ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಕೆಲವು ಅಂಕಿ ಸರಿಪಡಿಸುವಿಕೆ
೨ ನೇ ಸಾಲು:
ಅತ್ಯಂತ ಸಹಜವಾದ ಅಭಿನಯದಿಂದ ಚಿತ್ರಪ್ರೇಮಿಗಳ ಮನಸೆಳೆದಿದ್ದ ಲೀಲಾವತಿ ಅವರ ನಿಜ ನಾಮಧೇಯ ಲೀಲಾ ಕಿರಣ್.
 
ಅವರು 1949ರಲ್ಲಿ೧೯೪೯ರಲ್ಲಿ 'ನಾಗಕನ್ನಿಕಾ' ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರು ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ನಾಯಕಿಯಾಗಿ ಅವರು ಅಭಿನಯಿಸಿದ ಪ್ರಥಮ ಚಿತ್ರ 'ಮಾಂಗಲ್ಯ ಯೋಗ.' ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ 'ರಣಧೀರ ಕಂಠೀರವ.'
 
'ರಾಣಿ ಹೊನ್ನಮ್ಮ' ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯತೆ ಗಳಿಸುತ್ತಾ ಸಾಗಿತು. 70ರ ದಶಕದ ನಂತರ ನಾಯಕಿ ಪಾತ್ರಗಳಿಂದ ಹಿಂದೆ ಸರಿದು ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಮಮತಾಮಯಿ ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪಾತ್ರಗಳಲ್ಲಿ ಅನೇಕ ಪಾತ್ರಗಳಿಗೆ ಜೀವ ತುಂಬಿದ್ದಾರೆ.
 
'ಗೆಜ್ಜೆ ಪೂಜೆ', 'ಸಿಪಾಯಿ ರಾಮು', ಮತ್ತು 'ಡಾಕ್ಟರ್ ಕೃಷ್ಣ' ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕಾಗಿ ಲೀಲಾವತಿಯವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುಮಾರು ೫00೫೦೦ ಚಿತ್ರಗಳಿಗಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೀಲಾವತಿಯವರು ನಿರ್ಮಾಪಕಿಯಾಗಿಯೂ ಚಿತ್ರರಂಗಕ್ಕೆ ಅನನ್ಯ ಕಾಣಿಕೆ ನೀಡಿದ್ದಾರೆ. ಎರಡು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ್ದಾರೆ. ಲೀಲಾವತಿಯವರಿಗೆ 'ಡಾ. ರಾಜ್ ಕುಮಾರ್' ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಗೌರವಿಸಿದೆ.ಕನ್ನಡ ಚಿತ್ರರಂಗಕ್ಕೆ ಇವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತುಮಕೂರು ವಿಶ್ವವಿದ್ಯಾಲಯ ೨೦೦೮ ಜನವರಿ 9ರಂದು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದೆ. ೨೦೧೦ ರಲ್ಲಿ 7ನೇ೭ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಪಡೆದಿದ್ದಾರೆ.
ನೆಲಮಂಗಲ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ರಕ್ಷಣೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಕಟ್ಟಿಸಿದ್ದಾರೆ.
==ಲೀಲಾವತಿ ಅಭಿನಯದ ಕೆಲವು ಚಿತ್ರಗಳು==
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ