ರಂಗಭೂಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
 
ಕನ್ನಡದಲ್ಲಿ ಜನಪದ ರಂಗಭೂಮಿ, ವ್ರತ್ತಿ ರಂಗಭೂಮಿ ಮತ್ತು ಹವ್ಯಾಸಿ ರಂಗಭೂಮಿಗಳಾಗಿ ವಿಂಗಡಿಸಬಹುದು.ಕನ್ನಡ ಜನಪದ ರಂಗ ಭೂಮಿಯಿಂದ ಪ್ರೇರಣೆ ಪಡೆದ ಮರಾಠಿಯ "ಸೀತಾ ಸ್ವಯಂವರ" ನಾಟಕ ಮಹಾರಾಷ್ಟ್ರದ ಉದ್ದಗಲಕ್ಕೂ ಪ್ರದರ್ಶನ ಕಂಡು ಮುಂಬೈ ಪ್ರಾಂತ್ಯ ಕ್ಕೊಳಪಟ್ಟ ಉತ್ತರ ಕರ್ನಾಟಕದ ಪಟ್ಟಣಗಳಿಗೂ ಲಗ್ಗೆ ಇಟ್ಟು ಕನ್ನಡ ನೆಲದಲ್ಲಿ ಮರಾಠಿ ಮತ್ತು ಪಾರ್ಸೀ ಕಂಪನಿಗಳದ್ದೆ ನಾಟಕದಾಟ,ನಾಟಕದೂಟ, ಕಾರುಬಾರುಗಳಾದಾಗ ಕನ್ನಡಿಗರ ಸ್ವಾಭಿಮಾನ ಕೆಣಕುವಂತಾಯಿತು.ಈ ವೇಳೆಗೆ "ಶಾಂತ ಕವಿ'ಗಳೆಂದು ಹೆಸರಾದ ಸಕ್ಕರಿ ಬಾಳಾಚಾರ್ಯರು ಮರಾಠಿ ನಾಟಕಕ್ಕೆ ಪ್ರತಿಯಾಗಿ ಕನ್ನಡ ನಾಟಕಗಳನ್ನು ರಚಿಸುವಲ್ಲಿ ಕಾರಣರಾದರು.ಸಮಗ್ರ ಕರ್ನಾಟಕ ವರ್ತ್ತಿ ರಂಗ ಭೂಮಿ ಇತಿಹಾಸದಲ್ಲಿ ಗದಗಿಗೆ ಪ್ರಥಮ ಕೀರ್ತಿ ಸಲ್ಲುವಂತಾಯಿತು.
 
೧೮೫೬ನೆ ಜನವರಿ ೧೫ ರಂದು ಹುಟ್ಟಿದ ಸಕ್ಕರಿ ಬಾಳಾಚಾರ್ಯರು ಗದಗಿನ ಶ್ರೀಮಂತ ಉಮಚಗಿ ಲಚಪ್ಪ ನಾಯಕ ಎಂಬವರ ಪ್ರೋತ್ಸಾಹದಿಂದ ಹಲವಾರು ರುವಕರ ನೆರವಿನಿಂದ ೧೮೭೨ ರಲ್ಲಿ 'ವೀರ ನಾರಾಯಣ ಪ್ರಸಾದಿತ ನಾಟಕ ಮಂಡಳಿ' ಸ್ತಾಪಿಸಿದರು.ಈ ಮಂಡಳಿ ಉತ್ತರ ಕರ್ನಾಟಕದ ಪ್ರಥಮ ವ್ರತ್ತಿ ನಾಟಕ ಸಂಸ್ಥೆ. ಮುಂದೆಯೂ ಪಾರಸಿ ಕಂಪನಿಗಳ ಪಾರಮ್ಯ ಮೈಸೂರು ಪ್ರಾಂತ್ಯದಲ್ಲಿ ಮುಂದುವರೆದಾಗ ಮೈಸೂರಿನ ಕೆಲವು ಮಂದಿ ಕಲಾವಿಲಾಸಿಗಳು ಸುಮಾರು ೧೮೭೯-೮೦ ರಲ್ಲಿ ಸಿ.ಆರ್.ರಘುನಾಥ ರಾಯರ ನೇತ್ರತ್ವದಲ್ಲಿ ಒಂದು ಕನ್ನಡ ನಾಟಕ ಸಂಘವನ್ನು ಆರಂಭಿಸಿ "ಶ್ರೀ ಶಾಕುಂತಲ ಕರ್ನಾಟಕ ನಾಟಕ ಸಬಾ"ಎಂದು ಹೆಸರಿಟ್ಟುಕಾರ್ಯ ನಿರತರಾದರು.ಮುಂದೆ ಮೈಸೂರು ಒಡೆಯರಾದ ಚಾಮರಾಜೇಂದ್ರ ರ ನೆರವಿನೊಂದಿಗೆ ೧೮೮೦ರಲ್ಲಿ " ಶ್ರೀ ಚಾಮರಾಜೇಂದ್ರ ಕರ್ನಾಟಕ ನಾಟಕ ಸಭಾ" ಎಂಬ ಹೆಸರಿನಿಂದ ನಾಟಕ ಮಂಡಳಿಯೊಂದನ್ನು ಸ್ಥಾಪಿಸಿ ಕನ್ನಡ ರಂಗ ಭೂಮಿಗೆ ಭದ್ರ ಬುನಾದಿ ಹಾಕಿ ಸತ್ ಸಂಪ್ರ್ತದಾಯವೊಂದನ್ನು ನಿರ್ದಿಷ್ಟವಾಗಿ ರೂಪಿಸಿದರು.
 
 
[[ವರ್ಗ:ರಂಗಭೂಮಿ]]
"https://kn.wikipedia.org/wiki/ರಂಗಭೂಮಿ" ಇಂದ ಪಡೆಯಲ್ಪಟ್ಟಿದೆ