ಫ್ಲಾರೆನ್ಸ್ ನೈಟಿಂಗೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಫ್ಲಾರೆನ್ಸ್ ನೈಟಿಂಗೇಲ್''' - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ [[ಇಟಲಿ]]ಯಲ್ಲಿ [[೧೮೨೦]]ರ [[ಮೇ ೧೨]] ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.[[೧೮೫೪]]ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ. ಈ 'ದೀಪ ಧಾರಿಣಿ' ಇಟಲಿಯ ಫ್ಲಾರೆನ್ಸ್ ನಗರದಲ್ಲಿ ಹುಟ್ಟಿದ ಪ್ಲಾರೆನ್ಸ್ ನೈಟಿಂಗೇಲ್. ಇವರ ನೆನಪಿಗಾಗಿ [[ಲಂಡನ್‌]]ನ ವಾಟರ್‌ಲೂ ಅರಮನೆಯಲ್ಲಿ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ.
=== ನೈಟಿಂಗೇಲ್ ಮನೋಜ್ಞ ಸೇವೆ ===
ಅಂದಿನ ಅಧಿಕಾರಷಾಹಿಗಳಿಗೆ ಯುದ್ಧದಲ್ಲಿ ಮತ್ತೊಂದು ಸಾಮ್ರ್ಯಾಜ್ಯವನ್ನು ಕಸಿದು ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವ ಗುಣವಿತ್ತೇ ವಿನಃ ತಮಗಾಗಿ ಯುದ್ಧ ಮಾಡುವವನಿಗೆ ಏನಾಗಿದೆ ಆತನಿಗೆ ಪೆಟ್ಟು ಬಿದ್ದಾಗ ಏನು ಮಾಡಬೇಕೆಂಬುದರ ಖಾಳಜಿ ಇರಲಿಲ್ಲ. ರೋಗಿಗಳಲ್ಲಿ ತುಂಬಾ ಗಂಭೀರರಾದವರನ್ನು ಸಮುದ್ರದಲ್ಲಿ ಎಸೆದರೆ, ಸ್ವಲ್ಪ ತ್ರಾಣವಿರುವವರನ್ನು ತಿಂಗಳಾನುಗಟ್ಟಲೆ ಹಡಗಿನ ಪ್ರಯಾಣದಲ್ಲಿ ಸಾಗಿಸಿ ಪ್ರಾಣಿಗಳಿಗೂ ಸಹ್ಯವೆನಿಸದ ಅಮಾನುಷ ಸ್ಥಳಗಳಲ್ಲಿ ಯಾವುದೇ ಶುಶ್ರೂಷಾ ವ್ಯವಸ್ಥೆಯಿಲ್ಲದ ಸ್ಥಳಗಳಿಗೆ ದಬ್ಬುತ್ತಿದ್ದರು. ಸಾವಿರಾರು ಜನರಿಗೆ ಒಬ್ಬನೋ ಇಬ್ಬರೋ ವೈದ್ಯರಿದ್ದರೆ ಉಂಟು ಇಲ್ಲದಿದ್ದರಿಲ್ಲ.
ಅಂಥಹ ಒಂದು ಯುದ್ಧದಲ್ಲಿ ಸ್ಕುಟಾರ್ ಎಂಬ ಸ್ಥಳದಲ್ಲಿ ಯುದ್ಧ ಗಾಯಾಳುಗಳನ್ನು ತುಂಬಿದ್ದ ಕೊಟ್ಟಿಗೆಗೆ ಸಿಡ್ನಿ ಹರ್ಬರ್ಟ್ ಎಂಬ ಬ್ರಿಟಿಶ್ ಮಂತ್ರಿಮಂಡಲದ ಅಧಿಕಾರಿಯ ಮನವಿಯ ಮೇರೆಗೆ ಆಗಮಿಸಿದ ಫ್ಲಾರೆನ್ಸ್ ಮಾಡಿದ ಸುಧಾರಣೆ ಮನೋಜ್ಞ ಸೇವೆ ಚರಿತ್ರಾರ್ಹವಾದದ್ದು. ಭಾರತದಲ್ಲಿ ಸಿಪಾಯಿ ದಂಗೆಯ ಸಮಯದಲ್ಲೂ ಆಕೆ ಮಾಡಿದ ಸೇವೆ ಅಭೂತಪೂರ್ವವಾದದ್ದು. ಯಾವುದೇ ವ್ಯವಸ್ಥೆಗಳಿಲ್ಲದ, ಬೇಜವಾಬ್ದಾರಿಗಳ ಸರ್ಕಾರಿ ವ್ಯವಸ್ಥೆ, ಅಪಹಾಸ್ಯಗಳನ್ನು ಎದುರಿಸಿ ಕೂಡಾ, ಮಾನವೀಯ ಅನುಕಂಪ, ಸೇವಾ ಮನೋಭಾವನೆಗಳ ಹಾದಿಯಲ್ಲಿ ಬಂದ ಅಡೆತಡೆಗಳನ್ನೆಲ್ಲಾ ನಿವಾರಿಸಿ ಮಾನವ ಕುಲಕ್ಕೆ ಈಕೆ ಸಲ್ಲಿಸಿದ ಸೇವೆ ಇಡೀ ವಿಶ್ವವೇ ಬೆರಗಾಗುವಂತೆ ಮಾಡಿತು. ತನ್ನ ಸೇವೆಯಲ್ಲಿ ದೇವರನ್ನು ಕಂಡ ಈ ಮಹಾತಾಯಿ ಮುಂದೆ ಮಾನವ ಕುಲವನ್ನು ಸಲಹುತ್ತಿರುವ ಅನೇಕ ಮಾನವೀಯ ದಾದಿಯರ ಪ್ರತಿನಿಧಿಯಾಗಿ ಎಂದೆಂದೂ ನೆನಪಿನಲ್ಲಿ ಉಳಿಯುತ್ತಾಳೆ."ನಮನ"
 
== ದೀಪಧಾರಿಣಿ ==