ಭಾರತ ಬಿಟ್ಟು ತೊಲಗಿ ಚಳುವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
[[ಜಪಾನ್|ಜಪಾನಿ]] ಸೇನೆಯು ಭಾರತದ [[ಬರ್ಮಾ]] ಗಡಿಯ ಬಳಿ ತಲುಪಿದ್ದನ್ನು ಕಂಡ ಬ್ರಿಟಿಷರು ಮರುದಿನವೇ ಗಾಂಧಿಯವರನ್ನು ಬಂಧಿಸಿದರು. ಕಾಂಗ್ರೆಸ್ಸಿನ ಎಲ್ಲ ರಾಷ್ಟ್ರೀಯ ನಾಯಕರನ್ನೂ ಬಂಧಿಸಲಾಯಿತು. ನಂತರ ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಲಾಯಿತು. ಇದರಿಂದ ಜನರಲ್ಲಿ ವಿರೋಧಿ ಭಾವನೆ ಇನ್ನೂ ಹೆಚ್ಚಾಯಿತು. ಪಕ್ವ ನಾಯಕತ್ವದ ಅಭಾವದ ಹೊರತಾಗಿಯೂ ಬೃಹತ್ ಪ್ರಮಾಣದಲ್ಲಿ ವಿರೋಧ ಪ್ರದರ್ಶನ ಮತ್ತು ಧರಣಿಗಳು ನಡೆದವು. ಆದರೆ ಎಲ್ಲ ವಿರೋಧಗಳು ಅಹಿಂಸಾತ್ಮಕವಾಗೇನೂ ಉಳಿಯಲಿಲ್ಲ. ಬಾಂಬುಗಳನ್ನು ಸ್ಫೋಟಿಸಲಾಯಿತು, ಸರ್ಕಾರೀ ಕಟ್ಟಡಗಳನ್ನು ಸುಡಲಾಯಿತು, ವಿದ್ಯುತ್ತನ್ನು ನಿಲ್ಲಿಸಲಾಯಿತು, ಮತ್ತು ಸಾರಿಗೆ ಮತ್ತು ಸಂಪರ್ಕಗಲನ್ನು ಕಡಿಯಲಾಯಿತು.
 
ಆದರೆ ಬ್ರಿಟಿಷರು ತ್ವರಿತವಾಗಿ ಪ್ರದರ್ಶನಕಾರರನ್ನು ಬಂಧಿಸಿದರು. ಒಂದು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಂಧಿಸಲಾಯಿತು, ಬೃಹತ್ ಪ್ರಮಾಣದಲ್ಲಿ ದಂಡಗಳನ್ನು ವಿಧಿಸಲಾಯಿತು, ಬಾಂಬುಗಳನ್ನು ವಿರೋಧಿಗಳ ಮೇಲೆ ಬಳಸಲಾಯಿತು, ಮತ್ತು ಪ್ರದರ್ಶನಾಕಾರರನ್ನು ಸಾರ್ವಜನಿಕವಾಗಿ ದಂಡಿಸಲಾಯಿತು. ಬಹಳಷ್ಟು ರಾಷ್ಟ್ರೀಯ ನಾಯಕರು ಭೂಗತರಾಗಿ [[ರೇಡಿಯೋ]] ಸ್ಟೇಷನ್ ಗಳಿಂದ ಜನರಿಗೆ ಸಂದೇಶ ಕೊಡುತ್ತಿದ್ದರು. ಬ್ರಿಟಿಷರು ಇದರಿಂದ ಎಷ್ಟು ಕಂಗಾಲಾಗಿದ್ದರೆಂದರೆ, ಗಾಂಧೀಜಿಅಗಾಂಧೀಜಿ ಮತ್ತು ಇತರ ನಾಯಕರನ್ನು ಬಂಧಿಸಿ [[ದಕ್ಷಿಣ ಆಫ್ರಿಕಾ]] ಅಥವಾ ಯೆಮೆನ್ ದೇಶಕ್ಕೆ ಕೊಂಡೊಯ್ಯಲು ಯುದ್ಧನೌಕೆಯನ್ನು ಕರೆಸುವ ಏರ್ಪಾಡು ಮಾಡಲಾಯಿತು. ಆದರೆ ಇದರಿಂದ ಸಂಘರ್ಷಣೆ ಇನ್ನೂ ತೀವ್ರವಾಗುವುದೆಂಬ ಭಯದಿಂದ ಹೀಗೆ ಮಾಡದಿರಲು ನಿರ್ಧಾರ ಮಾಡಲಾಯಿತು. {{fact}}.
 
ಕಾಂಗ್ರೆಸ್ ಪಕ್ಷದ ನಾಯಕರು ಇಡೀ ಪ್ರಪಂಚದಿಂದ ಮೂರು ವರ್ಷಗಳ ಕಾಲ ಸಂಪರ್ಕ ಕಳೆದುಕೊಂಡರು. ಗಾಂಧೀಜಿಯವರ ಪತ್ನಿ [[ಕಸ್ತೂರ್ ಬಾ ಗಾಂಧಿ]] ಮತ್ತು ಕಾರ್ಯದರ್ಶಿ ಮಹಾದೇವ ದೇಸಾಯಿ ಮರಣದ ನಂತರ ಗಾಂಧಿಯವರ ಆರೋಗ್ಯ ಹದಗೆಟ್ಟಿತು. ಇದರ ಹೊರತಾಗಿಯೂ, [[ಮಹಾತ್ಮಾ ಗಾಂಧಿ]]ಯವರು ೨೧ ದಿನಗಳ ಉಪವಾಸವನ್ನು ಕೈಗೊಂಡು ಚಳುವಳಿಯನ್ನು ಮುಂದುವರೆಸಲು ಅತಿಮಾನುಷ ಪ್ರಯತ್ನ ತೋರಿದರು. ಅವರ ಆರೋಗ್ಯ ಇನ್ನೂ ಹದಗೆಟ್ಟ ಕಾರಣ ಬ್ರಿಟಿಷರು ಗಾಂಧಿಯವರನ್ನಿ [[೧೯೪೪]]ರಲ್ಲಿ ಬಿಡುಗಡೆಗೊಳಿಸಿದರೂ ಕೂಡ, ಅವರು ಕಾಂಗ್ರೆಸ್ ನಾಯಕರ ಬಿಡುಗಡೆಗೆ ಒತ್ತಾಯಿಸಿ ಧರಣಿಯನ್ನು ಮುಂದುವರೆಸಿದರು.