ಷಡಕ್ಷರಪ್ಪ ಶೆಟ್ಟರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಷ. ಶೆಟ್ಟರ್''' ಪ್ರೊ. ಷ. ಶೆಟ್ಟರ್ ಅವರು ಜನಿಸಿದ್ದು ೧೯೩೫ ನೇ ಇಸವಿಯಲ್ಲಿ.ಮೈಸ...
 
No edit summary
೩ ನೇ ಸಾಲು:
ಪ್ರೊ. ಷ. ಶೆಟ್ಟರ್ ಅವರು ಜನಿಸಿದ್ದು ೧೯೩೫ ನೇ ಇಸವಿಯಲ್ಲಿ.ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ ಪಡೆದ ಇವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕಾವ್ಯ ಕುರಿತು ಸುಮಾರು ೨೭ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇದೆ.
 
ಶ್ರೀಯುತರು ದೇಶ-ವಿದೇಶಗಳಲ್ಲಿ ಮನ್ನಣೆ ಪಡೆದಿರುತ್ತಾರೆ. ಕೇಂಬ್ರಿಜ್, ಹಾರ್ವರ್ಡ್, ಹೈಡಲ್ ಬರ್ಗ್, ಅಥೆನ್ಸ್, ಲೈಡನ್, ಮಾಸ್ಕೋ ವಿಶ್ವವಿದ್ಯಾನಿಲಯಗಳಲ್ಲಿ ಕೆಲಕಾಲ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಲವಾರು ರಾಜ್ಯ ಹಾಗು ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಸಂದಿವೆ. ಇವರು ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ ಹಾಗು ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅಲ್ಲದೇ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನದ ಗೌರವವನ್ನಿಗೌರವವನ್ನೂ ಇವರು ಪಡೆದಿದ್ದಾರೆ.
 
==ನಡೆದು ಬಂದ ದಾರಿ==