿಕ ನಾಯಕರುಗಳೊಂದಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದರು. [[ಜವಾಹರಲಾಲ್ ನೆಹರು]] ಮತ್ತು [[ಮೌಲಾನಾ ಆಜಾದ್]] ಈ ಗೊತ್ತುವಳಿಯನ್ನು ಟೀಕಿಸದರೂ ಕೂಡ ತಮ್ಮ ಬೆಂಬಲ ಸೂಚಿಸಿ ಗಾಂಧೀಜಿಯ ನಾಯಕತ್ವದಲ್ಲಿ ವಿಶ್ವಾಸ ಸೂಚಿಸಿದರು. [[ಸರ್ದಾರ್ ಪಟೇಲ್]] ಮತ್ತು ಡಾ. [[ರಾಜೇಂದ್ರ ಪ್ರಸಾದ್]] ಈ ನಿಲುವಳಿಯನ್ನು ಬಹಿರಂಗವಾಗಿ ಬೆಂಬಲಿಸಿದರು.
 
[[೮ ಆಗಸ್ಟ್]], [[೧೯೪೨]]ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮುಂಬೈ ಅಧಿವೇಶನದಲ್ಲಿ '''ಭಾರತ ಬಿಟ್ಟು ತೊಲಗಿ''' ಎಂಬ ಗೊತ್ತುವಳಿಯನ್ನು ಹೊರಡಿಸಲಾಯಿತು. ಗಾಂಧೀಜಿಯವರು ಮುಂಬಯಿಯ ಗೊವಾಲಿಯ ಮೈದಾನದಲ್ಲಿ ಭಾರತೀಯರಿಗೆ ಅಹಿಂಸಾತ್ಮಕ ಅಸಹಾಕಾರ ಮಾಡುವಂತೆ ಕರೆ ಕೊಟ್ಟರು. ಜನರಿಗೆ ಬ್ರಿಟಿಷ ಸರ್ಕಾರವನ್ನು ಅನುಸರಿಸದೇ ಸ್ವತಂತ್ರರಾಗಿ ಬಾಳುವುದಕ್ಕೆ ಕರೆಕೊಟ್ಟರು. ಗಾಂಧೀಜಿಯವರ ಈ ಕರೆಗೆ ಭಾರತೀಯರು ಬೃಹತ್ ಸಂಖ್ಯೆಯಲ್ಲಿ ಓಗೊಟ್ಟರು. ಬೆಂಬಲ ಸೂಚಿಸಿದವರಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ತತ್ವದ ವಿರೋಧಿಗಳಾದ ಕ್ರಾಂತಿಕಾರಿಗಳೂ ಸೇರಿದ್ದರು.
 
== ಚಳುವಳಿಯ ನಿಗ್ರಹ ==
 
 
[[imageಚಿತ್ರ:QUITIN5.JPG|right|thumb|[[ಬೆಂಗಳೂರು]] ವೈದ್ಯಕೀಯ ಕಾಲೇಜಿನ ಎದುರು ಧರಣಿ]]
[[ಜಪಾನ್|ಜಪಾನಿ]] ಸೇನೆಯು ಭಾರತದ [[ಬರ್ಮಾ]] ಗಡಿಯ ಬಳಿ ತಲುಪಿದ್ದನ್ನು ಕಂಡ ಬ್ರಿಟಿಷರು ಮರುದಿನವೇ ಗಾಂಧಿಯವರನ್ನು ಬಂಧಿಸಿದರು. ಕಾಂಗ್ರೆಸ್ಸಿನ ಎಲ್ಲ ರಾಷ್ಟ್ರೀಯ ನಾಯಕರನ್ನೂ ಬಂಧಿಸಲಾಯಿತು. ನಂತರ ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಲಾಯಿತು. ಇದರಿಂದ ಜನರಲ್ಲಿ ವಿರೋಧಿ ಭಾವನೆ ಇನ್ನೂ ಹೆಚ್ಚಾಯಿತು. ಪಕ್ವ ನಾಯಕತ್ವದ ಅಭಾವದ ಹೊರತಾಗಿಯೂ ಬೃಹತ್ ಪ್ರಮಾಣದಲ್ಲಿ ವಿರೋಧ ಪ್ರದರ್ಶನ ಮತ್ತು ಧರಣಿಗಳು ನಡೆದವು. ಆದರೆ ಎಲ್ಲ ವಿರೋಧಗಳು ಅಹಿಂಸಾತ್ಮಕವಾಗೇನೂ ಉಳಿಯಲಿಲ್ಲ. ಬಾಂಬುಗಳನ್ನು ಸ್ಫೋಟಿಸಲಾಯಿತು, ಸರ್ಕಾರೀ ಕಟ್ಟಡಗಳನ್ನು ಸುಡಲಾಯಿತು, ವಿದ್ಯುತ್ತನ್ನು ನಿಲ್ಲಿಸಲಾಯಿತು, ಮತ್ತು ಸಾರಿಗೆ ಮತ್ತು ಸಂಪರ್ಕಗಲನ್ನು ಕಡಿಯಲಾಯಿತು.
 
ಆದರೆ ಬ್ರಿಟಿಷರು ತ್ವರಿತವಾಗಿ ಪ್ರದರ್ಶನಕಾರರನ್ನು ಬಂಧಿಸಿದರು. ಒಂದು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಂಧಿಸಲಾಯಿತು, ಬೃಹತ್ ಪ್ರಮಾಣದಲ್ಲಿ ದಂಡಗಳನ್ನು ವಿಧಿಸಲಾಯಿತು, ಬಾಂಬುಗಳನ್ನು ವಿರೋಧಿಗಳ ಮೇಲೆ ಬಳಸಲಾಯಿತು, ಮತ್ತು ಪ್ರದರ್ಶನಾಕಾರರನ್ನು ಸಾರ್ವಜನಿಕವಾಗಿ ದಂಡಿಸಲಾಯಿತು. ಬಹಳಷ್ಟು ರಾಷ್ಟ್ರೀಯ ನಾಯಕರು ಭೂಗತರಾಗಿ [[ರೇಡಿಯೋ]] ಸ್ಟೇಷನ್ ಗಳಿಂದ ಜನರಿಗೆ ಸಂದೇಶ ಕೊಡುತ್ತಿದ್ದರು. ಬ್ರಿಟಿಷರು ಇದರಿಂದ ಎಷ್ಟು ಕಂಗಾಲಾಗಿದ್ದರೆಂದರೆ, ಗಾಂಧೀಜಿ ಮತ್ತು ಇತರ ನಾಯಕರನ್ನು ಬಂಧಿಸಿ [[ದಕ್ಷಿಣ ಆಫ್ರಿಕಾ]] ಅಥವಾ ಯೆಮೆನ್ ದೇಶಕ್ಕೆ ಕೊಂಡೊಯ್ಯಲು ಯುದ್ಧನೌಕೆಯನ್ನು ಕರೆಸುವ ಏರ್ಪಾಡು ಮಾಡಲಾಯಿತು. ಆದರೆ ಇದರಿಂದ ಸಂಘರ್ಷಣೆ ಇನ್ನೂ ತೀವ್ರವಾಗುವುದೆಂಬ ಭಯದಿಂದ ಹೀಗೆ ಮಾಡದಿರಲು ನಿರ್ಧಾರ ಮಾಡಲಾಯಿತು. {{fact}}.
೧೯೪೪ರ ಪ್ರಾರಂಭದಲ್ಲಿ ಭಾರತ ಬಹುತೇಕವಾಗಿ ಶಾಂತವಾಗಿತ್ತು. ಚಳುವಳಿಯು ಸೋತುಹೋಯಿತೆಂಬ ನಂಬಿಕೆ ವ್ಯಾಪಕವಾಯಿತು. ಆದರೆ ಜಿನ್ನಾ ಮತ್ತು ಮುಸ್ಲಿಮ್ ಲೀಗ್ ಹಾಗೂ ಕಾಂಗ್ರೆಸ್ಸಿನ ಇತರ ವಿರೋಧಿಗಳಾದ ಕಮ್ಯೂನಿಸ್ಟರು ಮತ್ತು ಹಿಂದೂ ಕ್ರಾಂತಿಕಾರಿಗಳು ಗಾಂಧೀಜಿ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ರಾಜಕೀಯ ಲಾಭ ಪಡೆಯಲು ಹವಣಿಸಿದರು.
 
== ಸ್ವಾತಂತ್ರ್ಯಕ್ಕಾಗಿ ಚಳುವಳಿಯ ಕಾಣಿಕೆ ==
 
ಕೆಲವು ಚರಿತ್ರೆಕಾರರ ಪ್ರಕಾರ ಈ ಚಳುವಳಿಗೆ ಸೋಲುಂಟಾಯಿತು. ಕಾಂಗ್ರೆಸ್ ಪಕ್ಷವೂ ಕೂಡ ಆಗ ಇದೇ ನಿಲುವನ್ನು ಹೊಂದಿತ್ತು. ಸರ್ಕಾರದ ಕಾರ್ಯವನ್ನು ನಿಲ್ಲಿಸಿವ ಇರಾದೆಯಲ್ಲಿ ಸೋಲುಂಟಾದರೂ, ಸರ್ಕಾರಕ್ಕೆ ಇದರಿಂದ ಸಾಕಷ್ಟು ಮುಜುಗರ ಮತ್ತು ಆತಂಕ ಉಂಟಾದವು. ಶೀಘ್ರವಾಗಿ ಸ್ವಾತಂತ್ರ್ಯ ಪಡೆಯುವುದರಲ್ಲಿ ಇದು ವಿಫಲವಾಯಿತು. ಆರಂಭದ ಐದು ತಿಂಗಳಲ್ಲಿಯೇ ಬಹುತೇಕವಾಗಿ ಸ್ತಬ್ಧವಾಯಿತು. ಇದಕ್ಕಿದ್ದ ಒಂದೇ ಕಾರಣವೆಂದರೆ ಸರ್ಕಾರದ ಪರವಾಗಿ ಸೇನೆಗಿದ್ದ ಸ್ವಾಮಿತ್ವ. ಬ್ರಿಟಿಷ್ ಪ್ರಧಾನಮಂತ್ರಿ ಕ್ಲೆಮೆಂಟ್ ಅಟ್ಲೀ ಪ್ರಕಾರ ಈ ಚಳುವಳಿಯ ಕಾಣಿಕೆ ಅತೀ ಕಡಿಮೆಯದ್ದಾಗಿತ್ತು. ಆದರೆ ಭಾರತೀಯ ವಾಯುಪಡೆಯ ಅತೃಪ್ತಿಯನ್ನು ಮುಖ್ಯವಾಗಿ ಉದಾಹರಿಸುತ್ತಾರೆ.
ಒಂದು ಹೊಸ ಯುವ ಪೀಳಿಗೆಯು ಗಾಂಧೀಜಿಯವರ ಕರೆಗೆ ಓಗೊಟ್ಟಿತ್ತು. ಈ ಚಳುವಳಿಯಲ್ಲಿ ಹೋರಾಡಿದ ಭಾರತೀಯರು ಸ್ವತಂತ್ರ ಭಾರತದ ಪ್ರಥಮ ಪೀಳಿಗೆಯವರಾಗಿ ವಸಾಹತುಶಾಹಿ ಕಾಲದ ನಂತರ ಪ್ರಪಂಚದ ಅತಿ ಗಟ್ಟಿಯಾದ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಇದನ್ನು ಮಾನವಕುಲದ ದೂರದರ್ಶಿತ್ವದ ಮಹತ್ತರ ಉದಾಹರಣೆಯೆಂದು ಹೇಳಬಹುದು.
 
== ಟಿಪ್ಪಣಿ ==
 
<references/>
== ಹೊರಗಿನ ಸಂಪರ್ಕಗಳು ==
* [http://www.ibiblio.org/pha/policy/1942/420427a.html ಮಹಾತ್ಮಾ ಗಾಂಧಿಯವರ 'ಭಾರತ ಬಿಟ್ಟು ತೊಲಗಿ' ನಿರ್ಣಯ]
 
== ಇವನ್ನೂ ನೋಡಿ ==
* [[ಭಾರತದ ಸ್ವಾತಂತ್ರ್ಯ ಚಳುವಳಿ]]
* [[ಅಸಹಕಾರ ಚಳುವಳಿ]]
[[en:Quit India Movement]]
[[fr:Quit India]]
[[gu:ભારત છોડો આંદોલન]]
[[hi:भारत छोड़ो आन्दोलन]]
[[ml:ക്വിറ്റ് ഇന്ത്യ പ്രസ്ഥാനം]]
೧೬,೩೭೬

edits

"https://kn.wikipedia.org/wiki/ವಿಶೇಷ:MobileDiff/161720" ಇಂದ ಪಡೆಯಲ್ಪಟ್ಟಿದೆ