ವೀರೇಂದ್ರ ಸಿಂಪಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ವೀರೇಂದ್ರ ಸಿಂಪಿ'''ಯವರ ಪ್ರಸಿದ್ಧ ಪ್ರಬಂಧಕಾರರಾದ ವೀರೇಂದ್ರ ಸಿಂಪಿಯವರು ಹುಟ್ಟಿದ್ದು [[ವಿಜಾಪುರ]] ಜಿಲ್ಲೆಯ [[ಇಂಡಿ]] ತಾಲ್ಲೂಕಿನ [[ಚಡಚಣ]]. ತಂದೆ ಪ್ರಸಿದ್ಧ ಜಾನಪದ ತಜ್ಞ [[ಸಿಂಪಿ ಲಿಂಗಣ್ಣ]], ತಾಯಿ ಸೊಲಬವ್ವ. ಪ್ರಾರಂಭಿಕ ಶಿಕ್ಷಣ [[ಚಡಚಣ]]. ಕಾಲೇಜು ಶಿಕ್ಷಣ [[ಬಿಜಾಪುರ]]ದ ವಿಜಯಾ ಕಾಲೇಜಿನಿಂದ ಬಿ.ಎ. ಪದವಿ. [[ಕರ್ನಾಟಕ ವಿಶ್ವವಿದ್ಯಾಲಯ]]ದಿಂದ ಎಂ.ಎ. ಪದವಿ ೧೯೬೨ರಲ್ಲಿ.
'''ವೀರೇಂದ್ರ ಸಿಂಪಿ'''ಯವರ ಪ್ರಬಂಧ ಸಂಕಲನಗಳು:
 
ಉದ್ಯೋಗ ಪ್ರಾರಂಭಿಸಿದ್ದು ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ೧೯೯೯ರಲ್ಲಿ ನಿವೃತ್ತಿ. ನಿವೃತ್ತಿಯ ನಂತರವೂ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಚಾರ‍್ಯರಾಗಿ ನಾಲ್ಕು ವರ್ಷ ಸೇವೆ.
 
ಹೈಸ್ಕೂಲಿನಲ್ಲಿದ್ದಾಗಲೇ ಸಾಹಿತ್ಯ ರಚನೆಯ ಹುಚ್ಚು. ‘ಖೊಟ್ಟಿ ನಾಣ್ಯ’ ಎಂಬ ಕಥೆ ‘ಸಂಗಮ’ ಕೈ ಬರಹದ ಪತ್ರಿಕೆಯಲ್ಲಿ ಪ್ರಕಟಿತ. ಏಕಲವ್ಯ ಎಂಬ ಹಿಂದಿ ನಾಟಕವನ್ನು ಕನ್ನಡಕ್ಕೆ ಅನುವಾದ. ಇಂದಿನ ವಿದ್ಯಾರ್ಥಿಗಳಲ್ಲಿ ‘ಅಸಂತೋಷವೇಕೆ?’ ಪ್ರಬಂಧ ಬರೆದು ಅಂತರ ಕಾಲೇಜು ಸ್ಪರ್ಧೆಯಲ್ಲಿ ಪಡೆದ ಬಹುಮಾನ. ಕಥೆ, ವಿಮರ್ಶೆ ಕಾಲೇಜು ಪತ್ರಿಕೆಗಳಲ್ಲಿ ಪ್ರಕಟಿತ.
 
ಇಂಗ್ಲಿಷ್ ಪ್ರಾಧ್ಯಾಪಕರಾದರೂ ಬರೆದದ್ದೆಲ್ಲಾ ಕನ್ನಡದಲ್ಲೆ. ಪ್ರಮುಖ ಪ್ರಬಂಧ ಬರಹಗಾರರು. ಅಂಕಣಕಾರರೆಂದೇ ಪ್ರಸಿದ್ಧಿ. ಪ್ರಬಂಧ ಸಂಕಲನಗಳು-ಕಾಗದದ ಚೂರು, ಭಾವ ಮೈದುನ, ಸ್ವಚ್ಛಂದ ಮನದ ಸುಳಿಗಾಳಿ, ಪರಸ್ಪರ ಸ್ಪಂದನ, ಲಲಿತ ಪ್ರಬಂಧಗಳು, ಆಯ್ದ ಲಲಿತ ಪ್ರಬಂಧಗಳು. ಸಂಪಾದಿತ-ಚನ್ನಬಸವಣ್ಣನವರ ವಚನಗಳು, ಬೀದರ ಜಿಲ್ಲಾ ದರ್ಶನ, ಬೀದರ ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರು, ಅಂಕಣ ಬರಹ/ವೈಚಾರಿಕ ಲೇಖನಗಳು- ಜೀವನವೆಂದರೇನು ? ಸುಖಸಾಧನ, ಬಣ್ಣಗಾರಿಕೆ, ಯೋಗಾರಂಭ. ವಿಮರ್ಶೆ/ಸಮೀಕ್ಷೆ-ಕನ್ನಡದಲ್ಲಿ ಲಲಿತ ಪ್ರಬಂಧಗಳು, ಗಾಯ್ ಡಿ ಮೊಪಾಸನ ಕಥೆಗಳು, ಸಿಂಪಿ ಲಿಂಗಣ್ಣನವರ ಸಾಹಿತ್ಯ, ಇಂಡಿ ತಾಲ್ಲೂಕ ದರ್ಶನ. ಜೀವನಚರಿತ್ರೆ-ಮಾಸ್ತಿ ವೆಂಕಟೇಶ ಅಯ್ಯಂಗಾರ್, ಆಯ್ದಕ್ಕಿ ಮಾರಯ್ಯ, ಮಾದಾರ ಚೆನ್ನಯ್ಯ, ಚನ್ನಬಸವಣ್ಣ, ಆರ್.ವಿ. ಬೀಡಪ್, ಹತ್ತು ಪಾಶ್ಚಾತ್ಯ ಕಾದಂಬರಿಕಾರರು.
 
ಹಲವಾರು ಗೌರವ ಪ್ರಶಸ್ತಿಗಳ ಗರಿ. ಭಾವಮೈದುನ ಲಲಿತ ಪ್ರಬಂಧಕ್ಕೆ ಕರ್ನಾಟಕ ಸಾಹಿತ್ಯ ಅಕಾಡಮಿ ಬಹುಮಾನ, ಸ್ವಚ್ಛಂದ ಮನದ ಸುಳಿಗಾಳಿ ಪ್ರಬಂಧ ಸಂಕಲನವು ಕರ್ನಾಟಕ ವಿಶ್ವವಿದ್ಯಾಲಯ, ಶಿವಾಜಿ ವಿಶ್ವವಿದ್ಯಾಲಯ, [[ಗುಲಬರ್ಗಾ ವಿಶ್ವವಿದ್ಯಾಲಯ]]ಗಳಲ್ಲಿ ಮೊದಲ ಬಿ.ಎ. ಪಠ್ಯವಾಗಿ ಆಯ್ಕೆ. ಪರಿಸರ ಸ್ಪಂದನಕ್ಕೆ [[ಗುಲಬರ್ಗಾ]] ವಿ.ವಿ.ದ ಬಹುಮಾನ, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, [[ವಿಜಾಪುರ]], [[ಬೀದರ\\ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಮುಂತಾದುವು.
 
 
'''ವೀರೇಂದ್ರ ಸಿಂಪಿ'''ಯವರ <big>ಪ್ರಬಂಧ ಸಂಕಲನಗಳು:</big>
 
[[File:Veerendra Simpi.JPG|thumb|ವೀರೇಂದ್ರ ಸಿಂಪಿ]]
* ಕಾಗದದ ಚೂರು
* ಭಾವ ಮೈದುನ
* ಪರಿಸರ ಸ್ಪಂದನ
 
==ಬಾಹ್ಯ ಕೊಂಡಿಗಳು==
 
* [http://www.chilume.com/ ವೀರೇಂದ್ರ ಸಿಂಪಿಯವರ ಕೃತಿಗಳನ್ನು ಇಲ್ಲಿ ಪ್ರಕಟಿಸಲಾಗಿದೆ ]
[[ವರ್ಗ:ಸಾಹಿತಿಗಳು]]
"https://kn.wikipedia.org/wiki/ವೀರೇಂದ್ರ_ಸಿಂಪಿ" ಇಂದ ಪಡೆಯಲ್ಪಟ್ಟಿದೆ