ಫ್ಲಾರೆನ್ಸ್ ನೈಟಿಂಗೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಫ್ಲಾರೆನ್ಸ್ ನೈಟಿಂಗೇಲ್''' - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ [[ಇಟಲಿ]]ಯಲ್ಲಿ [[೧೮೨೦]]ರ [[ಮೇ ೧೨]] ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.[[೧೮೫೪]]ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ. ಈ 'ದೀಪ ಧಾರಿಣಿ' ಇಟಲಿಯ ಫ್ಲಾರೆನ್ಸ್ ನಗರದಲ್ಲಿ ಹುಟ್ಟಿದ ಪ್ಲಾರೆನ್ಸ್ ನೈಟಿಂಗೇಲ್. ಇವರ ನೆನಪಿಗಾಗಿ [[ಲಂಡನ್‌]]ನ ವಾಟರ್‌ಲೂ ಅರಮನೆಯಲ್ಲಿ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ."ನಮನ"
 
== ದೀಪಧಾರಿಣಿ ==
ಬೃಹದಾಕಾರದ ಮಿಲಿಟರಿ ಆಸ್ಪತ್ರೆ. ಕಟ್ಟಡವು ದೊಡ್ಡದಾಗಿತ್ತು. ಆದರೆ ಕನಿಷ್ಠ ಸೌಕರ್ಯವೂ ಇಲ್ಲದ ಆಸ್ಪತ್ರೆ. ಆಸ್ಪತ್ರೆಯ ಉದ್ದ ಸುಮಾರು ೬.೫ ಕಿಲೋಮೀಟರು. ಆಸ್ಪತ್ರೆಯಲ್ಲಿ ಸಾವಿರಾರು ಹಾಸಿಗೆಗಳು, ಆದರೆ ಒಬ್ಬ ರೋಗಿಯ ಹಾಸಿಗೆಗೂ, ಇನ್ನೊಬ್ಬ ರೋಗಿಯ ಹಾಸಿಗೆಗೂ ಇದ್ದ ಅಂತರ ಕೇವಲ ೪೫ ಸೆಂಟಿಮೀಟರುಗಳು. ಇಂಥಹ ಆಸ್ಪತ್ರೆಯಲ್ಲಿ ಪ್ರತಿನಿತ್ಯ ರಾತ್ರಿಯ ಹೊತ್ತು ಆಕೆ ಕೈಯಲ್ಲಿ ದೀಪ ಹಿಡಿದು ಪ್ರತಿಯೊಂದು ಹಾಸಿಗೆಯ ಬಳಿ ಹೋಗುತ್ತಾಳೆ. ಪ್ರತಿಯೊಬ್ಬ ರೋಗಿಯನ್ನೂ ವಿಚಾರಿಸುತ್ತಾಳೆ. ಅವರಿಗೆ ಅಗತ್ಯವಾದ ಔಷದ ಮತ್ತು ಇತರ ವಸ್ತುಗಳನ್ನು ನೀಡುತ್ತಾಳೆ. ಮೆಲುದನಿಯಲ್ಲಿ ಅವರನ್ನು ಉಪಚರಿಸುತ್ತಾಳೆ, ಅವರಿಗೆ ಧೈರ್ಯ ತುಂಬುತ್ತಾಳೆ. ಸಾವಿನ ಹೊಸ್ತಿಲಲ್ಲಿರುವ ವ್ಯಕ್ತಿಗೆ, ಆಗತಾನೇ ಚೇತರಿಸಿಕೊಳ್ಳುತ್ತಿರುವ ರೋಗಿಗೆ ಅವಳು ಮಾಡುತ್ತಿದ್ದ ಸೇವೆಯಿಂದ 'ಅವಳೊಬ್ಬ ದೇವತೆ' ಎನಿಸಿದ್ದರೆ ಆಶ್ಚರ್ಯವಿಲ್ಲ. ಪ್ರತಿದಿನ ಕತ್ತಲಾದೊಡನೆ ದೀಪವನ್ನು ಹಿಡಿದು ರೋಗಿಗಳನ್ನು ವಿಚಾರಿಸಲು ಬರುತ್ತಿದ್ದ ಈಕೆಯನ್ನು 'ದೀಪಧಾರಿಣಿ' ಎಂದೇ ಕರೆಯುತ್ತಿದ್ದರು.
"ನಮನ"