ಚಂದ್ರಶೇಖರ ಕಂಬಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಚಿತ್ರ:20-kambar-big4.jpg|thumb|right|350px|'ಶ್ರೀ ಚಂದ್ರಶೇಖರ ಕಂಬಾರ']]
ಡಾ. ಚಂದ್ರಶೇಖರ ಕಂಬಾರ (ಜನನ- ೨ ಜನವರಿ ೧೯೩೭)ರಂದು ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದ [[ಬಸವಣ್ಣೆಪ್ಪ ಕಂಬಾರ]] ಹಾಗೂ [[ಚೆನ್ನಮ್ಮ]] ದಂಪತಿಯ ಪುತ್ರನಾಗಿ ಜನಿಸಿದರು,[[ ಬೆಳಗಾವಿ ಲಿಂಗರಾಜ ಕಾಲೇಜಿ]]ನಲ್ಲಿಕಾಲೇಜಿನಲ್ಲಿ ಬಿಎ, ೧೯೬೨ರಲ್ಲಿ 'ಕರ್ನಾಟಕ ವಿವಿ'ಯಿಂದ ಎಂ.ಎ ಪದವಿ,ಪಿ.ಎಚ್.ಡಿ.ಪದವಿ ಪಡೆದಿರುವ ಅವರು, ಬೆಂಗಳೂರು ವಿವಿ ಅಧ್ಯಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ. ಚಂದ್ರಶೇಖರ ಕಂಬಾರ ಕಾರ್ಯನಿರ್ವಹಿಸಿದ್ದಾರೆ.೧೯೬೮-೬೯ ಚಿಕಾಗೂ ವಿಶ್ವವಿದ್ಯಾನಿಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೋ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿ.ವಿ.ಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.
==ವೃತ್ತಿಜೀವನ==
ಕಂಬಾರರು ಯುವಕರಾಗಿದ್ದಾಗ ದಾರವಾಡದ ಕವಿ ಸಮ್ಮೇಳನದಲ್ಲಿ ಕವಿತೆಯೊಂದನ್ನು ಓದಿದ್ದರಂತೆ,ಖ್ಯಾತ ಕವಿಗಳೊಬ್ಬರು ಅಧ್ಯಕ್ಷತೆ ವಹಿಸಿದ್ದರು,ಕಂಬಾರರ ಕವಿತೆ ಅಲ್ಲಿ ಓದಿದ ಎಲ್ಲ ಕವಿಗಳಿಗಿಂತ ಭಿನ್ನವಾಗಿದ್ದದ್ದು ಎಲ್ಲರ ಗಮನಕ್ಕೆ ಬಂದಿದ್ದರೂ,ಅದ್ಯಕ್ಷರು ಕಂಬಾರರ ಬಗ್ಗೆ ಕುಹಕದ ಮಾತು ಹೇಳಿದ್ದರು,"ಕಬ್ಬಿಣ ಕಾಸುವವರೂ ಈಗ ಕಾವ್ಯ ಬರೆಯುತ್ತಿದ್ದಾರೆ " ಎಂಬ ಅಧ್ಯಕ್ಷರ ಮಾತು ಕಂಬಾರರ ಸ್ವಾಭಿಮಾನವನ್ನೇ ಬಡಿದೆಬ್ಬಿಸಿತು,ಅಂದೇ ಕಂಬಾರ ಕಾವ್ಯವನ್ನು ಪಳಗಿಸಿಕೊಳ್ಳಲು ನಿರ್ಧರಿಸಿದರಂತೆ.
"https://kn.wikipedia.org/wiki/ಚಂದ್ರಶೇಖರ_ಕಂಬಾರ" ಇಂದ ಪಡೆಯಲ್ಪಟ್ಟಿದೆ