ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು copyedit
೧ ನೇ ಸಾಲು:
'''[[ಕನ್ನಡ]]''' ಭಾಷೆಯಲ್ಲಿ ಇದುವರೆಗೆ ಲಭ್ಯವಾಗಿರುವ ಮೊಟ್ಟಮೊದಲ ಗ್ರಂಥ '''ಕವಿರಾಜಮಾರ್ಗ'''. ಇದೊಂದು ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. 850 ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ '''ಶ್ರೀವಿಜಯ'''ನೆಂಬುದು ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ ಮೊದಲಿಗೆ ಅಮೋಘವರ್ಷ ದೊರೆಯ ಹೆಸರು ಬಂದಿರುವುದರಿಂದ ಇದನ್ನು ಆತನ ಆಳ್ವಿಕೆಯ ಅವಧಿಯಲ್ಲೇ ರಚಿಸಿದ್ದಿರಬಹುದಾಗಿದೆ.<p>
ಎಲ್ಲ ದೃಷ್ಟಿಯಿಂದಲೂ ಇದೊಂದು ವಿಶಿಷ್ಟ ಗ್ರಂಥ. ಕನ್ನಡದಲ್ಲಿ ತನಗಿಂತ ಮೊದಲು ಆಗಿಕೋದ ಕವಿಗಳನ್ನು ಶ್ರೀವಿಜಯನು ಹೆಸರಿಸಿದ್ದಾನೆ. ಇದರಿಂದಾಗಿ [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯವು]] ಬಹಳ ಶ್ರೀಮಂತವಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ. ಕವಿಯು ಕನ್ನಡ ನಾಡಿನ ಬಗ್ಗೆ ಹಾಗೂ ಕನ್ನಡಿಗರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾನೆ. ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ ದೇಸೀ ಸಾಹಿತ್ಯ ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, 'ಬೆದಂಡೆ', 'ಚೆತ್ತಾಣ', ಹಾಗೂ 'ಒನಕೆವಾಡು'ಗಳು ಮುಖ್ಯವಾದುವು.
<p>
ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡನಾಡಿನ ವರ್ಣನೆ:<p>
೮ ನೇ ಸಾಲು:
ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್ <br>
<p>
ಕಿಸುವೊಳಲು ಪಟ್ಟದಕಲ್ಲಿಗೆ ಮೊದಲಿದ್ದ ಹೆಸರು. ಪುಲಿಗೆರೆ ಇಂದಿನ ಲಕ್ಷ್ಮೇಶ್ವರ ([[ಗದಗ್]] ಜಿಲ್ಲೆ). ಕೊಪಣ ಇಂದಿನ ಕೊಪ್ಪಳ. ಒಕುಂದ ಬೆಳಗಾವಿ ಜಿಲ್ಲೆಯಲ್ಲಿರುವ ಒಕ್ಕುಂದ.
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ಕವಿರಾಜಮಾರ್ಗ" ಇಂದ ಪಡೆಯಲ್ಪಟ್ಟಿದೆ