ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
 
No edit summary
೧ ನೇ ಸಾಲು:
"'''ದೇವಗಿರಿಯ ಯಾದವರು"''' ಎಂದೇ ಪ್ರಸಿದ್ಧರಾಗಿರುವ ಸೇಉಣರು, ಉತ್ತರ ಕರ್ನಾಟಕ, ಮಹಾರಾಷ್ಟ್ರಗಳನ್ನೊಳಗೊಂಡ ಪ್ರದೇಶವನ್ನು ಆಳಿದ ಕನ್ನಡ ರಾಜಮನೆತನ. ರಾಷ್ಟ್ರಕೂಟರ ಸರದಾರರಾಗಿಯೂ, ಮುಂದೆ ಹೊಯ್ಸಯಳರಂತೆಯೆ ಕಲ್ಯಾಣದ ಚಾಲುಕ್ಯ ದೊರೆಗಳ ಸಾಮಂತರಾಗಿಯೂ ಇದ್ದರು. ಚಾಲುಕ್ಯ ಸಾಮ್ರಾಜ್ಯ ಅವನತಿಯ ಹಾದಿ ಹಿಡಿದಂತೆ ಪ್ರಾಬಲ್ಯಕ್ಕೆ ಏರುತ್ತ, ಹೊಯ್ಸಳರೊಂದಿಗೆ ಯುದ್ದಗಳನ್ನು ನಡೆಸೆದರು. ಐದನೆಯ ಭಿಲ್ಲಮ ದೇವಗಿರಿಯ ಅಭೇದ್ಯ ಕೋಟೆಯನ್ನು ನಿರ್ಮಿಸಿ ರಾಜಧಾನಿಯನ್ನು ಅಲ್ಲಿಗೆ ಸ್ಥಳಾಂತರಿಸಿದ. ಕೃಷ್ಣಾ-ತುಂಗಭದ್ರಾ ನದೀಮಧ್ಯ ಪ್ರದೇಶ ಒಬ್ಬರಿಂದೊಬ್ಬರಿಗೆ ಕೈಬದಲಾಯಿಸುತ್ತಿತ್ತು. ನಂತರ ಒಂದು ಮಾದರಿಯ ಒಪ್ಪಂದ ಏರ್ಪಟ್ಟು, ಸೇಉಣರು ತುಂಗಭದ್ರೆಯ ಉತ್ತರಕ್ಕೂ, ಹೊಯ್ಸಳರು ದಕ್ಷಿಣಕ್ಕೂ ತಮ್ಮ ಪ್ರಭಾವ ಪ್ರಾಬಲ್ಯಗಳನ್ನು ವಿಸ್ತರಿಸಿದರು. ಮುಂದೆ ದೆಹಲಿಯ ಸುಲ್ತಾನ ಅಲ್ಲಾಉದ್ದೀನ್‌ ಖಿಲ್ಜಿ ದೇವಗಿರಿಯನ್ನು ಗೆದ್ದು ತನ್ನ ರಾಜ್ಯಕ್ಕೆ ಸೇರಿಸಿಕೊಂಡಾಗ ಸೇಉಣರ ಮೆನೆತನ ಕೊನೆಗಂಡಿತು.
 
ಸಾಂಸ್ಕೃತಿಕವಾಗಿ ಸೇಉಣರು ಕಲ್ಯಾಣದ ಚಾಲುಕ್ಯರ ಸಂಪ್ರದಾಯವನ್ನು ಮುಂದುವರೆಸಿರದರು.
 
==ಬಾಹ್ಯ ಸ೦ಪರ್ಕಗಳು==
 
[[Category: ಇತಿಹಾಸ]]
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ