ಅಣು ತಂತ್ರಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
 
===ವಿದಳನ (Fission) ===
ಇದು ಒಂದು ಅತ್ಯಂತ ಮುಖ್ಯ ವಹಿವಾಟು. ನ್ಯೂಟ್ರಾನ್ ಪ್ರವೇಶದ ನಂತರ, ಹೆಚ್ಚಿದ ಚೈತನ್ಯವನ್ನು ತಾಳದೇ ನಾಭಿಯು ಒಡೆದು ಹೋಗಿ, ಎರಡು ಚಿಕ್ಕ ಪರಮಾಣುಗಳು ಉಂಟಾಗುತ್ತವೆ. ಪರಿಣಾಮವಾಗಿ ಅಗಾಧ ಶಕ್ತಿ ಹಾಗೂ ಕೆಲ ಮುಕ್ತ ನ್ಯೂಟ್ರಾನ್ ಗಳು ಬಿಡುಗದೆಯಾಗುತ್ತವೆ. ಈ ರೀತಿ ಬಿಡುಗಡೆಯಾದ ಶಕ್ತಿಯನ್ನು ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳುತ್ತಾರೆ. ಮುಕ್ತ ನ್ಯೂಟ್ರಾನ್ ಗಳು ಮತ್ತೆ ಮುಂದಿನ ವಿದಳನ ಕ್ರಿಯೆಯನ್ನು ನಡೆಸುತ್ತವೆ. ಇದೊಂದು ಸರಣಿ ಪ್ರಕ್ರಿಯೆ (chain reaction). ಇಂತಹ ಸರಣಿ ಪ್ರಕ್ರಿಯೆಯಲ್ಲಿ ಪ್ರತಿ ಸರಣಿಗೆ ಒಂದು ಪೀಳಿಗೆ ಎಂದು ಕರೆಯಲಾಗುತ್ತದೆ.
 
ಜಗತ್ತಿನಲ್ಲಿರುವ ಎಲ್ಲಾ ವಿದ್ಯುತ್ ಉತ್ಪಾದನ ಪರಮಾಣು ರಿಯಾಕ್ಟರುಗಳು ಇದೇ ಸಿದ್ಧಾಂತದ ಮೇಲೆಯೇ ಕಾರ್ಯನಿರ್ವಹಿಸುತ್ತಿವೆ.
 
==ಪರಮಾಣು ಇಂಧನ==
ಯಾವ ಪರಮಾಣುವಿನ ನಾಭಿಯನ್ನು ಸುಲಭವಾಗಿ ವಿದಳನ ಕ್ರಿಯೆಗೆ ಒಳಪಡಿಸಬಹುದೋ, ಆ ಪರಮಾಣುವಿನ ಮೂಲವಸ್ತುವನ್ನು ಪರಮಾಣು ಇಂಧನವನ್ನಾಗಿ ಉಪಯೋಗಿಸಬಹುದು. ಸಾಮಾನ್ಯವಾಗಿ ನೈಸರ್ಗಿಕವಾಗಿ ದೊರೆಯುವ ಯುರೇನಿಮ್ ಲೋಹವನ್ನು ಇಂಧನವಾಗಿ ಉಪಯೋಗಿಸುತ್ತಾರೆ. ಅಲ್ಲದೇ, ಬೇರೆ ರಿಯಾಕ್ಟರುಗಳಲ್ಲಿ ಹುಟ್ಟಿಸಿದ ಪ್ಲುಟೋನಿಯಮ್ ಲೋಹವನ್ನೂ ಕೂಡ ಇಂಧನವನ್ನಾಗಿ ಉಪಯೋಗಿಸುತ್ತಾರೆ.
"https://kn.wikipedia.org/wiki/ಅಣು_ತಂತ್ರಜ್ಞಾನ" ಇಂದ ಪಡೆಯಲ್ಪಟ್ಟಿದೆ