ದಾಂಡೇಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೮ ನೇ ಸಾಲು:
}}
'''ದಾಂಡೇಲಿ''' ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಒಂದು ಕೈಗಾರಿಕೆ ಸಾಂದ್ರಿತ ಊರು. ಕಾಳಿ ನದಿಯ ದಡದಲ್ಲಿರುವ ಪುಟ್ಟ ಪಟ್ಟಣ ಎಂದೂ ಹೇಳಬಹುದು. ದಟ್ಟ ಅರಣ್ಯದ ಮಧ್ಯೆ ಹಲವು ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಿದ್ದರಿಂದಾಗಿ, ಉತ್ತರ ಭಾರತದ ಉದ್ಯಮಿಗಳು ಇಲ್ಲಿಗೆ ಬಂದು ಕಾಗದ ಕಾರ್ಖಾನೆ, ಕಬ್ಬಿಣದ ವಿವಿಧ ಉತ್ಪನ್ನಗಳು, ಮೆದು ಮರ ಕಾರ್ಖಾನೆಗಳನ್ನು ಸ್ಥಾಪಿಸಿದರು.
 
==ಹೆಸರಿನ ಹಿಂದಿನ ಕಥೆ==
ಇಲ್ಲಿರುವ ದಟ್ಟ ದಂಡಕಾರಣ್ಯ ಇರುವುದರಿಂದ ದಾಂಡೇಲಿ ಪಟ್ಟಣವೆಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಅಲ್ಲದೇ ಇಲ್ಲಿರುವ ದಾಂಡೇಲಪ್ಪ ದೇವಸ್ಥಾನದಿಂದಾಗಿ ದಾಂಡೇಲಿ ಎಂಬ ಹೆಸರು ಬಂದಿದೆ ಎಂಬ ಇನ್ನೊಂದು ನಂಬಿಕೆ ಇದೆ. ದಂಡಕನಾಯಕ ಎಂಬ ರಾಜನು ಇಲ್ಲಿರುವ ಪ್ರಕೃತಿ ಸೌಂದರ್ಯವನ್ನು ನೋಡಿ ಈ ಅರಣ್ಯಕ್ಕೆ ತನ್ನದೇ ಹೆಸರು ಇರಲಿ ಎಂದು ಇಟ್ಟನೆಂದು ನಂತರ ಕ್ರಮೇಣ ದಾಂಡೇಲಿ ಎಂದಾಯಿತು ಎಂಬುದಾಗಿ ಮತ್ತೊಂದು ಹಿನ್ನೆಲೆಯಿದೆ ಎಂದು ಸ್ಥಳೀಯರು ಹೇಳುತ್ತಾರೆ.
 
==ಜನ ಜೀವನ ಮತ್ತು ಭಾಷೆ==
 
ದಾಂಡೇಲಿಯು ಜನಜೀವನದ ದೃಷ್ಟಿಯಿಂದ ಒಂದು ಮಿಶ್ರ ಸಂಸ್ಕೃತಿಯ ದ್ವೀಪದಂತೆ ಎನ್ನಬಹುದು. ಉತ್ತರ ಭಾರತದ ಹಲವು ಕೆಲಸಗಾರರು ಇರುವುದರಿಂದಾಗಿ, ಹಿಂದಿಯೂ ಇಲ್ಲಿ ಒಂದು ಸಂಪರ್ಕಭಾಷೆ. ಇಲ್ಲಿ ಕನ್ನಡ,ಕೊಂಕಣಿ,ಹಿಂದಿ ಭಾಷೆಗಳು ಪ್ರಚಲಿತದಲ್ಲಿವೆ.
 
==ಸಂಪರ್ಕ==
"https://kn.wikipedia.org/wiki/ದಾಂಡೇಲಿ" ಇಂದ ಪಡೆಯಲ್ಪಟ್ಟಿದೆ