ಅಂತರ್ಜಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೧ ನೇ ಸಾಲು:
===ಕರ್ನಾಟಕ ಅಂತರ್ಜಲ ಪ್ರಾಧಿಕಾರ===
 
ನಗರಗಳಲ್ಲಿ ವಿಶೇಷವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹತ್ತು ಜಿಲ್ಲೆಗಳ 35 ತಾಲ್ಲೂಕುಗಳಲ್ಲಿ ಅಂತರ್ಜಲದ ಮೀರೆಳೆತದಿಂದಾಗಿ ಉದ್ಭವಿಸಿದ ಸಮಸ್ಯೆಯನ್ನು ಪರಿಗಣಿಸಿದ ಕರ್ನಾಟಕ ಸರ್ಕಾರ 2011ರಲ್ಲೇ ಕರ್ನಾಟಕ ಅಂತರ್ಜಲ ಕಾಯ್ದೆ ( ನಿಯಂತ್ರಣ ಹಾಗೂ ನಿರ್ವಹಣೆ) ಕಾಯ್ದೆಗೆ ಒಪ್ಪಿಗೆ ನೀಡಿ, ಇದರ ಭಾಗವಾಗಿ 2012ರಲ್ಲಿ [[ಕರ್ನಾಟಕ ಅಂತರ್ಜಲ ಪ್ರಾಧಿಕಾರ]] ರಚಿಸಿತು. ಈ ಕಾಯ್ದೆಯನ್ವಯ ಸದ್ಯ ಬೆಂಗಳೂರು ನಗರದ ಎಲ್ಲ ಕೊಳವೆ ಬಾವಿಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹಾಗೆಯೇ ಹೊಸತಾಗಿ ಕೊಳವೆ ಬಾವಿಗಳನ್ನು ತೆಗೆಯಲು ಸರ್ಕಾರದ ಅನುಮತಿ ಪಡೆಯಬೇಕು.
 
ಬೆಂಗಳೂರು ನಗರದ ವಾರ್ಷಿಕ ಮಳೆ ಪ್ರಮಾಣ ಸುಮಾರು 900 ಮಿ.ಮೀ.ಗಳಷ್ಟು. ಬಿದ್ದ ಮಳೆ ನೆಲದಾಳದಲ್ಲಿ ಜಿನುಗಲು ಟಾರ್ ರಸ್ತೆಗಳು ತಡೆಯೊಡ್ಡುತ್ತವೆ. ಅಲ್ಲದೆ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಹಾಗೂ ಜಲಮಂಡಳಿಗೆ ಸೇರಿದ ಸುಮಾರು ಮೂರು ಲಕ್ಷಕ್ಕೂ ಅಧಿಕ ಕೊಳವೆ ಬಾವಿಗಳು ಬೆಂಗಳೂರು ನಗರದಲ್ಲಿವೆ. ಸರ್ಕಾರದ ನಿಯಮವನ್ನು ಮೀರಿ ನೋಂದಣಿ ಮಾಡಿಕೊಳ್ಳದೆ ಕೊಳವೆ ಬಾವಿಗಳನ್ನು ತೋಡಿದರೆ ಗರಿಷ್ಠ ರೂ. 10,000 ದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.
"https://kn.wikipedia.org/wiki/ಅಂತರ್ಜಲ" ಇಂದ ಪಡೆಯಲ್ಪಟ್ಟಿದೆ