ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೨ ನೇ ಸಾಲು:
* ೬] '''ಸತ್ಯ - ಮಿಥ್ಯ ವಿಚಾರ ;'''
 
**<big>ತ್ರಿವಿಧ ಸತ್ತೆಗಳು :</big>
**೧.'''ಪ್ರಾಪಂಚಿಕ ಸತ್ತೆ :''' ಅನುಭವಕ್ಕೆ ಬರುವುದು ಸತ್ಯವೇ ಆಗಿರುತ್ತದೆ. ಸ್ವಲ್ಪ ಕಾಲ ಇದ್ದು , ಆನಂತರ ಇಲ್ಲವಾಗುವುದು ಅನಿತ್ಯವಾದವುಗಳು ; ಅದು ಈ ನಮ್ಮ ಅನುಭವಕ್ಕೆ ಬರುವ ಪ್ರಪಂಚಕ್ಕೆ ಅನ್ವಯಿಸುತ್ತದೆ. ಇದು ಪ್ರಾಪಂಚಿಕ ಸತ್ಯ ಅಥವಾ ವ್ಯವಹಾರಿಕ ಸತ್ಯ. ಆದ್ದರಿಂದ ನಾವು ಕಾಣವ ಈ ಜಗತ್ತು ಮತ್ತು ಅದರ ಅನುಭವ ಪೂರ್ಣ ಬ್ರಮೆಯಲ್ಲ. ಪೂರ್ಣ ಸತ್ಯವೂ ಅಲ್ಲ. ಅವು ಅನಿತ್ಯವಾದುದರಿಂದ ಮಿಥ್ಯೆ. ಭೂ, ಭವಿಷ್ಯತ್, ವರ್ತಮಾನ ಈ ತ್ರಿಕಾಲದಲ್ಲೂ ಇರುವುದಲ್ಲ. ಮಿಥ್ಯೆ ಎಂದರೆ ಬಂಜೆಯ ಮಗನಂತೆ ಪೂರ್ಣ ಸುಳ್ಳಲ್ಲ
**೨.'''ಪ್ರಾತಿಭಾಸಿಕ ಸತ್ತೆ :''' ಇದು ತಿರಾ ಕೆಳಗಿನ ಹಂತದ ಸತ್ಯ. ನಂಬುಗೆ ಇರುವ ವರೆಗೆ ಮಾತ್ರ ಇರುತ್ತದೆ. ಉದಾಹರಣೆಗೆ ಹಗ್ಗವನ್ನು ಹಾವೆಂದು ತಿಳಿಯುವುದು. ಹಾವು ಅನುಭವಕ್ಕೆ ಬರುವುದರಿಂದ ಇಲ್ಲವೆನ್ನುವಂತಿಲ್ಲ; ಅನುಭವ ಇರುವವರೆಗೂ ಸತ್ಯವಾಗೇ ಇರುತ್ತದೆ. ಇದು ಪ್ರಾತಿಭಾಸಿಕ ಸತ್ಯ
**೩.'''ಪಾರಮಾರ್ಥಿಕ ಸತ್ತೆ :''' ಇದು ತ್ರಿಕಾಲಾಬಾಧಿತ ಸತ್ಯ. ಭೂತ ಭವಿಷ್ಯತ್ ವರ್ತಮಾನಗಳಲ್ಲೂ ಬಾಧಿತವಾಗದೆ ಇರುವುದು. ಎಚ್ಚರ ಕನಸು ನಿದ್ದೆ ಈಮೂರೂ ಅವಸ್ಥೆಗಳಲ್ಲೂ ಸಾಕ್ಷಿರೂಪದಲ್ಲಿ ಒಂದೇ ರೀತಿಯಾಗಿರುವುದು. ಮೂರೂ ಕಾಲಗಳಲ್ಲಿ ಮೂರೂ ಅವಸ್ಥೆಗಳಲ್ಲಿ ಬದಲಾವಣೆ ಆಗುವುದಿಲ್ಲ ; ಒಂದೇರೀತಿಇರುತ್ತದೆ. ಇದು ಪಾರಮಾರ್ಥಿಕ ಸತ್ಯ. ಈ ಗುಣವನ್ನು ಹೊಂದಿರುವುದು, ಈತತ್ವಕ್ಕೆ ಅರ್ಹವದುದು ಬ್ರಹ್ಮವೊಂದೇ. ಆದ್ದರಿಂದ ಬ್ರಹ್ಮ ವೊಂದೇ ಪಾರಮಾರ್ಥಿಕ ಸತ್ಯ ವಾಗಿದೆ.
*'''೭] ಜೀವ - ಬ್ರಹ್ಮ ತತ್ವ :''' ಮನ, ಬುದ್ಧಿ, ಅಹಂಕಾರ, ಚಿತ್ತ, ಈ ಅಂತಃಕರಣ ದಿಂದ ಆವರಿಸಲ್ಪಟ್ಟ ಮೂಲ ಚೈತನ್ಯವೇ ಜೀವ. ಮಾಯೆಯಿಂದ ಆವರಿಸಲ್ಪಟ್ಟ ಬ್ರಹ್ಮ ಮಾಯೆಯ ಉಪಾದಿಯಿಂದ ಈಶ್ವರನೆನಿಸಿ ಕೊಳ್ಳುತ್ತಾನೆ. ಅದೇ ಅವಿದ್ಯೆಯ (ಅಜ್ಜ್ಞಾನ) ದ ಉಪಾದಿಯಿಂದ ಜೀವನೆನಿಸುತ್ತಾನೆ. ಜೀವನಿಗೆ ಈ ಉಪಾದಿಗಳಿಂದ ಸ್ಥೂಲ, ಸೂಕ್ಷ್ಮ, ಕಾರಣಗಳೆಂಬ ಮೂರು ಶರೀರಗಳು. ಜಗ್ರತ್, ಸ್ವಪ್ನ, ಸುಷುಪ್ತಿ ಗಳೆಂಬ ಮೂರು ಅವಸ್ಥೆಗಳು. ಅವಿದ್ಯೆಯಿಂದ ಅಥವಾ ಅಜ್ಞಾನದಿಂದ [ಮಾಯಾ ಪ್ರಭಾವದಿಂದ ; ಮಾಯೆ ಸಮಷ್ಟಿಯನ್ನು ಎಂದರೆ ಇಡೀ ಜಗತ್ತನ್ನು ಕುರಿತು ಹೇಳುವಾಗ ಉಪಯೋಗಿಸುವ ಪದ; ಅವಿದ್ಯೆ ವ್ಯಷ್ಟಿಯನ್ನು ಎಂದರೆ ಒಂದು ಜೀವಿಯನ್ನು ಕುರಿತು ಉಪಯೋಗಿಸುವ ಪದ; ಎರಡಕ್ಕೂ ಒಂದೇ ಅರ್ಥ.] ಬಿಡುಗಡೆಯಾದರೆ ಜೀವವು ಬ್ರಹ್ಮದಲ್ಲಿ ಲೀನವಾಗುವುದು- ಅಪರೋಕ್ಷಾನುಭೂತಿಯಾದಾಗ ತಾನೇ ಬ್ರಹ್ಮ ವೆಂಬ ಅನುಭವವಾಗುವುದು ; ತಾನು ಸಚ್ಚಿದಾನಂದ ರೂಪವೆಂಬ ಅನುಭವವಾಗುವುದು. ಇದು ಪಾರಮಾರ್ಥಿಕ ಸತ್ಯ.
*'''೮] ಸಂಸಾರವು ಅಥವಾ ಈ ದ್ವೈತ ಜಗತ್ತು :''' ಈ ಸಂಸಾರವು ಅಥವಾ ಬೇರೆ ಬೇರೆ, ಅನೇಕ, ಎಂಬ ಭಾವವು ಅವಿದ್ಯೆ [ಅಜ್ಞಾನ]ಯಿಂದ ಉಂಟಾದುದು. ಜ್ಞಾನದಿಂದ ಮಾತ್ರಾ ತನ್ನನ್ನು [ಬ್ರಹ್ಮವನ್ನು] ನಿಜವಾದ ರೂಪವನ್ನು ಅರಿಯಬಹುದು. ಕರ್ಮಯೋಗ, ರಾಜಯೋಗ, ಭಕ್ತಿಯೊಗ ಇವು ಸಾಧಕನ ಮನಸ್ಸನ್ನು ಶುದ್ಧಿಗೋಳಿಸಲು ಪ್ರಯೋಜನ. ಅವಿದ್ಯೆ ಅಥವ ಅಜ್ಞಾನ ದೂರವಾದರೆ ತಾನೇ ಜ್ಞಾನವಾಗುವುದು.