ಶಿವರಾಮ ಕಾರಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕಾರಂತರಿಗೊಂದು Infobox
೨೬ ನೇ ಸಾಲು:
 
==ಜೀವನ==
[[ಜ್ಞಾನಪೀಠ]] ಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು [[ಉಡುಪಿ]] ಜಿಲ್ಲೆಯ ಕೋಟದಲ್ಲಿ [[೧೯೦೨]], [[ಅಕ್ಟೋಬರ್ ೧೦]]ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿ ಬಾಳಿ, ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮ ಕಾರಂತರು [[೧೯೯೭]], ಡಿಸೆಂಬರ್ ೦೯ ರಂದು ನಿಧನ ಹೊಂದಿದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು.
 
ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ದಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು ಅವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಳನ್ನು ಮಾಡಿದ್ದರು. ತಾವೇ ಸ್ವತ: ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು. ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೈಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಮಕ್ಕಳಲ್ಲಿ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು.
ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. [[ಕರ್ನಾಟಕ]]ದ ಮೂಲೆ ಮೂಲೆ, [[ಭಾರತ | ಭಾರತದ]] ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ಸಾವಿನ ಹಿಂದಿನ ನಾಲ್ಕಾರು ದಿನಗಳವರೆಗೂ ಪ್ರವಾಸ ಮಾಡಿದ್ದರು.
 
ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. [[ಕರ್ನಾಟಕ]]ದ ಮೂಲೆ ಮೂಲೆ, [[ಭಾರತ | ಭಾರತದ]] ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ಸಾವಿನತಮ್ಮ ಹಿಂದಿನ ನಾಲ್ಕಾರು ದಿನಗಳವರೆಗೂಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು.
 
[[ಜ್ಞಾನಪೀಠ]], [[ಪದ್ಮಭೂಷಣ]], [[ಪಂಪ ಪ್ರಶಸ್ತಿ]], [[ನಾಡೋಜ ಪುರಸ್ಕಾರ]], ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ "ಕಾರಂತಜ್ಜ" ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
"https://kn.wikipedia.org/wiki/ಶಿವರಾಮ_ಕಾರಂತ" ಇಂದ ಪಡೆಯಲ್ಪಟ್ಟಿದೆ