ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೆಸರಿನ ಮೂಲ
ಮೂಲ
೬ ನೇ ಸಾಲು:
 
ಸೇವುಣ ರಾಜರು ತಮ್ಮನ್ನು [[ಯಾದವ]] ವಂಶಸ್ಥರೆಂದು ಕರೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು “ದೇವಗಿರಿಯ ಯಾದವರು” ಎಂದೂ ಕರೆಯುವುದುಂಟು. [[ಮಹಾರಾಷ್ಟ್ರ]]ದ ವಿಶಾಲ ಭಾಗದಲ್ಲಿ ಆಳಿದ್ದರಿಂದ ಅವರನ್ನು “ಮರಾಠರು” ಎಂದೂ ಕರೆಯಲಾಗುತ್ತದೆ. ಆದರೆ ಈ ರಾಜವಂಶದ ಸರಿಯಾದ ಹೆಸರು ಸೇಉಣ ಅಥವಾ ಸೇವುಣ[2]. ಇವರದೇ ಶಾಸನಗಳಲ್ಲಾಗಲೀ ಅಥವಾ ಅವರ ಸಮಕಾಲೀನ ರಾಜ್ಯಗಳಾಗಿದ್ದ [[ಹೊಯ್ಸಳ]], [[ಕಾಕತೀಯ]] ಅಥವಾ [[ಪಶ್ಚಿಮ ಚಾಲುಕ್ಯ]]ರ ಶಾಸನಗಳಲ್ಲಾಗಲೀ ಈ ರಾಜವಂಶವನ್ನು ಸೇಉಣರೆಂದೇ ಸಂಬೋಧಿಸಲಾಗಿದೆ.[3]. ಈ ಹೆಸರಿನ ಮೂಲ ಬಹುಷಃ ಈ ವಂಶದ ಎರಡನೆಯ ರಾಜ ಸೇಉಣಚಂದ್ರನಿಂದ ಬಂದಿರಬಹುದೆಂದು ಊಹೆಯಿದೆ
 
 
==ಮೂಲ==
ಈ ವಂಶದ ಮೂಲದ ಬಗ್ಯೆ ವಿದ್ವಾಂಸರಲ್ಲಿ ಅನೇಕ ಅಭಿಪ್ರಾಯಗಳಿವೆ.
 
==ಉತ್ತರ ಭಾರತ ==
 
ಸ್ವತಃ ಸೇವುಣರು ತಮ್ಮನ್ನು ಉತ್ತರ ಭಾರತದ ಚಾಂದ್ರವಂಶಿ ಯಾದವ ಕುಲದವರು ಎಂದು ಕರೆದುಕೊಂಡಿದ್ದಾರೆ[5][6]. ಹೇಮಾದ್ರಿ ಬರೆದ ಸಂಸ್ಕೃತ ಗ್ರಂಥ ವ್ರತಖಂಡದ 21ನೆಯ ಪದ್ಯದಲ್ಲಿ , ಸೇವುಣರು ಮೂಲತಃ [[ಮಥುರೆ]]ಯವರಾಗಿದ್ದು ನಂತರ [[ದ್ವಾರಕೆ]]ಗೆ ಬಂದರು ಎಂದು ಉಲ್ಲೇಖಿಸಲಾಗಿದೆ. ಹೇಮಾದ್ರಿಯು ಅವರನ್ನು '''ಕೃಷ್ಣಕುಲೋತ್ಪನ್ನ''' , ಅರ್ಥಾತ್ ಕೃಷ್ಣನ ವಂಶಸ್ಥರು ಎಂದು ಕರೆದಿದ್ದಾನೆ[7]. ಮರಾಠಿಯ ಸಂತ [[ಜ್ಞಾನೇಶ್ವರ]]ನು ಕೂಡಾ ಅವರನ್ನು '''ಯದುಕುಲವಂಶತಿಲಕ''' ಎಂದು ಸಂಭೋದಿಸಿದ್ದಾನೆ. ಇತರ ಕೆಲ ಶಾಸನಗಳು ಅವರನ್ನು '''ದ್ವಾರಾವತೀಪುರಾವರಾಧೀಶ್ವರರು''' (ದ್ವಾರಕೆಯ ಒಡೆಯರು) ಎಂದು ಉಲ್ಲೇಖಿಸಿವೆ.
 
ಸೇವುಣರು ಉತ್ತರ ಭಾರತದಿಂದ ಬಂದವರು ಎಂಬ ವಾದವನ್ನು ಡಾ. ಕೋಲಾರ್ಕರ್ ಮೊದಲಾದ ಅನೇಕ ಆಧುನಿಕ ಸಂಶೋಧಕರು ಸಮರ್ಥಿಸುತ್ತಾರೆ[8].
 
==ಮರಾಠಾ==
 
ಪ್ರೊ. ಜಾರ್ಜ್ ಮೊರೇಸ್ [9], ವಿ.ಕೆ.ರಾಜವಾಡೆ, ಸಿ.ವಿ.ವೈದ್ಯ, ಡಾ. ಎ.ಎಸ್. ಅಲ್ಟೇಕರ್ , ಡಾ.ಬಿ.ಆರ್.ಭಂಡಾರ್ಕರ್ ಮತ್ತು ಜೆ. ಡಂಕನ್ ಎಮ್. ಡೆರ್ರೆಟ್ [4], ಮೊದಲಾದ ವಿದ್ವಾಂಸರು,ಸೇವುಣರು ಮರಾಠಾ ಮೂಲದವರಾಗಿದ್ದರು ಎಂದು ಅಭಿಪ್ರಾಯಪಡುತ್ತಾರೆ. ಸೇವುಣರು [[ಮರಾಠಿ]] ಭಾಷೆಯ ಪ್ರೋತ್ಸಾಹಕರಾಗಿದ್ದರು[10]. ಈ ಯಾದವ ರಾಜ್ಯವು ಮೊಟ್ಟಮೊದಲ ಮರಾಠಾ ಸಾಮ್ರಾಜ್ಯ ಎಂದು ದಿಗಂಬರ ಬಾಲಕೃಷ್ಣ ಮೊಕಾಶಿಯವರು ಅನುಮೋದಿಸುತ್ತಾರೆ[11]. ತಮ್ಮ ಪುಸ್ತಕ ಮಧ್ಯಯುಗೀಯ ಭಾರತ (Medieval India)ದಲ್ಲಿ , ಸಿ.ವಿ.ವೈದ್ಯ, ಯಾದವರು ನಿಸ್ಸಂದೇಹವಾಗಿಯೂ ಶುದ್ಧ ಮರಾಠಿ ಕ್ಷತ್ರಿಯವಂಶದವರು ಎನ್ನುತ್ತಾರೆ.
 
[[ನಾಸಿಕ್ | ನಾಸಿಕದ]] ಹತ್ತಿರದ ಅಂಜನೇರಿ ಎಂಬಲ್ಲಿ ದೊರಕಿದ ಶಿಲಾಶಾಸನದ ಪ್ರಕಾರ ಯಾದವ ವಂಶದ ಒಂದು ಕಿರು ಶಾಖೆಯು ಅಂಜನೇರಿಯನ್ನು ಮುಖ್ಯ ನಗರವಾಗಿಟ್ಟುಕೊಂಡು , ಸಣ್ಣ ಪ್ರದೇಶವನ್ನು ಆಳುತ್ತಿತ್ತು.. ಇದೇ ಶಾಸನವು, ಈ ಯಾದವ ವಂಶದ ಸೇವುಣದೇವ ಎಂಬ ರಾಜನು ತನ್ನನ್ನು ಮಹಾಸಾಮಂತ ಎಂದು ಕರೆದುಕೊಂಡಿದ್ದಾಗಿಯೂ, [[ಜೈನ]] ದೇವಾಲವೊಂದಕ್ಕೆ ದತ್ತಿ ಬಿಟ್ಟದ್ದಾಗಿಯೂ ಹೇಳುತ್ತದೆ. [12]..ಡಾ. ಓ.ಪಿ.ವರ್ಮಾ ಮೊದಲಾದ ವಿದ್ವಾಂಸರ ಪ್ರಕಾರ ಯಾದವರು [[ಮರಾಠಿ]] ಭಾಷಿಕರಾಗಿದ್ದು , ಇವರ ಕಾಲವು ಮರಾಠಿ ಇತಿಹಾಸದಲ್ಲಿ ಮಹತ್ವದ ಕಾಲವಾಗಿದೆ. [13].
 
[[ಶಿವಾಜಿ]]ಯ ತಾಯಿ [[ಜೀಜಾಬಾಯಿ]]ಯು ಯಾದವ ವಂಶಸ್ತರು ಎಂದು ಕರೆದುಕೊಳ್ಳುತ್ತಿದ್ದ ಸಿಂದಖೇಡ ರಾಜರ ಜಾಧವ ಕುಲಕ್ಕೆ ಸೇರಿದವಳಾಗಿದ್ದಳು.
 
 
 
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ