ಟೆಂಪ್ಲೇಟು:Convert/doc: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಬೆಳ್ಳೆ ಮೋನಪ್ಪ ಹೆಗ್ಡೆ ಕರ್ನಾಟಕ, ಭಾರತ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲ...
ಚು ಶೀರ್ಷಿಕೆಗಳನ್ನು ದೊಡ್ಡ ಅಕ್ಷರಗಳಲ್ಲಿ ಬದಲಾಯಿಸಲಾಗಿದೆ
೧ ನೇ ಸಾಲು:
==ಬೆಳ್ಳೆ ಮೋನಪ್ಪ ಹೆಗ್ಡೆ ಹೆಗ್ಡೆ””““ ==
 
ಕರ್ನಾಟಕ, ಭಾರತ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿರುವ ವಿರಳ ವೈದ್ಯರಲ್ಲಿ ಡಾ. ಬೆಳ್ಳಿ ಮೋನಪ್ಪ ಹೆಗ್ಡೆ ಅಗ್ರಗಣ್ಯರು. ಡಾ.ಬಿ.ಎಂ.ಹೆಗ್ಡೆ ಎಂದು ಹೆಸರಾಗಿರುವ ಗಣ್ಯರು ಹೃದ್ರೋಗ ತಜ್ಞರು. ವೈದ್ಯರಾಗಿ, ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಲೇಖಕರಾಗಿ, ಶಿಕ್ಷಣ ತಜ್ಞರಾಗಿ, ಉಪಕುಲಪತಿಗಳಾಗಿ, ಎಲ್ಲಕ್ಕೂ ಮಿಗಿಲಾಗಿ ಪ್ರಜ್ಞಾವಂತ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಇವರು ಸಲ್ಲಿಸುತ್ತಿರುವ ಸೇವೆ ಅದ್ವಿತೀಯ. ಭಾರತೀಯ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಡಾ|ಬಿ.ಸಿ.ರಾಯ್ ಪ್ರಶಸ್ತಿಯನ್ನು ೧೯೯೯ರಲ್ಲಿ ಪಡೆದ ಹೆಗ್ಡೆಯವರಿಗೆ ಭಾರತ ಸರ್ಕಾರವು ೨೦೧೦ ರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ. ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿಗಳಾದ ಹೆಗ್ಡೆಯವರು ಪ್ರಸ್ತುತ ಭಾರತೀಯ ವಿದ್ಯಾಭವನ ಮಂಗಳೂರು ಘಟಕದ ಮುಖ್ಯಸ್ಥರಾಗಿರುವರು.
 
===ಜನನ:===
ಬೆಳ್ಳೆ ಮೋನಪ್ಪ ಹೆಗ್ಡೆಯವರು ಆಗಸ್ಟ್ ೧೮, ೧೯೩೮ ರಂದು ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದರು.
 
===ವಿದ್ಯಾಭ್ಯಾಸ:===
ಉಡುಪಿಯಲ್ಲಿ ಪ್ರಾಥಮಿಕ ಶಿಕ್ಷಣ. ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ಎಂ.ಬಿ.ಬಿ.ಎಸ್ ಪದವಿ. ಲಕ್ನೋ ವಿಶ್ವವಿದ್ಯಾಲಯದಲ್ಲಿ ಎಂ.ಡಿ.ಪದವಿ. ಹೆಗ್ಡೆಯವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ನಿಗೆ ತೆರಳಿ, ಅಲ್ಲಿರುವ ಎಲ್ಲಾ ರಾಯಲ್ ಕಾಲೇಜುಗಳ ಫೆಲೋ ಆದ ಪ್ರಪ್ರಥಮ ಹಾಗೂ ಏಕೈಕ ಕನ್ನಡಿಗ ಹಾಗೂ ಭಾರತೀಯನೆನಿಸಿಕೊಂಡರು. ಪ್ರೊ. ಬೆರ್ನಾರ್ಡ್ ಲೋವ್ನ್ ನಂತಹ ನೋಬೆಲ್ ಪಾರಿತೋಷಕ ಪುರಸ್ಕೃತ ವೈದ್ಯರ ಹತ್ತಿರ ಕೆಲಸ ಮಾಡಿದ ಹೆಗ್ಡೆಯವರು ಲಂಡನ್ನಿನ ಕಾಲೇಜುಗಳ ಎಂ.ಆರ್.ಸಿ.ಪಿ ಪರೀಕ್ಷಕರಾಗಿ ಆಯ್ಕೆಯಾದ ಪ್ರಥಮ ಭಾರತೀಯರಾಗಿರುವರು. ಸ್ನಾತಕ, ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ ಪರೀಕ್ಷಕರಾಗಿ ದಕ್ಷಿಣ ಅಮೇರಿಕ ಒಂದನ್ನು ಬಿಟ್ಟು ಜಗತ್ತಿನ ಉಳಿದ ಎಲ್ಲಾ ಖಂಡಗಳ ಪ್ರಮುಖ ವಿ.ವಿ.ಗಳಿಗೆ ಹೋಗಿರುವರು. ೧೯೮೨ ರಿಂದ ಲಂಡನ್ ವಿ.ವಿ ಯ ಶಾಶ್ವತ ಸಂದರ್ಶನ ಪ್ರಾಧ್ಯಪಕರಾಗಿ ಕೆಲಸ ಮಾಡುತ್ತಿರುವ ಗಣ್ಯರು, ಕಸ್ತೂರಬಾ ವೈದ್ಯಕೀಯ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಪ್ರಾಚಾರ್ಯರಾಗಿ, ಡೀನ್ ಆಗಿ ಕೊನೆಗೆ ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆಯ (ಮಾಹೆ) ಉಪಕುಲಪತಿಗಳಾಗಿ ಸೇವೆ ಸಲ್ಲಿಸಿ ಈಗ ಮಂಗಳೂರಿನಲ್ಲಿ ನಿವೃತ್ತ ಜೀವನವನ್ನು ನಡೆಸುತ್ತಿರುವರು.
 
"https://kn.wikipedia.org/wiki/ಟೆಂಪ್ಲೇಟು:Convert/doc" ಇಂದ ಪಡೆಯಲ್ಪಟ್ಟಿದೆ