ನಾಗ ಪಂಚಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:q2427232 (translate me)
No edit summary
೧ ನೇ ಸಾಲು:
''ನಾಗ ಪಂಚಮಿ''ಯು [[ಭಾರತ]]ದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು [[ಶ್ರಾವಣ]] ಮಾಸದ [[ಪಂಚಮಿ]]ಯಂದು ಆಚರಿಸಲಾಗುತ್ತದೆ. ಈ ದಿನದಂದು, [[ನಾಗ]] [[ದೇವತೆ]]ಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ [[ದೇವಸ್ಥಾನ]] ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ. ಅದಕ್ಕೆ ಕಾರಣ ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಓಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ತದ ನಂತರ ನಾಗರಹಾವು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲೀ ಎಂದು ಕಣ್ಣೀರಿಟ್ಟಳು. ತಂದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣ ಆಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರ ಪಂಚಮಿ ಹಬ್ಫ಼ವನ್ನು ಆಚರಿಸಿದರು.
{{ಚುಟುಕು}}
 
[[ವರ್ಗ:ಹಿಂದೂ ಧರ್ಮದ ಹಬ್ಬಗಳು]]
 
{{ಹಿಂದೂ ಧರ್ಮದ ಹಬ್ಬಗಳು}}
{{ಜಾನಪದ ಹಬ್ಬಗಳು ಮತ್ತು ಸಂಪರ್ಕಗಳು}}
"https://kn.wikipedia.org/wiki/ನಾಗ_ಪಂಚಮಿ" ಇಂದ ಪಡೆಯಲ್ಪಟ್ಟಿದೆ