"ಮುರಿಗೆಪ್ಪ ಚನ್ನವೀರಪ್ಪ ಮೋದಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
[[ಚಿತ್ರ:Dr.MCM-2.jpg|250px|thumb|right|'ಡಾ. ಮೋದಿಯವರ ದವಾಖಾನೆ']]
'ಮುರಿಗೆಪ್ಪ ಚನ್ನವೀರಪ್ಪ ಮೋದಿ'ಯವರ ಜನ್ಮ [[ಅಕ್ಟೋಬರ್ ೦೪]] [[೧೯೧೬]]ರಲ್ಲಿ [[ಬಾಗಲಕೋಟೆ]]ಯ 'ಬೀಳಗಿ' ಗ್ರಾಮದಲ್ಲಾಯಿತು. ಮೋದಿಯವರು ಜಮಖಂಡಿಯ ಪಿ ಬಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ನಂತರ [[ಬೆಳಗಾವಿ]] 'ಆಯುರ್ವೇದ ಕಾಲೇಜಿ'ನಲ್ಲಿ ಓದಿ 'ಕೆಬಿ‌ಎಚ್‌ಬಿ ಕಣ್ಣಿನ ಆಸ್ಪತ್ರೆ' ಹಾಗೂ 'ರಾಮವಾಡಿ ಕಣ್ಣಿನ ಆಸ್ಪತ್ರೆ'ಯಲ್ಲಿ ವೈದ್ಯ ಶಿಕ್ಷಣ ಪಡೆದರು. ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿದ ಮೋದಿಯವರು [[ಕೊಲಂಬಿಯಾ]] ಮತ್ತು [[ನ್ಯೂಯಾರ್ಕ್]] [[ವಿಶ್ವವಿದ್ಯಾಲಯ|ವಿಶ್ವವಿದ್ಯಾಲಯಗಳಲ್ಲಿ ]][[ಸ್ನಾತಕೋತ್ತರ]] ಪದವಿಗಳಿಸಿದರು. [[ಬೆಳಗಾವಿ|ಬೆಳಗಾವಿಯಲ್ಲಿ]] ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ [[ದಾವಣಗೆರೆ|ದಾವಣಗೆರೆಯಲ್ಲಿ]] ನೆಲೆಸಿದರು. ೧೯೪೨ರಲ್ಲಿ [[ಕ್ವಿಟ್ ಇಂಡಿಯಾ ಚಳುವಳಿ|ಕ್ವಿಟ್ ಇಂಡಿಯಾ ಚಳುವಳಿಯ]] ಸಮಯದಲ್ಲಿ [[ಮಹಾತ್ಮ ಗಾಂಧಿ|ಮಹಾತ್ಮ ಗಾಂಧಿಯವರ]] ಭಾಷಣದಿಂದ ಪ್ರೇರಿತರಾಗಿ ಕೆಲವೆ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು. [[ಕರ್ನಾಟಕ]], [[ಆಂಧ್ರ ಪ್ರದೇಶ]], [[ತಮಿಳುನಾಡು]], [[ಮಹಾರಾಷ್ಟ್ರ]] ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡುತ್ತಿದ್ದರು. [[ಕಣ್ಣಿನ ಪೊರೆ]] (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು. 'ರಷ್ಯಾ' ಮತ್ತು 'ಅಮೇರಿಕ' ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಸಹ ತಮ್ಮ ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದರು. [[ದಾವಣಗೆರೆ]],[[ಬೆಂಗಳೂರು]] ಮತ್ತು [[ಬೆಳಗಾವಿ]]ಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು. 'ಸಾಮೂಹಿಕ ನೇತ್ರ ಚಿಕಿತ್ಸೆ' ಹಾಗೂ 'ಸಂಚಾರಿ ಘಟಕ'ವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು.
 
ಕಣ್ಣಿನ ಆರೋಗ್ಯದ ಕುರಿತು ಅವರ ಮನಸ್ಸು ಎಷ್ಟು ತುಡಿಯುತ್ತಿತ್ತೆಂದರೆ, ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಉಚಿತವಾಗಿ ಪರೀಕ್ಷಿಸಿ ಸಲಹೆ ನೀಡುತ್ತಿದ್ದರು.
ಡಾ. ಮೋದಿಯವರೇ ಹೇಳುತ್ತಿದ್ದ ಹಾಗೆ ಮೊದ ಮೊದಲು ರೋಗಿಗಳು ಇವರ ಶಿಬಿರಕ್ಕೆ ಬರಲು ಹಿಂಜರಿಯುತ್ತಿದ್ದರು. 'ಆಪರೇಷನ್‌' ಪದ ಕೇಳಿ ಶಿಬಿರಕ್ಕೆ ಬಂದವರಲ್ಲಿ ಕೆಲವರು ಓಡಿ ಹೋಗುತ್ತಿದ್ದರು. ಆದರೆ ಕ್ರಮೇಣ ಶಸ್ತ್ರ ಚಿಕಿತ್ಸೆಗೊಳಗಾಗಿ ದೃಷ್ಟಿಯನ್ನು ಮತ್ತೆ ಪಡೆದವರನ್ನು ಕಂಡು ಶಿಬಿರಕ್ಕೆ ಬರುವವರು ಹೆಚ್ಚಾದರು.
ಅವರ ಸೇವೆಯನ್ನು ಗುರುತಿಸಿದ ಅಂದಿನ ಕರ್ನಾಟಕ ಸರ್ಕಾರ, 'ಏಕವ್ಯಕ್ತಿಯ ಯುದ್ಧ' (one man's war) ಎಂಬ ಒಂದು ಕಿರು ದೃಶ್ಯ ದಾಖಲೆಯನ್ನು ಎಂ.ಎನ್. ಸತ್ಯು ಅವರ ನಿರ್ದೇಶನದಲ್ಲಿ ತಯಾರಿಸಿತ್ತು,ಹೀಗೆ ಲಕ್ಷಗಟ್ಟಲೆ ಕುರುಡರಿಗೆ ದೃಷ್ಟಿ ನೀಡಿದ ಆ ಮಹಾನ್ ವ್ಯಕ್ತಿಯ ಜ್ಞಾಪಕಾರ್ಥ ದಾವಣಗೆರೆಯಲ್ಲಿ ಮತ್ತು ಬೆಂಗಳೂರಿನಲ್ಲಿ ಮೋದಿ ಕಣ್ಣಿನ ಆಸ್ಪತ್ರೆಗಳಿವೆ.."ನಮನ"
 
==ಗಿನ್ನಿಸ್ ದಾಖಲೆ==
ಮೋದಿಯವರು [[ತಿರುಪತಿ]]ಯಲ್ಲಿ ಒಂದೆ ದಿನದಲ್ಲಿ ೮೩೩ ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ ೭ ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಕೂಡ ಒಂದು ವಿಶ್ವ ದಾಖಲೆ. ಇವುಗಳನ್ನು [[ಗಿನ್ನಿಸ್ ದಾಖಲೆಗಳ ಪುಸ್ತಕ|ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ]] ಸೇರಿಸಲಾಗಿದೆ. ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿದ್ದಾರೆ.
೧,೦೦೭

edits

"https://kn.wikipedia.org/wiki/ವಿಶೇಷ:MobileDiff/315850" ಇಂದ ಪಡೆಯಲ್ಪಟ್ಟಿದೆ