ಪಂಚಾಕ್ಷರಿ ಗವಾಯಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
೩ ನೇ ಸಾಲು:
 
ಗದಿಗೆಯ್ಯ ಹಾಗು ಇವರ ಅಣ್ಣ ಗುರುಬಸಯ್ಯ ಇಬ್ಬರೂ ಹುಟ್ಟುಕುರುಡರು. ಸ್ಥಳೀಯವಾಗಿ ಸಾಧ್ಯವಿದ್ದ ಸಂಗೀತ ಶಿಕ್ಷಣವನ್ನು ಪಡೆದಿದ್ದರು. ಒಮ್ಮೆ ಶ್ರೀ ಹಕ್ಕಲ ಬಸವೇಶ್ವರ ಜಾತ್ರೆಯಲ್ಲಿ ಹಾಡುತ್ತಿದ್ದ ಈ ಕುರುಡು ಬಾಲಕರ ಹಾಡು ಕೇಳಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು ಈ ಎಳೆಯರನ್ನು ತಮ್ಮ ಉಡಿಯಲ್ಲಿ ಹಾಕಿಕೊಂಡರು.
 
==ಸಂಗೀತ ಶಿಕ್ಷಣ==
ಅಣ್ಣತಮ್ಮಂದಿರಿಬ್ಬರಿಗೂ ಅನೇಕ ಗುರುಗಳಿಂದ ಸಂಗೀತ ಶಿಕ್ಷಣ ದೊರೆಯಿತು. ಶ್ರೀ ಕುಮಾರಸ್ವಾಮಿಗಳು ಹಳ್ಳಿಹಳ್ಳಿಗಳಲ್ಲಿ ಭಿಕ್ಷೆ ಎತ್ತಿ ನೆಲವಿಗಿಯಲ್ಲೊಂದು ಶಿವಯೋಗ ಮಂದಿರ ಸ್ಥಾಪಿಸಿದ್ದರು. ಅಲ್ಲಿ ಇತರ ಹುಡುಗರ ಜೊತೆಗೆ ಈ ಹುಡುಗರೂ ಸಹ ಸಂಗೀತಾಭ್ಯಾಸ ಮಾಡುತ್ತಿದ್ದಾಗ ಅಣ್ಣ ಗುರುಬಸಯ್ಯ ಕಾಲರಾ ರೋಗದಿಂದ ಮರಣವನ್ನಪ್ಪಿದ.
Line ೯ ⟶ ೮:
ಗದಿಗೆಯ್ಯನಿಗೆ ಹದಿನೆಂಟು ವರ್ಷವಾದಾಗ [[ಮೈಸೂರು|ಮೈಸೂರಿನಲ್ಲಿ]] ಗೌರಿಶಂಕರ ಸ್ವಾಮಿಗಳಲ್ಲಿ ಕರ್ನಾಟಕ ಸಂಗೀತ ವಿದ್ಯಾಭ್ಯಾಸವಾಯಿತು. ನಾಲ್ಕು ವರ್ಷ [[ಮೈಸೂರು|ಮೈಸೂರಿನಲ್ಲಿ]] ಜೋಳಿಗೆ ಹಿಡಿದು ಹೊಟ್ಟೆ ತುಂಬಿಸಿಕೊಂಡ ಗದಿಗೆಯ್ಯನವರು, ಆ ಬಳಿಕ [[ಬಾಗಲಕೋಟ್|ಬಾಗಿಲುಕೋಟೆ]]ಯಲ್ಲಿ ನಡೆಯುತ್ತಿದ್ದ ಅಖಿಲ ಭಾರತ ವೀರಶೈವ ಮಹಾಸಭೆಯ ಅಧಿವೇಶನದಲ್ಲಿ ಶ್ರೀ ಕುಮಾರಸ್ವಾಮಿಗಳಿಂದ “ಪಂಚಾಕ್ಷರಿ ಗವಾಯಿ” ಎಂದು ಉದ್ಘೋಷಿತರಾದರು. ಆ ಬಳಿಕ ಸಹ ಮತ್ತೆ ನಾಲ್ಕು ವರ್ಷ ಹಿಂದುಸ್ತಾನಿ ಸಂಗೀತವನ್ನು ಅಭ್ಯಸಿಸಿ ಉಭಯ ಸಂಗೀತ ಪಂಡಿತರಾದರು.
 
ಸಂಗೀತದ ಮೂಲಕವೆ ಸಮಾಜಸೇವೆ ಮಾಡಲು ಬಯಸಿದ್ದ ಪಂಚಾಕ್ಷರಿ ಗವಾಯಿಗಳು ಕಂಚಗಲ್ ಬಿದಿರೆ ಗ್ರಾಮದ ಪ್ರಭುಕುಮಾರ ಶಿವಾಚಾರ್ಯರಿಂದ ಶಿವದೀಕ್ಷೆ ಪಡೆದು ಆಧ್ಯಾತ್ಮಮಾರ್ಗದಲ್ಲೂ ಮುನ್ನಡೆದರು.
 
==ಸಂಗೀತ ಪ್ರಚಾರ==
ಪಂಚಾಕ್ಷರಿ ಗವಾಯಿಗಳು ನಾಡಿನಲ್ಲೆಲ್ಲ ಸಂಚರಿಸುತ್ತ ಒಂದು ಸಂಚಾರೀ ಪಾಠಶಾಲೆಯನ್ನು ಪ್ರಾರಂಭಿಸಿದರು. [[೧೯೧೪]]ರಲ್ಲಿ [[ಗದಗ್|ಗದಗ]] ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಕೊಪ್ಪದಲ್ಲಿ ಶಿವಯೋಗ ಮಂದಿರದ ಶಾಖೆಯಾಗಿ ಸಂಗೀತ ಶಾಲೆಯೊಂದನ್ನು ಪ್ರಾರಂಭಿಸಿದರು. ಈ ಸಂಗೀತಶಾಲೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಗಳನ್ನು ಸಹ ಹೇಳಿಕೊಡಲಾಗುತ್ತಿತ್ತು. ಇವರ ಶಿಷ್ಯರಲ್ಲಿ ಇವರ ಉತ್ತರಾಧಿಕಾರಿಯಾಗಿ ದೊರೆತ, ಪ್ರಸಿದ್ಧ ಗವಾಯಿ ಪುಟ್ಟರಾಜರೂ ಸಹ ಕುರುಡರೇ! ಸಂಗೀತಶಾಲೆಗಳ ಖರ್ಚು ತೂಗಿಸಲು ನಾಟಕ ಕಂಪನಿಯೊಂದನ್ನು ಪ್ರಾರಂಭಿಸಿ ಕೈಸುಟ್ಟುಕೊಂಡದ್ದೂ ಆಯಿತು. ಈ ನಡುವೆ ೧೯೩೦ರಲ್ಲಿ ಪಂಚಾಕ್ಷರಿ ಗವಾಯಿಗಳ ರೂವಾರಿಯಾಗಿದ್ದ ಹಾನಗಲ್ ಕುಮಾರಸ್ವಾಮಿಗಳು ಲಿಂಗೈಕ್ಯರಾದರು. ಇದೇ ಸಮಯದಲ್ಲಿ ಬರಗಾಲ ಬಿದ್ದದ್ದರಿಂದ ಪಂಚಾಕ್ಷರಿ ಗವಾಯಿಗಳು ತಮ್ಮ ಶಿಷ್ಯರಿಗಾಗಿ ಪಟ್ಟ ಪಾಡು ಅಷ್ಟಿಷ್ಟಲ್ಲ. ಆಗ ಮುಂದೆ ಬಂದು ನೆರವು ನೀಡಿದವರು ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ [[ಗದಗ್|ಗದಗಿನಲ್ಲಿಯೇ]] ತಮ್ಮ ಜಾಗದಲ್ಲಿ ಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟು, ಧನ-ಧಾನ್ಯದ ಸಹಾಯವನ್ನು ಸಹ ನೀದಿದರು. ಈ ಸಂಗೀತಶಾಲೆಗೆ ಗವಾಯಿಗಳು “ ಶ್ರೀ ವೀರೇಶ್ವರ ಪುಣ್ಯಾಶ್ರಮ” ಎಂದೇ ಹೆಸರಿಟ್ಟರು.
 
==ಕನ್ನಡ ಪ್ರೇಮಿ==
ಎಚ್.ಎಮ್.ವಿ. ಕಂಪನಿಯವರು ಖ್ಯಾತ ಕಲಾವಿದರ ಗಾನಮುದ್ರಿಕೆಗಳನ್ನು ಹೊರತರುವ ಸಲುವಾಗಿ ಅನೇಕ ಕಲಾವಿದರನ್ನು [[ಮುಂಬಯಿ|ಮುಂಬಯಿಗೆ]] ಕರೆಸಿದ್ದರು. [[ಕನ್ನಡ| ಕನ್ನಡದಲ್ಲಿಯೇ]] ಗಾಯನ ಮಾಡುವದಾಗಿ ಹಟ ಮಾಡಿದ ಪಂಚಾಕ್ಷರಿ ಗವಾಯಿಗಳು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದಾಗ, ಕಂಪನಿಯವರು ಗವಾಯಿಗಳ ಆಗ್ರಹಕ್ಕೆ ಮಣಿಯಲೇ ಬೇಕಾಯಿತು.
 
==ಸ್ವದೇಶಾಭಿಮಾನಿ==
ಪಂಚಾಕ್ಷರಿ ಗವಾಯಿಗಳು ಖಾದಿಯನ್ನೇ ತೊಡುತ್ತಿದ್ದರು. ಉದರ ರೋಗದಿಂದ ಬಳಲುತ್ತಿರುವಾಗ ಆಯುರ್ವೇದದ ಹೊರತಾಗಿ, ಇಂಗ್ಲಿಷ್ ವೈದ್ಯಕೀಯಕ್ಕೆ ಗವಾಯಿಗಳು ಒಪ್ಪಿಕೊಳ್ಳಲಿಲ್ಲ. ಕೊನೆಗೂ ಇದೇ ರೋಗಕ್ಕೆ ಗವಾಯಿಗಳು ಬಲಿಯಾದರು.
 
==ನಿಧನ==
ಸುಮಾರು ನಾಲ್ಕು ವರ್ಷಗಳವರೆಗೆ ಗವಾಯಿಗಳು ಉದರ ರೋಗದಿಂದ ಬಳಲಿದರು. ಕೊನೆಗೆ ದಿನಾಂಕ ೧೧, ಜೂನ್ [[೧೯೪೪]]ರಂದು ಪಂಚಾಕ್ಷರ ಗವಾಯಿಗಳು ವಿಶ್ವಸಂಗೀತದಲ್ಲಿ ಲೀನರಾದರು.