ಬಳ್ಳಿಗಾವೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ರಥೊತ್ಸವ
೮೬ ನೇ ಸಾಲು:
 
ಸಭಾರಂಗದಲ್ಲೂ ಮತ್ತವೇ [[ಚಾಲುಕ್ಯ]] ಶೈಲಿಯ ೪ ಕಂಬಗಳಿವೆ. ಛಾವಣಿಯಲ್ಲಿ ಬೆರಗುಗೊಳಿಸುವ ಕೆತ್ತನೆ ಇದೆ. ತ್ರಿಪುರಾಂತಕೇಶ್ವರ ದೇವಾಲಯದ ಎದುರಿಗೇ ಸಭಾಮಂಟಪವಿದೆ. ಅಲ್ಲಿಂದ ಸ್ವಲ್ಪ ಮುಂದೆ ವೀರಭದ್ರಸ್ವಾಮಿ ದೇವಸ್ಥಾನವಿದೆ. ಇದು ಇತ್ತೀಚೆಗಿನ ದೇವಸ್ಥಾನ. ಆದರೆ, ಇಲ್ಲಿ ಹಸಿರು ಬಣ್ಣದ ಶಿವಲಿಂಗವೊಂದಿದೆ. ಈ ಶಿವಲಿಂಗ, ಪಚ್ಚೆ ನೀಲಕಂಠೇಶ್ವರ ದೇವಾಲಯದಲ್ಲಿತ್ತು. ಯಾರೋ ಅದನ್ನು ಕದ್ದೊಯ್ಯುತ್ತಿರುವಾಗ ಸಿಕ್ಕುಬಿದ್ದು, ಈಗ ಅದನ್ನು ಊರಿನ ದೇವಸ್ಥಾನದಲ್ಲಿ ಜೋಪಾನವಾಗಿ ಇಡಲಾಗಿದೆ. ತ್ರಿಪುರಾಂತಕೇಶ್ವರ ದೇವಾಲಯದಿಂದ ಸ್ವಲ್ಪ ಮುಂದೆ ಭೇರುಂಡೇಶ್ವರ ಸ್ತಂಭ ಅಥವಾ ವಿಜಯ ಸ್ತಂಭ ಇರುವುದು. ೩ ಮೀಟರ್ ಎತ್ತರದ ಪೀಠದ ಮೇಲೆ ಇರುವ ಈ ಸ್ತಂಭ ೯.೭೫ ಮೀಟರ್ ಎತ್ತರವಿದೆ. ಇದನ್ನು ಚಾಲುಕ್ಯ ದೊರೆ ತ್ರಿಲೋಕಮಲ್ಲನ ದಂಡನಾಯಕನಾಗಿದ್ದ ಚಾವುಂಡರಾಯ ಅರಸನು ತನ್ನ ವಿಜಯದ ಸ್ಮರಣಾರ್ಥ ನಿರ್ಮಿಸಿದ್ದಾನೆ.
 
ಪ್ರತಿ ವರ್ಷ ರಥೊತ್ಸವ ನಡೆಯುತ್ತದೆ.
 
[[ವರ್ಗ: ಕರ್ನಾಟಕದ ಪ್ರಮುಖ ಸ್ಥಳಗಳು]]
"https://kn.wikipedia.org/wiki/ಬಳ್ಳಿಗಾವೆ" ಇಂದ ಪಡೆಯಲ್ಪಟ್ಟಿದೆ