ಸರಸ್ವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೭ ನೇ ಸಾಲು:
ಜನಪದ ಸಾಹಿತ್ಯದಲ್ಲಿ ವಾಗ್ದೇವತೆಯ ಪರಿಕಲ್ಪನೆ ಇಲ್ಲದಿದ್ದರೂ ವಾಕ್ ಅಂದರೆ ಮಾತಿನ ಮಹತ್ವ ಅಭಿವ್ಯಕ್ತಗೊಂಡಿದೆ. ಶಾರದೆ ಮತ್ತು ಸರಸ್ವತಿ ಎಂಬವುಗಳು, ಒಂದೇ ದೇವತೆಯ ಎರಡು ಹೆಸರುಗಳಷ್ಟೆ; ಸರಸ್ವತಿ ಎಂಬುದಕ್ಕೆ ಸರಸೋತಿ, ಸರಸಾತಿ, ಸರಸತಿ ಮೊದಲಾದ ಪ್ರಯೋಗಗಳಿವೆ. ರಾಗಿಕಲ್ಲನ್ನೇ ಸರಸ್ವತಿಯೆಂದು ಪೂಜಿಸುವ ಪರಿಕಲ್ಪನೆ ನವೀನವಾಗಿದೆ. ಅಲ್ಲದೆ ಬೀಸುವ ಕ್ರಿಯೆಯಲ್ಲಿ ಸರಸ್ವತಿಯು (ಹಾಡಿನ ರೂಪದಲ್ಲಿ) ಜತೆಯಾಗಿ ಇರುತ್ತಾಳೆ, ಬೀಸುವುದರಿಂದ ಆಗುವ ಆಯಾಸವನ್ನು ಸರಸ್ವತಿಯು (ಹಾಡು) ಕಳೆಯುತ್ತಾಳೆ ಎಂಬ ಭಾವನೆ ವ್ಯಕ್ತವಾಗಿದೆ. ಸರಸ್ವತಿಯು ಬ್ರಹ್ಮನ ಮಗಳೇ? ಹೆಂಡತಿಯೇ? ಎಂಬ ಯಾವುದೇ ದ್ವಂದ್ವಗಳಿಲ್ಲ. ಜನಪದರ ದೃಷ್ಟಿಯಲ್ಲಿ ಸರಸ್ವತಿಯು ಬ್ರಹ್ಮನ ಹೆಂಡತಿ ಮಾತ್ರ. ಸರಸ್ವತಿಯು ಮಾತು, ಅಕ್ಷರ, ವಿದ್ಯೆ ಮತ್ತು ಹಾಡುಗಳನ್ನು ಕಲಿಸುವ ಅಧ್ಯಾಪಿಕೆ; ದೇವತೆ. ಸರಸ್ವತಿಯು ದೇವತೆಯಾಗಿದ್ದರೂ, ಶಿಷ್ಟ ಸಂಪ್ರದಾಯದಂತೆ ಬೇರೊಂದು ಲೋಕದವಳಲ್ಲ. ತಮ್ಮೊಂದಿಗೇ ಬದುಕುತ್ತಿರುವ, ತಮ್ಮಂತೆಯೇ ಕೆಲಸ ಮಾಡುತ್ತಿರುವ ಆದರೆ ತಮಗೆ ಹಾಡು ಕಲಿಸುವ ಸಹವಾಸಿ ಎಂದೇ ಪರಿಭಾವಿಸಲಾಗಿದೆ. ಮಾತು, ವಿದ್ಯೆ, ಹಾಡು ಇವಿಷ್ಟೇ ಅಲ್ಲದೆ ಒಟ್ಟಾರೆಯಾಗಿ ಕಲಿಯುವ ಇಡೀ ಕ್ರಿಯೆಯನ್ನೇ ಸರಸ್ವತಿ ಎಂದು ಪರಿಭಾವಿಸಿರುವುದನ್ನು ಕಾಣಬಹುದು.
 
ಚಿತ್ರಕಲೆಯಲ್ಲಿ ಸರಸ್ವತಿಯನ್ನು ವಿದ್ಯಾದೇವತೆಯ ಸ್ವರೂಪದಲ್ಲಿ ಮಾತ್ರ ಅಭಿವ್ಯಕ್ತಿಸಲಾಗಿದೆ. ವಸ್ತ್ರಾಭರಣಗಳಲ್ಲಿ ವೈವಿಧ್ಯಯಿರುವುದಿಲ್ಲ. ಭಾರತೀಯ ಸ್ತ್ರೀಯರು ಪಾರಂಪರಿಕ ತೊಡುಗೆಯಾದ [[ಸೀರೆ]], [[ರವಿಕೆ]] ಸರಸ್ವತಿಯ ಚಿತ್ರಗಳಲ್ಲಿಯೂ ಕಂಡು ಬರುತ್ತದೆ. ಬಹುತೇಕ ಆಧುನಿಕ ಸರಸ್ವತಿಯ ಚಿತ್ರಗಳಿಗೆ [[ರವಿವರ್ಮ]]ನ ಸರಸ್ವತಿಯ ಚಿತ್ರವೇ ಮೂಲ ಆಕರವಾಗಿದೆ. [[ಮೈಸೂರು]] ಮತ್ತು [[ತಂಜಾವೂರು]] ಶೈಲಿಯ ಸರಸ್ವತಿಯ ಚಿತ್ರಗಳು ಮಂಟಪಗಳಲ್ಲಿರುವಂತೆ ಸಂಯೋಜಿತವಾಗಿದ್ದರೆ, ಆಧುನಿಕ ಚಿತ್ರಗಳೆಲ್ಲವೂ ಪ್ರಕೃತಿಯ ನಡುವಿನಲ್ಲಿರುವಂತೆ ಚಿತ್ರಿತವಾಗಿವೆ. ಕೆಲವು ನವ್ಯವೆನ್ನಬಹುದಾದ ರಚನೆಗಳಲ್ಲಿ ರೇಖೆಗಳೇ ಪ್ರಧಾನವಾಗಿರುತ್ತವೆ. ಚಿತ್ರಕಲೆಯಲ್ಲಿ ವಿದ್ಯಾದೇವತೆಯಾಗಿ ಮಾತ್ರ ಚಿತ್ರಿತಳಾಗಿದ್ದಾಳೆ. ಕೆಲವೇ ಕೆಲವು ರೇಖೆಗಳನ್ನು ಬಳಸಿ, ಸರಸ್ವತಿಯನ್ನು ವಿದ್ಯಾದೇವತೆಯನ್ನಾಗಿಯೂ, ನದಿದೇವತೆಯನ್ನಾಗಿಯೂ ಬಿಂಬಿಸುವಲ್ಲಿ [[ಎಂ.ಎಫ಼್.ಹುಸೇನ್ | ಹುಸೇನ]]ರ ಚಿತ್ರ ಯಶಸ್ವಿಯಾಗಿದೆ. ಇನ್ನೊಬ್ಬ ಕಲಾವಿದ ರುದ್ರಕುಮಾರ್ ಝಾ ಅವರ ಚಿತ್ರದಲ್ಲೂ ಸರಸ್ವತಿ ನಗ್ನವಾಗಿಯೇ ಇದ್ದಾಳೆ. ಪ್ರಾಚೀನ ಶಿಲ್ಪಗಳಲ್ಲು ನಗ್ನತೆಯಿದೆ; ಆದರೆ ಅಶ್ಲೀಲತೆಯಿಲ್ಲ ! ಆದರೆ ಹುಸೇನರ ಚಿತ್ರವೊಂದಕ್ಕೆ ವಿರೋಧ ವ್ಯಕ್ತವಾಗಿದ್ದು ಮಾತ್ರ ದುರದೃಷ್ಟಕರ. ಹಾಗೆ ನೋಡಿದರೆ ಪುರಾಣಗಳಲ್ಲಿಯೇ ಸರಸ್ವತಿಯನ್ನು ಅತ್ಯಂತ ಕೆಟ್ಟದ್ದಾಗಿ ಚಿತ್ರಿಸಿರುವುದನ್ನು ಕಾಣಬಹುದಾಗಿದೆ!
 
[[ಕರ್ನಾಟಕ]]ದಲ್ಲಿ ಪೂರ್ಣರೂಪದ ಬೌದ್ಧ ದೇವಾಲಯಗಳಾಗಲೀ ಸರಸ್ವತೀ ಶಿಲ್ಪಗಳಾಗಲೀ ದೊರೆತಿಲ್ಲ. ಬೌದ್ಧಾಲಯಗಳ ಅವಶೇಷಗಳು [[ಗುಲ್ಬರ್ಗಾ]] ಜಿಲ್ಲೆಯ ಸನ್ನತಿ ಮತ್ತು [[ಬೆಂಗಳೂರು]] ಗ್ರಾಮಾಂತರ ಜಿಲ್ಲೆಯ [[ರಾಜಘಟ್ಟ]] ಮುಂತಾದ ಕಡೆ ಕಂಡುಬಂದರೂ ಸರಸ್ವತೀ ಶಿಲ್ಪಗಳು ವರದಿಯಾಗಿಲ್ಲ. ಜೈನ[[ಬಸದಿ]]ಗಳಲ್ಲಿ ಸಿಗುವ ಸರಸ್ವತಿಶಿಲ್ಪಗಳ ಲಕ್ಷಣಗಳೇ ಶಿವ ಅಥವಾ ಕೇಶವ ದೇವಾಲಯಗಳಲ್ಲಿನ ಸರಸ್ವತಿಶಿಲ್ಪಗಳಲ್ಲೂ ಕಾಣುತ್ತವೆ. ತಾಂತ್ರಿಕಸರಸ್ವತಿಯ ಶಿಲ್ಪಗಳು ದೊರೆಯುವುದಿಲ್ಲವಾದರೂ, ದುರ್ಗಿಯೇ ಪುಸ್ತಕವನ್ನು ಹಿಡಿದು ಸರಸ್ವತಿಯಾಗಿ ನಿಂತಿರುವುದನ್ನು ಕಾಣಬಹುದು. ಶಿಲ್ಪಿಗಳು ಸರಸ್ವತಿಯನ್ನು ಬ್ರಹ್ಮನ ರಾಣಿಯೆಂದೇ ಚಿತ್ರಿಸಿದ್ದಾರೆ. ಆಕೆ ಬ್ರಹ್ಮನ ಮಗಳೆಂಬ ಕಲ್ಪನೆ ಶಿಲ್ಪಗಳಲ್ಲಿ ಎಲ್ಲಿಯೂ ಬಿಂಬಿತವಾಗಿಲ್ಲ. ‘ಪರಮಜಿನೇಂದ್ರವಾಣಿಯೇ ಸರಸ್ವತೀ’ ಆಗಿದ್ದರೂ, ಜೈನಧರ್ಮೀಯರೂ ಸಹ ಸರಸ್ವತೀ ಶಿಲ್ಪಗಳನ್ನು ನಿರ್ಮಿಸಿದ್ದಾರೆ; ಪೂಜಿಸಿದ್ದಾರೆ. ಸರಸ್ವತೀ ಶಿಲ್ಪಗಳಿಗೆ ನಿರ್ದಿಷ್ಟವಾದ ಶಿಲ್ಪಲಕ್ಷ್ಷಣಗಳಿದ್ದರೂ ಸಾಹಿತ್ಯಕ ಆಧಾರಗಳಿದ್ದಾಗ್ಯೂ, ಕರ್ನಾಟಕದ ಶಿಲ್ಪಾಚಾರ್ಯರು ಸ್ವತಂತ್ರವಹಿಸಿ ಹತ್ತು ಹಲವಾರು ಸ್ವರೂಪಗಳಲ್ಲಿ ಸರಸ್ವತೀ ಶಿಲ್ಪಗಳನ್ನು ನಿರ್ಮಿಸಿದ್ದಾರೆ. ಸರಸ್ವತಿಗೆ ಬೇರೆ ಬೇರೆ ಸ್ವರೂಪಗಳು, ಬ್ರಹ್ಮನ ಪತ್ನಿ ಮತ್ತು ಮಗಳು ಎಂಬ ಪರಿಕಲ್ಪನೆಗಳು ಇದ್ದಾಗ್ಯೂ, ಆಕೆ ವಿದ್ಯಾದೇವತೆಯೆಂಬ ಭಾವನೆ ಮಾತ್ರ ಸಾರ್ವತ್ರಿಕವಾದದ್ದು, ಸಾರ್ವಕಾಲಿಕವಾದದ್ದು.
"https://kn.wikipedia.org/wiki/ಸರಸ್ವತಿ" ಇಂದ ಪಡೆಯಲ್ಪಟ್ಟಿದೆ