ಮೇಲುಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{ಚುಟುಕು}}
{{Infobox ಭಾರತದ ಭೂಪಟ |
native_name = ಮೇಲುಕೋಟೆ |
Line ೭೧ ⟶ ೭೦:
*ಹೊರತಮ್ಮನ ದೇವಾಲಯ
*ಶಿವನ ಗುಡಿ(ಉಳ್ಳಿಬಾವಿ)
 
==ಕವಿ ಪುತಿನ ಅವರ ಮನೆ==
ಕನ್ನಡದ ಶ್ರೇಷ್ಠ ಗೀತ ನಾಟಕಗಳನ್ನು ಬರೆದ ಕವಿ ಪುತಿನ ಹುಟ್ಟಿ ಬೆಳೆದದ್ದು ಮೇಲುಕೋಟೆಯಲ್ಲಿ. ಅಲ್ಲಿನ ಪರಿಸರ, ಪಂಚಪ್ರಾಣವಾಗಿದ್ದ ಆರಾಧ್ಯ ದೇವರು ಇವರ ಸಾಹಿತ್ಯ ಕೃಷಿಗೆ ಪ್ರೇರಣೆಯಾಗಿದ್ದವು. ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿ, ಯೋಗಾನರಸಿಂಹ ದೇಗುಲಗಳು, ಅಕ್ಕ ತಂಗಿಯರ ಕೊಳ, ಸಂಸ್ಕೃತ ಸಂಶೋಧನಾ ಕೇಂದ್ರಗಳು ಹೇಗೆ ಪ್ರಸಿದ್ಧಿ ಎನಿಸಿಕೊಂಡಿವೆಯೋ ಅದೇ ರೀತಿಯಲ್ಲಿ ಕವಿ ಪುತಿನ ಅವರ ಮನೆಯೂ ಅಷ್ಟೇ ಪ್ರಸಿದ್ಧಿ.
 
ಪುತಿನ ಮನೆ ಸ್ಮಾರಕವಾಗಿದ್ದು ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ. ಅಂದರೆ, ಪುತಿನ ಬದುಕಿದ್ದ ಕಾಲದಲ್ಲೇ. ಕವಿಯ ಆಶಯವೂ ಅದೇ ಆಗಿತ್ತು; 'ನಾನು ಬದುಕಿರುವಾಗಲೇ ಬಾಳಿ, ಬದುಕಿದ ನನ್ನ ಮನೆ ಸ್ಮಾರಕವಾಗಬೇಕು. ನಾನು ಬರೆದ ಸಾಹಿತ್ಯ ನಿಂತ ನೀರಾಗದೆ, ನನ್ನ ಸಾವಿನಾಚೆಯೂ ಮುಂದಿನ ಪೀಳಿಗೆಯನ್ನು ತಲುಪುವಂತಾಗಬೇಕು'.
 
1996ರಲ್ಲಿ ಈ ಮನೆ ಸ್ಮಾರಕವಾಗಿ, ಸರ್ಕಾರದ ತೆಕ್ಕೆ ಸೇರಿತು. 1998ರಲ್ಲಿ ಕವಿ ವಿಧಿವಶರಾದ ನಂತರ ಟ್ರಸ್ಟ್‌ನವರು ಕವಿಯ ಬಯಕೆಯಂತೆ ಮನೆಯ ಮೂಲ ರೂಪವನ್ನು ಬದಲಿಸದೇ 2000ನೇ ಇಸ್ವಿಯಲ್ಲಿ ಪ್ರಾಚ್ಯವಸ್ತು ಇಲಾಖೆಗೆ ಗುತ್ತಿಗೆ ನೀಡಿ (10 ಲಕ್ಷ ರು.), ಹೊಸ ರೂಪ ಕೊಡಲು ಮುಂದಾದರು. ಶತಮಾನದ ಅಂಚಿನಲ್ಲಿದ್ದ ಮನೆಯ ಹಳೇ ಕಂಬಗಳು, ಮಹಡಿಯ ಮೆಟ್ಟಿಲುಗಳು, ಹೆಂಚುಗಳನ್ನು ಬಳಸಿಕೊಂಡೇ ಮೂಲ ಮನೆಯ ಅಂದ, ಚಂದಕ್ಕೆ ಯಾವುದೇ ಧಕ್ಕೆ ಬಾರದಂತೆ ಕವಿ ಮನೆಯನ್ನು ಸುಂದರ ಸ್ಮಾರಕವಾಗಿಸಲಾಯಿತು. ಈ ಮನೆಯಲ್ಲಿ ಕವಿ ಪುತಿನ ಅವರ ಊರುಗೋಲು, ಬರೆಯಲು ಬಳಸುತ್ತಿದ್ದ ಮಣೆ, ಟೋಪಿ ಸೇರಿದಂತೆ ಮಹಡಿಯಲ್ಲಿ ಕುಳಿತು ಬರೆಯುತ್ತಿದ್ದ ಜಾಗವನ್ನೂ ಸಂರಕ್ಷಿಸಲಾಗಿದೆ. ಅಲ್ಲದೆ, ಕವಿಯ 'ಮನೆ ದೇಗುಲ', 'ರಥ ಸಪ್ತಮಿ', 'ಹರಿ ಚರಿತೆ', 'ಮಾಂದಳಿರು', 'ಜಾನ್ಹವಿಗೆ ಜೋಡಿ ದೀವಿಗೆ', 'ಗೋಕುಲ ನಿರ್ಗಮನ' ಸೇರಿದಂತೆ ಅನೇಕ ಕೃತಿಗಳ ಪ್ರಥಮ ಮುದ್ರಣವೂ ಇಲ್ಲಿ ನೋಡಲು ಸಿಗುತ್ತದೆ.
 
 
==ಚಿತ್ರಗಳು==
Line ೭೯ ⟶ ೮೬:
File:ವೈರಮುಡಿ ಜಾತ್ರೆಯಲ್ಲಿ ಯೋಗಾನರಸಿಂಹಸ್ವಮಿ ಬೆಟ್ಟದ ಒಂದು ನೋಟ.jpg|ವೈರಮುಡಿ ಜಾತ್ರೆಯಲ್ಲಿ ಯೋಗಾನರಸಿಂಹಸ್ವಮಿ ಬೆಟ್ಟದ ಒಂದು ನೋಟ
File:ಶ್ರೀ ಯೋಗಾ ನರಸಿಂಹಸ್ವಮಿ.jpg|ಶ್ರೀ ಯೋಗಾ ನರಸಿಂಹಸ್ವಮಿ
File:ಪುತಿನ_ಮನೆ_1.jpg|ಪುತಿನ ಮನೆ
File:ಪುತಿನ_ಮನೆ_2.jpg|ಪುತಿನ ಮನೆ
 
</gallery>
[[ವರ್ಗ:ಮಂಡ್ಯ ಜಿಲ್ಲೆ]]
"https://kn.wikipedia.org/wiki/ಮೇಲುಕೋಟೆ" ಇಂದ ಪಡೆಯಲ್ಪಟ್ಟಿದೆ