ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೨೫ ನೇ ಸಾಲು:
}}
 
'''ಕಾರ್ಕಳ''' [[ಉಡುಪಿ]] ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ. ಕಾರ್ಕಳವು ಬೆಂಗಳೂರಿನಿಂದ ಸುಮಾರು ೩೦೦೩೬೦ ಕಿ. ಮೀ ದೂರದಲ್ಲಿದೆ. ಪಶ್ಚಿಮ ಘಟ್ಟದ ಬುಡದಲ್ಲಿರುವ ಈ ಊರು ಹಲವು ಶತಮಾನಗಳ ಹಿಂದೆ ಜೈನ ರಾಜರ ಆಳ್ವಿಕೆಯ ಕಾಲದಲ್ಲಿ ಪಾಂಡ್ಯ ನಗರಿ ಎಂದು ಪ್ರಸಿಧ್ದಿ ಪಡೆದಿತ್ತು. ಕಾಲಕ್ರಮೇಣ ಇಲ್ಲಿರುವ ಕರಿ ಬಂಡೆಗಳಿಂದ "ಕರಿಕಲ್ಲು" ಎಂದು ಪ್ರಸಿದ್ಧವಾಗಿತ್ತು. ಮುಂದೆ 'ಕರಿಕಲ್ಲು' ತುಳುವಿನಲ್ಲಿ 'ಕಾರ್ಲ'ವೆಂದು ಮಾರ್ಪಟ್ಟು ಕನ್ನಡದಲ್ಲಿ 'ಕಾರ್ಕಳ' ಎಂದು ಹೆಸರಾಗಿದೆ. ವತ೯ಮಾನದಲ್ಲಿ ೪೨ಅಡಿ ಎತ್ತರದ ಏಕ ಶಿಲಾಏಕಶಿಲಾ ಗೊಮ್ಮಟೇಶ್ವರ ಮೂಲಕಮೂರ್ತಿ, ವಿಶ್ವಚತುರ್ಮುಖ ಶಾಂತಿಯನ್ನುಬಸದಿ ಸಾರುತ್ತಮತ್ತು "ಕಾರ್ಕಳ"ಇತರ ಎಂದುಧಾರ್ಮಿಕ ಕ್ಷೇತ್ರಗಳ ಮೂಲಕ ಕಾರ್ಕಲವು ಪ್ರವಾಸಿ ಸ್ಥಳವಾಗಿ ಛಾಪು ಕರೆಯಲ್ಪಡುತ್ತಿದೆಮೂಡಿಸಿದೆ.
 
==ಇತಿಹಾಸ==
ಕಾರ್ಕಳದ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ದೊರಕದಿದ್ದರು ಸೂಮಾರು ೧೦ನೇ ಶತಮಾನದ ಆದಿಯಿಂದ ಹಲವು ಮಾಹಿತಿಗಳು ಲಬ್ಯವಿದೆಲಭ್ಯವಾಗಿವೆ.
===ಪ್ರಾಚೀನ ಕಾರ್ಕಳ ===
ಕಾರ್ಕಳದಲ್ಲಿ ಜನಜೀವನ ಎಂದು ಆರಂಭವಾಯಿತು ಎಂಬುದಕ್ಕೆ ಅನಾದಿಕಾಲದ ಆಧಾರಗಳು ನಮಗೆ ಸಿಗುತ್ತಿಲ್ಲವಾದರೂ ಬೃಹತ್ ಶಿಲಾಯುಗಕ್ಕೆ ಕಾಲಿಟ್ಟಾಗ ಒಂದು ಸ್ಪಷ್ಟ ಚಿತ್ರ ದೊರೆಯುತ್ತದೆ. ತತ್ಸಂಬಂಧವಾದ ಹಲವಾರು ಪಳೆಯುಳಿಕೆಗಳು ಕಾಣಸಿಗುತ್ತವೆ. ಇಲ್ಲಿ ಹೆಸರಿಸಬಹುದಾವುಗಳೆಂದರೆ ಗವಿಗಳು ಮತ್ತು ಸಮಾಧಿಗಳು. ಇಲ್ಲಿನ ಹಿರಿಯಂಗಡಿ ಬಳಿ ಇರುವ ಪರ್ಪಲೆ ಬೆಟ್ಟದ ಮಧ್ಯಭಾಗದಲ್ಲಿ ಒಂದು ಗವಿ ಇದೆ.ಪೂರ್ವಕ್ಕೆ ಮುಖವಿರುವ ಈ ಮುರಕಲ್ಲು ಗವಿ ಬೃಹತ್ ಶಿಲಾಯುಗದ್ದು.ಕಾಲದ ಪ್ರಭಾವದಿಂದಾಗಿ ಆದ ಹಲವಾರು ಬದಲಾವಣೆಗಳನ್ನು ನಾವು ಇಲ್ಲಿ ಕಾಣಬಹುದು.ಗವಿಯ ಮುಂದೆ ಕಿರಿದಾದ ಸಣ್ಣ ಕಣಿವೆ, ಇಲ್ಲೊಂದು ಅಷ್ಟೇ ಸಣ್ಣದಾದ ಝರಿ.ಇದು ಪ್ರಾಚೀನ ಕಾಲದಲ್ಲಿ ಮಾನವ ವಾಸ್ತವ್ಯಕ್ಕೆ ಅತ್ಯಂತ ಸೂಕ್ತವಾದ ಸ್ಥಳವಾಗಿತ್ತು. ಆಧುನಿಕ ಮಾನವನ ಸಂಪರ್ಕ ಹೊಂದಿರುವ ಈ ಗವಿ ಇದ್ದಿರಬಹುದಾದ ಪಳೆಯುಳಿಕೆಗಳನ್ನು ತನ್ನ ಗರ್ಭದಲ್ಲಿ ಸೇರಿಸಿಕೊಂಡಿದೆ.ಬೆಳುವಾಯಿ ಸಮೀಪದ ದರೆಗುಡ್ಡೆ ಮತ್ತು ಬೈಲೂರು ಸಮೀಪದ ಕಣಜಾರು ಬೆಟ್ಟ ಪ್ರದೇಶಗಳಲ್ಲಿ ಹೆಬ್ಬಂಡೆ ವಾಸ್ತವ್ಯದ (Rock Shelters) ಕುರುಹುಗಳಿವೆ.ಇಲ್ಲಿ ಬೃಹತ್ ಶಿಲಾಯುಗಕ್ಕೂ ಹಿಂದಿನ ಕಾಲದ ಮಾನವ ವಾಸವಾಗಿದ್ದಿರಬಹುದು.ಸಾವಿರಾರು ವರ್ಷಗಳ ಘನಘೋರ ವರ್ಷಧಾರೆಯಿಂದ ಇಲ್ಲಿನ ಕುರುಹುಗಳು ನಾಶವಾಗಿವೆ. ರೆಂಜಾಳದ ಸಮೀಪ ಇರುವ ಬೋರುಕಟ್ಟೆ ಎಂಬ ಹಳ್ಳಿಯಲ್ಲಿ ಒಂದು ಬೃಹತ್ ಶಿಲಾ ಸಮಾಧಿ ಇದೆ.ಇದನ್ನು ಅಲ್ಲಿನ ಜನ “ಪಾಂಡವರಕಲ್ಲು” ಎಂದು ಕರೆಯುತ್ತಾರೆ. ಈ ಹೆಸರು ಸಮಾದಿಯ ಪ್ರಾಚೀನತೆಯನ್ನು ಸೂಚಿಸುತ್ತದೆ ಅಷ್ಟೇ.ಜಿಲ್ಲೆಯ ಇತರೆಡೆಗಳಲ್ಲೂ ಪಾಂಡವರಕಲ್ಲು ಎಂದು ಕರೆಸಿಕೊಳ್ಳುವ ಸ್ಥಳಗಳಿವೆ.ಅಲ್ಲೆಲ್ಲಾ ಕಾಣಸಿಗಬಹುದು ಬೃಹತ್ ಶಿಲಾ ಸಮಾಧಿಗಳು. ಬೋರುಕಟ್ಟೆ ಸಮಾಧಿಯು ಸಣ್ಣ ರಂಧ್ರದ(Pot-hole) ಸಮಾಧಿ. ಇದರ ಮೇಲೆ ತೆಳುವಾದ ಕಲ್ಲು ಚಪ್ಪಡಿಗಳ ಒಂದು ಚಪ್ಪರ ಇದೆ.ಮಾನವ ಆ ವೇಳೆಗೆ ಲೋಹದ ಮುಖ್ಯವಾಗಿ, ಕಬ್ಬಿಣದ ಉಪಯೋಗ ಪಡೆದಿದ್ದನೆಂಬುದಕ್ಕೆ ಇದು ಸಾಕ್ಷಿ. ಇಲ್ಲಿನ ಬೃಹತ್ ಶಿಲಾಯುಗದ ಸ್ಮಾರಕಗಳು ಸುಮಾರು ಕ್ರಿ. ಪೂ. 4ನೇಯ ಶತಮಾನ ಮತ್ತು ಅನಂತರದ ಕಾಲವೆಂದು ಅಂದಾಜಿಸಬಹುದು.ಆದರೆ ವೈಜ್ಞಾನಿಕವಾಗಿ ಉತ್ಖನನ ಕಾರ್ಯ ನಡೆಯುವವರೆಗೆ ಈ ಕಾಲವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ