ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
[[ಪುಟ್ಟಣ್ಣ ಕಣಗಾಲ್|ಪುಟ್ಟಣ್ಣ ಕಣಗಾಲರ]] ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಈ ಬಿ.ಆರ್. ಪಂತುಲು.
ಅವರು ಅಭಿನಯ-ನಿರ್ದೇಶನ-ನಿರ್ಮಾಣ ಈ ಮೂರೂ ಕಲೆಗಳನ್ನು ಕರಗತ ಮಾಡಿಕೊಂಡು ಕನ್ನಡ ಚಿತ್ರರಂಗವನ್ನು ಅತ್ಯುತ್ತಮ ಗುಣಮಟ್ಟದ ಚಿತ್ರಗಳಿಂದ ಶ್ರೀಮಂತಗೊಳಿಸಿದ ಕಲಾವಿದ. 1957ರಿಂದ 1972ರವರೆಗೆ ಅವರು ಕನ್ನಡದಲ್ಲಿ ನಿರ್ಮಿಸಿದ ಚಿತ್ರಗಳು ಕನ್ನಡ ಚಿತ್ರರಂಗದತ್ತ ಭಾರತದ ಇಡೀ ಚಿತ್ರರಂಗ ತಿರುಗಿ ನೋಡು ವಂಥ ಇತಿಹಾಸವನ್ನೇ ನಿರ್ಮಿಸಿತು. ಸುಮಾರು 20 ಚಿತ್ರಗಳಲ್ಲಿನ ಶೇಕಡಾ 90ರಷ್ಟು ಚಿತ್ರಗಳಲ್ಲಿ ಡಾ. ರಾಜ್‌ಕುಮಾರ್ ನಾಯಕನಟ ನಾಗಿ ಅಭಿನಯಿಸಿರುವುದೊಂದು ವಿಶೇಷ.
ಜೊತೆಗೆ ಸ್ವತಃ ಬಿ.ಆರ್.ಪಂತುಲುರವರೂ ಒಂದು ಮುಖ್ಯ ಪೋಷಕ ಪಾತ್ರದಲ್ಲಿದ್ದು ತಂದೆಯಂತೆ ಆ ಇಡೀ ಚಿತ್ರದ ಏಳಿಗೆಗೆ ಕಾರಣ ವಾಗುತ್ತಿದ್ದುದು ಆ ಚಿತ್ರಗಳ ಇನ್ನೊಂದು ಸುವಿಶೇಷ. 1955ರಲ್ಲಿ ಪದ್ಮಿನಿ ಪಿಕ್ಚರ್ಸ್‌ ಲಾಂಛನದಡಿಯಲ್ಲಿ ಪಂತುಲುರವರು ತಮ್ಮ ಚಿತ್ರ ನಿರ್ಮಾಣವನ್ನು ಆರಂಭಿಸಿದರೂ ಅವರು ನಿರ್ಮಿಸಿದ ಚಿತ್ರಗಳನ್ನು "ಪಂತುಲು ಚಿತ್ರಗಳು"ಎಂದು ಕರೆಯುವುದೇ ವಾಡಿಕೆ.ಪಂತುಲುರವರನ್ನು ಬಹಳ ಮುಖ್ಯ ವಾಗಿ ನೆನೆಯಬೇಕಾದುದು ಅವರ ‘ಸ್ಕೂಲ್ ಮಾಸ್ಟರ್’ ಚಿತ್ರದ ಧ್ಯಾನದ ಆರಂಭದಿಂದಲೇ.[http://www.youtube.com/watch?v=I3XHjgGO2ic&feature=related "ಸ್ವಾಮಿ ದೇವನೆ"]ಎಂಬ ಒಂದು ಹಾಡು ಸಾಕು ಪಂತುಲುರವರು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪ್ರಾತಃ ಸ್ಮರಣೀಯರಾಗಲು.ಪಂತುಲು ಅವರು ಅದ್ಯಾಪಕರಾಗಿದ್ದಾಗ ಬಳಸುತ್ತಿದ್ದ "ಸೋಸಲೆ ಅಯ್ಯಾಶಾಸ್ತ್ರಿ"ಗಳ ಆ ಪ್ರಾರ್ಥನಾ ಗೀತೆ ಹೀಗಿದೆ-
ಸ್ವಾಮಿ ದೇವನೆ ಲೋಕ ಪಾಲನೆ
ತೇ ನಮೋಸ್ತುತೇ
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ