ವೀಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
೪) ಘನ (ಲೋಹ, ಮಣ್ಣು ಅಥವಾ ಮರದ ವಾದ್ಯಗಳು)
 
ವೀಣೆ ತತ ಅಂದರೆ ತಂತೀವಾದ್ಯಗಳ ಗುಂಪಿಗೆ ಸೇರುತ್ತದೆ. ತಂತಿಗಳ ಮೂಲಕ ನಾದೋತ್ಪತ್ತಿಯಾಗುವ ವಾದ್ಯಗಳೇ ತತವಾದ್ಯಗಳು. ತಂತೀ ವಾದ್ಯಗಳನ್ನು ಶ್ರುತಿ ವಾದ್ಯ ಮತ್ತು ಸಂಗೀತಾವಾದ್ಯಗಳೆಂದು ವಿಂಗಡಿಸಲಾಗಿದೆ. ಗಾಯನ ಅಥವಾ ವಾದನಗಳಲ್ಲಿ ಶ್ರುತಿಗಾಗಿ ಉಪಯೋಗಿಸಲ್ಪಡುವುದು "ತಂಬೂರಿ" ಮತ್ತು ಸಂಗೀತವನ್ನು ಗಾಯನಕ್ಕೆ ಬದಲಾಗಿ ವಾದ್ಯದಲ್ಲಿ ಹೊಮ್ಮಿಸಲು ಉಪಯೋಗಿಸಲ್ಪಡುವುದು "ವೀಣೆ". ವೀಣೆ ಋಗ್ವೇದದಲ್ಲಿ ಮತ್ತು ಯಜುರ್ವೇದದಲ್ಲಿ ಕೂಡ ಪ್ರಸ್ತಾಪಿಸಲ್ಪಟ್ಟಿದೆಯಂತೆ. ವೀಣೆಯ ಉತ್ಪತ್ತಿಗೆ ನಾದಪ್ರಿಯನಾದ ಶಂಕರನು ಕಾರಣವಿರಬಹುದು ಏಕೆಂದರೆ "ರುದ್ರವೀಣೆ" ಎಂದು ಕೂಡ ವಿಶಿಷ್ಟವಾದ ಒಂದು ವೀಣೆ ಇದೆ. ದೇವಿ ಸರಸ್ವತಿಯಲ್ಲದೆ ವಿಶ್ವಾವಸು, ತುಂಬುರು ಮತ್ತು ನಾರದರು ಕೂಡ ವೈಣಿಕರೇ ಮತ್ತು ತುಂಬುರರ ವೀಣೆಯ ಹೆಸರು "ಕಲಾವತೀ" ಎಂದೂ, ವಿಶ್ವಾವಸುವಿನ ವೀಣೆಯ ಹೆಸರು "ಬೃಹತೀ" ಎಂದೂ ಮತ್ತು ನಾರದರ ವೀಣೆಯ ಹೆಸರು "ಮಹತಿ" ಎಂದೂ ನಮಗೆ ಪುರಾಣಗಳಿಂದ ತಿಳಿದುಬರುತ್ತದೆ. ವೀಣೆ ಮೋಕ್ಷ ಸಾಧನೆಗೆ ಸುಲಭವಾದ ಹಾದಿ ಎಂದು ಯಾಜ್ಞವಲ್ಕ್ಯರು ತಮ್ಮ ಸ್ಮೃತಿಯಲ್ಲಿ ಹೇಳಿದ್ದಾರೆ. ನಾವು ರಾವಣನ ಕಥೆಯಲ್ಲಿ ಕೂಡ ಕೇಳಿದ್ದೇವೆ - ವೀಣೆಯ ತಂತಿಯೊಂದು ಕಿತ್ತು ಹೋದಾಗ ತನ್ನ ದೇಹದ ಒಂದು ನರವನ್ನೇ ಕಿತ್ತು ತಂತಿಯಾಗಿಸಿ, ವೀಣೆಯ ವಾದನವನ್ನು ಮುಂದುವರೆಸಿದನೆಂದು.
 
ವೀಣೆ ಈಗಿರುವ ಸ್ವರೂಪಕ್ಕೆ ಬರುವ ಮೊದಲು ಅನೇಕ ಬದಲಾವಣೆಗಳನ್ನು ಹೊಂದಿದ್ದಾಗಿರಬಹುದು. ಕಾಳಿದಾಸನ ’ಶ್ಯಾಮಲಾ ದಂಡಕ’ದಲ್ಲಿ "ಮಾಣಿಕ್ಯವೀಣಾಂ ಉಪಲಾಲಯಂತೀಂ " ಎನ್ನುತ್ತಾ ಶ್ಯಾಮಲೆಯಾದ ಶಾರದಾಂಬೆಯು ಮಾಣಿಕ್ಯ ಮಯವಾದ ವೀಣೆಯನ್ನು ನುಡಿಸುತ್ತಿದ್ದಳು ಎಂದಿದ್ದಾರೆ. ಹಾಗೇ ಪ್ರತಿಜ್ಞಾ ಯೌಗಂಧರಾಯಣ ನಾಟಕದಲ್ಲಿ ರಾಜಾ ಉದಯನು "ಘೋಷವತೀ" ಎಂಬ ವೀಣೆಯನ್ನು ನುಡಿಸಿದ್ದನೆಂದು ಕೂಡ ಉಲ್ಲೇಖವಿದೆ. ಕರ್ನಾಟಕ ಸಂಗೀತ ತ್ರಿಮೂರ್ತಿಗಳಲ್ಲೊಬ್ಬರಾದ ನಾದಜ್ಯೋತಿ ಶ್ರೀ ಮುತ್ತುಸ್ವಾಮಿ ದೀಕ್ಷಿತರಿಗೆ ಗುರು ಚಿದಂಬರನಾಥ ಯೋಗಿಯ ಅನುಗ್ರಹದಿಂದ ಕಾಶಿಕ್ಷೇತ್ರದಲ್ಲಿ ಗಂಗೆಯಲ್ಲಿ ದೊರೆತ ವೀಣೆಯ ಮೇಲೆ ದೇವನಾಗರಿಯಲ್ಲಿ "ರಾಮ" ಎಂದು ಕೆತ್ತಲ್ಪಟ್ಟಿದೆಯಂತೆ. ಹೀಗೆ ವೀಣೆಯ ಇತಿಹಾಸ ತುಂಬಾ ಹಿಂದಿನದೆಂಬ ಮಾತು ನಮಗೆ ಅರ್ಥವಾಗುತ್ತದೆ.
"https://kn.wikipedia.org/wiki/ವೀಣೆ" ಇಂದ ಪಡೆಯಲ್ಪಟ್ಟಿದೆ