ಕೆ ಎಸ್ ಅಶ್ವಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
[[ಚಿತ್ರ:Ksashwath1.png]]
 
೧೯೫೫ರಲ್ಲಿ ನಿರ್ಮಾಣವಾದ "ಸ್ರೀ ರತ್ನ "ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ ಅವಧಿಯಲ್ಲಿ ೩೫೦ಕ್ಕಿಂತಲೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟ. ಶಿಸ್ತು, ಸಮಯಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರ ನಿರ್ಮಾಣವಲಯದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾದ ವ್ಯಕ್ತಿ ಅಶ್ವತ್ಥ್. ಅವರ ಹಿರಿಯರು ಹೊಳೆನರಸೀಪುರ ತಾಲ್ಲೂಕಿನ ಕರಗದಹಳ್ಳಿಯವರು. ತಂದೆ ಸುಬ್ಬರಾಯರು. ಮಾರ್ಚ್ ೨೫, ೧೯೨೫ರಲ್ಲಿ ಜನನ. ಮೊದಲ ಹೆಸರು ಅಶ್ವತ್ಥನಾರಾಯಣ. ಚಿತ್ರರಂಗಕ್ಕೆ ಬಂದ ನಂತರ ನಾರಾಯಣ ಕಳಚಿಕೊಂಡಿತು. ಓದಿದ್ದು ಇಂಟರ್ಮೀಡಿಯಟ್ವರೆಗೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹಭಾಗಿ, ಆಹಾರ ಇಲಾಖೆಯಲ್ಲಿ ನೌಕರಿ(೧೯೪೪), ನಾಟಕದ ಗೀಳು, ಆಕಾಶವಾಣಿಯಲ್ಲಿ ನಾಟಕ ವಿಭಾಗದಲ್ಲಿ ದುಡಿಮೆ; ನಾಟಕ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್. ವಾಮನರಾಯರಿಂದ ಅಭಿನಯದಲ್ಲಿ ತರಬೇತಿ ಪಡೆಯುವ ಅವಕಾಶ ಲಭ್ಯ. ಅಶ್ವತ್ಥ್ ಅವರಿಗೆ ಚಲನಚಿತ್ರ ಸೇರಬೇಕೆಂಬ ಕಲ್ಪನೆಯೇ ಇರಲಿಲ್ಲ. ಅವಕಾಶ ಅದಾಗಿಯೇ ಬಂದಿತು. ನಾಟಕದಲ್ಲಿನ ಇವರ ಅಭಿನಯ ನೋಡಿ ಮೆಚ್ಚಿದ ಹಿರಿಯ ನಿರ್ದೇಶಕ ಕೆ.ಸುಬ್ರಹ್ಮಣ್ಯಂ ಅವರಿಂದ ಚಿತ್ರರಂಗಕ್ಕೆ ಆಹ್ವಾನ. ಮೈಸೂರಿನ ಪ್ರಿಮಿಯರ್ನಲ್ಲಿ ತಯಾರಾದ, ಭಾಗಶಃ ವರ್ಣದಲ್ಲಿ ಚಿತ್ರಣವಾದ ‘ಸ್ತ್ರೀ ರತ್ನ’(೧೯೫೫) ಚಿತ್ರದಲ್ಲಿ ನಾಯಕ.
‘ಸ್ತ್ರೀ ರತ್ನ’ ಚಿತ್ರದ ನಂತರ, ಚಿತ್ರರಂಗದಲ್ಲೆ ಮುಂದುವರೆಯುವ ನಿರ್ಧಾರ. ಆದರೆ ಆ ಅವಧಿಯಲ್ಲಿ ಕನ್ನಡ ಚಿತ್ರ ನಿರ್ಮಾಣ ಚಟುವಟಿಕೆ ಮಂದಗತಿಯಲ್ಲಿ ಸಾಗಿತ್ತು. ಆದರೂ ಚಿತ್ರರಂಗದ ಅಭಿನಯವನ್ನೇ ವೃತ್ತಿಯಾಗಿ ಸ್ವೀಕರಿಸಲು ಸಂಕಲ್ಪಿಸಿದ್ದ ಅಶ್ವತ್ಥ್, ಆಗ ಕನ್ನಡ ಚಿತ್ರ ನಿರ್ಮಾಣದ ಕೇಂದ್ರವಾಗಿದ್ದ ಮದರಾಸಿನಲ್ಲೇ ನೆಲೆಸಲು ನಿರ್ಧರಿಸಿದರು. ನಾಯಕ ಪಾತ್ರಗಳಿಂದ ಸರಿದು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಸಂಕಲ್ಪ ಮಾಡಿದರು (೧೯೬೦). ಈ ನಿರ್ಧಾರವೂ ಯೋಗ್ಯವಾದುದೇ. ಇದರಿಂದ ಅವರ ಬಹುಮುಖ ಪ್ರತಿಭೆಯು ಪ್ರಕಾಶಕ್ಕೆ ಮುಕ್ತ ಅವಕಾಶ ದೊರೆಯಿತು. ಆರಂಭದದಿನಗಳಲ್ಲಿ ತಯಾರಾಗುತ್ತಿದ್ದದು ಹೆಚ್ಚಾಗಿ ಪೌರಾಣಿಕ ಹಾಗೂ ಭಕ್ತಿ ಪ್ರಧಾನ ಚಿತ್ರಗಳು. ಪೌರಾಣಿಕ ಭಕ್ತಿ ಪ್ರಧಾನ ಚಿತ್ರಗಳಲ್ಲಿ ನಾರದನ ಪಾತ್ರಗಳು ಅರಸಿ ಬಂದವು. ‘ಮಹಿಷಾಸುರ ಮರ್ದಿನಿ’, ‘ಸ್ವರ್ಣಗೌರಿ’, ‘ಭಕ್ತ ಪ್ರಹ್ಲಾದ’, ‘ದಶಾವತಾರ’, ‘ನಾಗಾರ್ಜುನ’-ಇವೇ ಮೊದಲಾದ ಚಿತ್ರಗಳಲ್ಲಿ ಅಶ್ವತ್ಥ್ ಅವರ ನಾರದನ ಪಾತ್ರ ಜನಮೆಚ್ಚುಗೆ ಪಡೆಯಿತು.
 
"https://kn.wikipedia.org/wiki/ಕೆ_ಎಸ್_ಅಶ್ವಥ್" ಇಂದ ಪಡೆಯಲ್ಪಟ್ಟಿದೆ