"ಅಂತರ್ಜಲ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
===ಅಂತರ್ಜಲ ಮಾಲಿನ್ಯ===
 
ಅಂತರ್ಜಲ ಭಂಡಾರವೂ ಕೂಡ ಮಾಲಿನ್ಯದಿಂದ ಮುಕ್ತವಾಗಿಲ್ಲ. ವಿಶೇಷವಾಗಿ ಕೈಗಾರಿಕೆಗಳಿಂದ ಹೊರಬೀಳುವ ತ್ಯಾಜ್ಯ ಹೆಚ್ಚು ವಿಷಯುಕ್ತ ರಾಸಾಯನಿಕಗಳಿಂದ ಕೂಡಿದ್ದರೆ, ನಿಧಾನ ಗತಿಯಲ್ಲಿ ಅದು ಅಂತರ್ಜಲ ಭಂಡಾರವನ್ನು ಸೇರಬಲ್ಲದು. ನೀರನ್ನು ಮೀರೆಳೆದರೆ ಹೆಚ್ಚಿನ ಪ್ರಮಾಣದ ಲವಣಗಳು ಸಾರೀಕರಣವಾಗುವುದುಂಟು. ಗ್ರನೈಟ್ ಪ್ರಧಾನವಾಗಿರುವ ಪ್ರದೇಶಗಳಲ್ಲಿ ಅದರಲ್ಲಿ ಸಹಜವಾಗಿರುವ [[ಫ್ಲೂರೈಡ್]] ಖನಿಜ ನೀರಿನಲ್ಲಿ ವಿಲೀನವಾಗಿ ಅದನ್ನು ಬಳಸಿದವರಿಗೆ ಪ್ಲೂರೋಸಿಸ್ ಎಂಬ ಕಾಯಿಲೆ ಬಂದಿರುವ ಉದಾಹರಣೆಗಳು ಸಾಕಷ್ಟಿವೆ. ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಮುಂತಾದ ಕಡೆಗಳಲ್ಲಿ ಮೆಕ್ಕಲು ಮಣ್ಣಿನಲ್ಲಿ ಆರ್ಸೆನಿಕ್ ಬೆರೆತು ತೀರ ವಿಷಕಾರಿಯಾಗಿ ಅನೇಕ ಚರ್ಮ ಕಾಯಿಲೆಗೆ ಕಾರಣವಾಗಿರುವುದುಂಟು. ಸೀಸ, ಪಾದರಸ ಮತ್ತು ಆರ್ಸೆನಿಕ್ ಖನಿಜಗಳು ಸುಲಭವಾಗಿ ನೀರಿನಲ್ಲಿ ವಿಲೀನವಾಗುವುದರಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ
 
 
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/327965" ಇಂದ ಪಡೆಯಲ್ಪಟ್ಟಿದೆ