ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸ್ವಲ್ಪ restructuring
೧೧ ನೇ ಸಾಲು:
ಮಾರ್ಗಶೀರ್ಷ ಮಾಸದ ಹೋಳಿ ಹುಣ್ಣಿಮೆಯಾದ ೧೫ ದಿನಗಳಿಗೆ ಬರುವುದು ಯುಗಾದಿ. ಯುಗ ಎಂದರೆ ಅದೊಂದು ಕಾಲಗಣನೆ. ತ್ರೇತಾಯುಗ, ಕೃತಯುಗ, ದ್ವಾಪರಯುಗ, ಕಲಿಯುಗಗಳಿಗೆ ಯುಇಗವೆಂದರೆ ೫೦೦೦ಕ್ಕೂ ಹೆಚ್ಚಿನ ವರುಷಗಳಂತೆ. ಆದರೆ ಇಲ್ಲಿ ಹಾಗಲ್ಲ. ಕಾಲದ ಒಂದು ಭಾಗ ಮತ್ತೆ ಪ್ರಾರಂಭವಾಗುತ್ತಿದೆ ಎಂಬುದರ ಸೂಚನೆಯಷ್ಟೆ. ವಸಂತ ಋತುವಿನಿಂದ ಪ್ರಾರಂಭಗೊಂಡ ಕಾಲಗಣನೆ ಶಿಶಿರದಲ್ಲಿ ಮುಕ್ತಾಯಗೊಂಡು ಮತ್ತೆ ವಸಂತ ಪ್ರಾರಂಭವಾಗುತ್ತಿರುವುದರ ಸೂಚನೆ. ಇಂತಹ ಯುಗದ ಅಂದರೆ ವರುಷದ ಮೊದಲನೆಯ ದಿನವನ್ನು ಯುಗಾದಿ ಎಂದು ಗುರುತಿಸಿ ಹಬ್ಬವನ್ನಾಗಿ ಆಚರಿಸುವರು.
 
ಚಾಂದ್ರಮಾನ ಪಂಚಾಂಗ ರೀತ್ಯಾ ಚೈತ್ರ ಮಾಸದ ಶುದ್ಧ ಪಾಡ್ಯದ ದಿನದಂದು ಬ್ರಹ್ಮ ಈ ಲೋಕವನ್ನು ಸೃಷ್ಟಿಸಿದ ಎಂಬ ಪ್ರತೀತಿ ಇದೆ. ಇಂದೇ ಸೂರ್ಯನು ತನ್ನ ಮೊದಲ ಕಿರಣವನ್ನು ಭೂಮಿಯ ಮೇಲೆ ಹರಿಸಿದ ಎಂಬ ಮಾತೂ ಇದೆ. ಇವೆಲ್ಲವೂ ಇಂದು ನಂಬಲಶಕ್ಯ. ಆದರೂ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸ್ವಲ್ಪವಾದರೂ ತಿಳಿದಿರಲಿ ಎಂದು ಹೇಳಬೇಕಿದೆ. ಇಂದಿನ ದಿನದಿಂದ ವಸಂತ ಮಾಸ ಪ್ರಾರಂಭವಾಗಿ ತರು ಲತೆಗಳು ಚಿಗುರುತ್ತವೆ. ಹೊಸ ಹೊಸ ಹೂಗಳು ಕಂಪನ್ನು ಬೀರುತ್ತವೆ. ಹಳೆಯ ತರಗೆಲೆಗಳು ಉದುರಿ ಗಿಡ ಮರಗಳು ಮತ್ತೆ ಮರಳಿ ಹೊಸ ಚೈತನ್ಯ ಪಡೆಯುತ್ತವೆ. ಜೀವನದಲ್ಲಿ ಒಂದು ವರುಷಗಳಲ್ಲಿ ಕಂಡ ಸುಖ ದು:ಖಗಳನ್ನು ಮರೆತು ಹೊಸ ಬಾಳನ್ನು ನೋಟ್‍ಬುಕ್ಕಿನ ಹೊಸ ಪುಟದಂತೆ ಪ್ರಾರಂಭಿಸುವ ಸೂಚನೆಯ ಈ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ.
 
ಇಂದಿನ ದಿನ ಶ್ರೀರಾಮನು ರಾವಣನನ್ನು ಜಯಿಸಿ ಮರಳಿ ಅಯೋಧ್ಯೆಗೆ ಬಂದು ರಾಜ್ಯಭಾರ ಮಾಡಿದನೆಂದು ಪ್ರತೀತಿ. ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
೨೭ ನೇ ಸಾಲು:
ಬೇವು ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:
 
''ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|''
''ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||''
 
ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯೆ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.
 
 
== ಕನ್ನಡೇತರರಲ್ಲಿ ಯುಗಾದಿಯ ದಿನ ==
ಯುಗಾದಿಯ ದಿನವು ಕೆಲವು ಕನ್ನಡೇತರರಿಗೂ ಹೊಸ ವರ್ಷದ ಹಬ್ಬ.
* ಆಂಧ್ರದಲ್ಲಿ "ಯುಗಾದಿ"
* ಮಹಾರಾಷ್ಟ್ರದಲ್ಲಿ ಇದೇ ದಿನವು "ಗುಡಿ ಪಡುವ" ಅಂದರೆ ಬೇವು-ಬೆಲ್ಲ ಆಗುರುತ್ತೆ.
 
[[Category:ಹಬ್ಬಗಳು]][[Category:ಪ್ರಮುಖ ದಿನಗಳು]]
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ