ಅನುಭವ ಮಂಟಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೫ ನೇ ಸಾಲು:
*'''ಅಕ್ಕ''' : ಸತ್ತ ಹೆಣ ಕೂಗಿದುದುಂಟು, ಮರೆತು ಒರಗಿ ಕನಸು ಕಂಡು ಅದನ್ನು ಹೇಳುವಲ್ಲಿ ಸತ್ತ ಹೆಣ ಎದ್ದಂತೆ ಆಯಿತು, ಹೆಪ್ಪಿಟ್ಟ ಹಾಲು ಗಟ್ಟಿ ತುಪ್ಪವಾಗಿ ಸಿಹಿಯಾಗಿತ್ತು, ಇದಕ್ಕೆ ತಪ್ಪು ಸಾಧಿಸಲೇಕೆ ಪ್ರಭುವೇ.
*'''ಅಲ್ಲಮ''' : ಅದೂ ಹೋಗಲಿ, ಅರಿಷಡ್ವರ್ಗಗಳಿಂದಲೇ ತುಂಬಿರುವ ಈ ಶರೀರದಲ್ಲಿದ್ದು ಅದನ್ನು ದಾಟಿದ್ದೇನೆ ಎಂದರೆ ಅದನ್ನಾದರೂ ನಂಬುವುದು ಹೇಗೆ ?
*'''ಅಕ್ಕ''' : ಕಾಮನ ಗೆದ್ದ ಠಾವನ್ನು ಹೇಳಬೇಕೆ ಪ್ರಭುವೇ ? ಕಾಮವನ್ನು ಗೆಲ್ಲುವುದಕ್ಕೆ ಆ ಕಾಮ ನನ್ನ ಮನಸ್ಸಿನಲ್ಲಿ ಎಂದೂ ಹುಟ್ಟಿಯೇ ಇಲ್ಲ, ಕೇಳಿ ಅಂಗದ ಭಂಗವ ಲಿಂಗ ಸುಖದಿಂದ ಗೆಲ್ಲಿದೆ, ಜೀವದ ಭಂಗವ ಶಿವಾನುಭವದಿಂದ ಗೆಲ್ಲಿದೆ, ಕರಗದ ಕತ್ತಲೆಯ ಬೆಳಗನ್ನುಟ್ಟು ಗೆಲ್ಲಿದೆ, ಜವ್ವನದ ಹೊರ ಮಿಂಚಿನಲ್ಲಿ ನಿಮ್ಮ ಕಣ್ಣಿಗೆ ಕಾಣುವ ಕಾಮನ ಸುಟ್ಟುರಿಯುವ ಭಸ್ಮವ ನೋಡಯ್ಯ. ಕಾಮನ ಕೊಂದು ಮನಸ್ಸಿಜನಾದರೆಮನಸ್ಸಿಜನಾಗುಳಿದರೆ, ಮನಸಿಜನ ತಲೆಬರಹವ ತೊಡೆದೆನು, ಎನ್ನ ಮನಸ್ಸಿಜನ ಜನನಕ್ಕೆ ಅವಕಾಶವನ್ನೇ ಕಲ್ಪಿಸಿಕೊಟ್ಟಿಲ್ಲ , ಇದನ್ನು ತಮ್ಮಂತಹ ಕೆಲವರು ಮಾತ್ರವೇ ಅರ್ಥ ಮಾಡಿಕೊಳ್ಳಬಲ್ಲವರು ಪ್ರಭುವೇ.
*'''ಅಲ್ಲಮ''' : ನೋಡಿದೆಯಾ ಬಸವಣ್ಣ, ಮಹಾದೇವಿಯ ಈ ನಿಲುವನ್ನು ಲೋಕಕ್ಕೆ ಪ್ರಕಟ ಮಾಡಬೇಕೆಂದೇ ನಾನು ಇಷ್ಟು ನಿಷ್ಠುರನಾದೆ. ತಾಯೇ ನಿನ್ನ ಜ್ಞಾನ ಘನ, ನಿನ್ನ ವಿರತಿ ಘನ, ನೀನು ವೈರಾಗ್ಯ ನಿಧಿ, ನಿನ್ನನ್ನು ಪಡೆದ ಜಗತ್ತು ಪಾವನ, ಮಾಯೆ ನಿನ್ನ ಮುಟ್ಟಲಿಲ್ಲ, ಮರಹು ನಿನ್ನ ಸೋಂಕಲಿಲ್ಲ, ಕಾಮ ನಿನ್ನ ಕೆಡಿಸಲಿಲ್ಲ, ಮಹಾದೇವಿ ಅಕ್ಕ ನೀನು ವಿಶ್ವ ಸ್ತ್ರೀ ಕುಲದ ಜ್ಯೋತಿ ನೀನು, ದಿಟ್ಟ ಹೆಜ್ಜೆ, ಧೀರ ನುಡಿಯ ತಾಯಿ ನೀನು, ವಿನಯ ವಿಶ್ವಾಸಗಳ ರತ್ನಗಣಿ ನೀನು, ತಾಯೇ ಮಹಾದೇವಿ ನಿನ್ನ ಸ್ತ್ರೀ ಪಾದಗಳಿಗೆ ನಮೋ ನಮೋ ಎಂದೆನು. (ಅಲ್ಲಮಪ್ರಭು ಕೈ ಮುಗಿಯುವರು)
*'''ಬಸವಣ್ಣ''' : ಹೌದು ಪ್ರಭುವೇ, ಈಕೆ ನಮ್ಮೆಲ್ಲರ ಅಕ್ಕ, ನಮಗೆಲ್ಲರಿಗೂ ಗುರುವಾಗಬಲ್ಲ ಯೋಗ್ಯತೆಯುಳ್ಳವಳು, ಅಕ್ಕಮಹಾದೇವಿ ನಿನಗೆ ಶರಣು ಶರಣಾರ್ಥಿ. (ಬಸವಣ್ಣ ನವರು ಕೈಮುಗಿಯುವರು)
*'''ಅಕ್ಕ''' : ತಾವು ಹಾಗೆಲ್ಲಾ ಹೇಳಬಾರದು, ನಾನು ನಿಮ್ಮೆಲ್ಲರ ಕರುಣೆಯ ಶಿಶು ನಾನು, ನಿಮ್ಮೆದುರಿನಲ್ಲಿ ಅತಿ ಚಿಕ್ಕವಳು.
*'''ಚನ್ನಬಸವಣ್ಣ''' : ಇರಬಹುದು, ವಯಸ್ಸು ಅತಿ ಚಿಕ್ಕದೇ ಇರಬಹುದು, ಆದರೂ ನೀನು ಎಲ್ಲರಿಗೂ ಅಕ್ಕನಾಗಬಲ್ಲವಳು ತಾಯಿ, ಮಹಾದೇವಿ ಅಕ್ಕ ಹಿರಿತನ ಕೇವಲ ವಯಸ್ಸಿನಿಂದ ಮಾತ್ರವೇ ಬರುವುದಿಲ್ಲ. ಅಜ ಕಲ್ಪಕೋಟಿ ವರುಷದವರೆಲ್ಲರೂ ಹಿರಿಯರೇ ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ ? ನಡು ಮುರಿದು, ತಲೆ ನಡುಗಿ, ಮತಿಗೆಟ್ಟು ಒಂದನಾಡ ಹೋಗಿ ಒಂಭತ್ತನಾಳುವ ಅಜ್ಞಾನಿಗಳೆಲ್ಲರೂ ಹಿರಿಯರೇ ? ಅನುವನರಿದು, ಘನವ ಬೆರೆಸಿ, ಹಿರಿದು ಕಿರಿದೆಂಬ ಭೇದವ ಮರೆತು ಕೂಡಲ ಚನ್ನಸಂಗಯ್ಯನಲ್ಲಿ ಬೆರೆಸಿ ಬೇರಿಲ್ಲದಿಪ್ಪ ಹಿರಿತನ ನಮ್ಮ ಮಹಾದೇವಿಯಕ್ಕಂಗಾಯಿತ್ತು.
*'''ಸಿದ್ದರಾಮ''' : ಅಹುದಹುದು ಮತ್ತೇನು, ಮರಹಿಂಗೆ ಹಿರಿದು ಕಿರಿದುಂಟಲ್ಲದೆ, ಅರಿವಿಂಗೆ ಹಿರಿದು ಕಿರಿದುಂಟೆ ಹೇಳಯ್ಯ ? ಸಾವಿಂಗೆಜಾತಂಗೆ ಭಯವುಂಟಲ್ಲದೇಮರಣದ ಅಜಾತರಿಗೆಭಯ ಉಂಟಲ್ಲದೆ, ಅಜಾತಂಗೆ ಮರಣದ ಭಯವುಂಟೇ ಹೇಳಯ್ಯ? ಕಪಿಲಸಿದ್ಧ ಮಲ್ಲಿನಾಥನಲ್ಲಿ ಮಹಾದೇವಿಯಕ್ಕನ ನಿಲವಿಂಗೆ ಶರಣೆಂದು ಶುದ್ಧನಾದೆನು ಕಾಣಾ ಚನ್ನಬಸವಣ್ಣ.
*'''ಅಕ್ಕ''' : ಭಕ್ತಿ ಬಂಡಾರಿ ಬಸವಣ್ಣ ನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
*'''ಬಸವಣ್ಣ''' : ಶರಣು ತಾಯೇ ಶರಣು ಶರಣು.
"https://kn.wikipedia.org/wiki/ಅನುಭವ_ಮಂಟಪ" ಇಂದ ಪಡೆಯಲ್ಪಟ್ಟಿದೆ