ನರಸಿಂಹರಾಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೦ ನೇ ಸಾಲು:
ಅಭಿನಯ ಹಾಸ್ಯದ ಮೂಲಕವೇ ಕನ್ನಡಚಿತ್ರ ರಸಿಕರನ್ನು ನಕ್ಕುನಗಿಸಿದ ಧೀಮಂತ ನಟ ನರಸಿಂಹರಾಜು. ಕನ್ನಡಚಿತ್ರರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ನರಸಿಂಹರಾಜು ಅವರು ಪ್ರಮುಖರು. 1926ರಿಂದ 1979ರವರೆಗೆ ರಂಗಭೂಮಿ ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ನರಸಿಂಹರಾಜು ಹಾಸ್ಯನಟರಾಗಿ ಎಷ್ಟರ ಮಟ್ಟಿಗೆ ಬೆಳೆದರೆಂದರೆ, ರಾಜ್ ಕುಮಾರ್ ನಾಯಕ ನಟರಾದರೆ, ಅವರ ಗೆಳೆಯನ ಪಾತ್ರಕ್ಕೆ ನರಸಿಂಹರಾಜು ಆಯ್ಕೆಯಾಗುತ್ತಿದ್ದರು. ನಾಯಕನ ಗೆಳೆಯ, ಸಹೋದ್ಯೋಗಿ, ಸಹಾಯಕ ಹೀಗೆ ಯಾವುದಾದರೂ ಒಂದು ಪಾತ್ರ ಸೃಷ್ಟಿಸಿ ನರಸಿಂಹ ರಾಜು ಅವರಿಗೆ ಅವಕಾಶ ನೀಡಲಾಗುತ್ತಿತ್ತು.
 
ನರಸಿಂಹರಾಜು ಅವರು ಹುಟ್ಟಿದ್ದು ತುಮಕೂರು ಜಿಲ್ಲೆ ತಿಪಟೂರಿನಲ್ಲಿ. ಚಿಕ್ಕಪ್ಪನ ಪ್ರೋತ್ಸಾಹದಿಂದ ತಮ್ಮ ನಾಲ್ಕನೇ ವಯಸ್ಸಿನಲ್ಲೇ ಬಾಲಕಲಾವಿದನಾಗಿ ಬಣ್ಣ ಹಚ್ಚಿಕೊಂಡರು.ಮುಂದೆ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಬಾಲನಟನಾಗಿ ಖ್ಯಾತಿ ಪಡೆದರು. 1954ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನರಸಿಂಹ ರಾಜು ನಟಿಸಿದ ಮೊದಲ ಚಿತ್ರ ಬೇಡರಕಣ್ಣಪ್ಪ. ರಾಜ್ ಕುಮಾರ್ ನಾಯಕ ನಟರಾದ ಮೊದಲ ಚಿತ್ರವೂ ಆದ ಬೇಡರ ಕಣ್ಣಪ್ಪದಲ್ಲಿ ಕಾಶಿ ಪಾತ್ರದಲ್ಲಿ ಕಾಣಿಸಿಕೊಂಡ ನರಸಿಂಹ ರಾಜು ಮತ್ತೆ ಹಿಂತಿರುಗಿ ನೋಡಲೇ ಇಲ್ಲ.ಮಕ್ಕಳರಾಜ್ಯ ಚಿತ್ರದಲ್ಲಿ ಎರಡನೇ ನಾಯಕನಾಗಿ ನಟಿಸಿ ಮಿಂಚಿದ ಅವರು, ಸತ್ಯಹರಿಶ್ಚಂದ್ರ ಚಿತ್ರದಲ್ಲಿ ನಕ್ಷತ್ರಿಕರಾಗಿ ಮಾಡಿದ ಪಾತ್ರ ಮರೆಯುವಂತೆಯೇ ಇಲ್ಲ. ನಂತರ ನೂರಾರು ಚಿತ್ರಗಳಲ್ಲಿ ಹಾಸ್ಯನಟರಾಗಿ ವಿಜೃಂಭಿಸಿದರು. ಪ್ರೊಫೆಸರ್ ಹುಚ್ಚೂರಾಯ ಚಿತ್ರದ ಮೂಲಕ ನಾಯಕ ನಟರಾಗಿಯೂ ಅಭಿನಯಿಸಿದರು. ಹಲವು ಚಿತ್ರಗಳಲ್ಲಿ ದ್ವಿಪಾತ್ರ, ತ್ರಿಪಾತ್ರಗಳಲ್ಲೂ ಮನಸೂರೆಗೊಂಡರು.ತಮ್ಮ ೧೬ನೇ ವಯಸ್ಸಿಗೇ ಸ್ವಂತ ನಾಟಕ ಕಂಪನಿ ಕಟ್ಟಿದ ಬಾಲಕನೆಂಬ ಹೆಗ್ಗಳಿಕೆ ಇವರದು."ನಮನ"
 
 
"https://kn.wikipedia.org/wiki/ನರಸಿಂಹರಾಜು" ಇಂದ ಪಡೆಯಲ್ಪಟ್ಟಿದೆ