ಚಂದ್ರಶೇಖರ ಕಂಬಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ವರ್ಗ ಬದಲಾವಣೆ (ಕೇಂದ್ರ ಸಾಹಿತ್ಯ ಆಕಾಡೆಮಿ)
No edit summary
೧ ನೇ ಸಾಲು:
[[Image:kambara.jpg|frame|ಶ್ರೀ ಚಂದ್ರಶೇಖರ ಕಂಬಾರ]]ಡಾ. ಚಂದ್ರಶೇಖರ ಕಂಬಾರ (ಜನನ- ೨ ಜನವರಿ ೧೯೩೭) ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. [[ಕವಿ]], [[ನಾಟಕಕಾರ]], [[ಸಂಗೀತ ನಿರ್ದೇಶಕ]], [[ಚಲನಚಿತ್ರ ನಿರ್ದೇಶಕ]], [[ಅಧ್ಯಾಪಕ]], ಜಾನಪದ ತಜ್ಞ, ಆಡಳಿತಗಾರ ಇತ್ಯಾದಿ.
ಮುಖ್ಯವಾಗಿ ಕವಿ-ನಾಟಕಕಾರರಾಗಿ ಕಂಬಾರ ಜನಪ್ರಿಯರು. [[ಬೆಂಗಳೂರು]] ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಉಪನ್ಯಾಸಕ ವೃತ್ತಿಯಿಂದ [[ಕನ್ನಡ ವಿಶ್ವವಿದ್ಯಾಲಯ]] ಹಂಪಿಯ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗ [[ಬೆಂಗಳೂರು|ಬೆಂಗಳೂರಿನ]] ಬನಶಂಕರಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಈ ನಡುವೆ [[ದೆಹಲಿ | ದೆಹಲಿಯ]] ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿಯೂ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ [[ಕರ್ನಾಟಕ]] ನಾಟಕ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
[[೧೯೩೭]] [[ಜನವರಿ]] ೨ರಂದು ಕಂಬಾರರು [[ಬೆಳಗಾವಿ]] ಜಿಲ್ಲೆ '''ಘೋಡಗೇರಿ'''ಯಲ್ಲಿ ಜನಿಸಿದರು. ತಮ್ಮ ಊರಿನ ವಾತಾವರಣದಲ್ಲಿನ ಜಾನಪದ ಹಾಡು, ಕುಣಿತ, ನಾಟಕಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವುಗಳ ಸಂಗ್ರಹ, ಬರವಣಿಗೆಯನ್ನು ರೂಢಿಸಿಕೊಂಡರು. ಉತ್ತರ ಕರ್ನಾಟಕದ ಅದರಲ್ಲೂ [[ಬೆಳಗಾವಿ]], [[ಧಾರವಾಡ | ಧಾರವಾಡದ]] ಗಂಡುಭಾಷೆಯನ್ನು [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯಕ್ಕೆ]] ಹೊತ್ತು ತಂದರು. ಧಾರವಾಡದ ವರಕವಿ ಡಾ. [[ದ ರಾ ಬೇಂದ್ರೆ | ದ. ರಾ. ಬೇಂದ್ರೆ]] ಅವರ ನಂತರ ಭಾಷೆಯನ್ನು ದುಡಿಸಿಕೊಂಡವರೆಂದರೆಪರಿಣಾಮಕಾರಿಯಾಗಿ ದುಡಿಸಿಕೊಂಡವರಲ್ಲಿ ಕಂಬಾರರು ಮಾತ್ರಒಬ್ಬರು.
 
ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರಗಳಾಗಿಸಿದರು. ಕರಿಮಾಯಿ, ಸಂಗೀತಾ, ಕಾಡುಕುದುರೆ ಇವುಗಳಲ್ಲಿ ಪ್ರಮುಖವಾದುವು. ಕಂಬಾರರು ತಮ್ಮ ಚಿತ್ರಗಳಿಗೆ ತಾವೇ ಸಂಗೀತ ನೀಡಿದ್ದಾರೆ. ಕಾಡುಕುದುರೆಯ ಹಿನ್ನಲೆ ಸಂಗೀತದ ``ಕಾಡು ಕುದುರೆ ಓಡಿಬಂದಿತ್ತಾsss.." ಹಾಡಿಗೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರಪತಿಗಳ ಫಲಕ ಕೂಡ ಸಿಕ್ಕಿತು. `ಜೀಕೆ ಮಾಸ್ತರ ಪ್ರಣಯ ಪ್ರಸಂಗ' ಕಾದಂಬರಿಯನ್ನು ಕಿರುತೆರೆಗೂ ಅಳವಡಿಸಿದ್ದಾರೆ. ಹತ್ತಾರು ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಿರುವ ಕಂಬಾರರು ಉತ್ತಮ ನಾಟಕಕಾರರು. ಜೊತೆಗೆ ಜಾನಪದ ಶೈಲಿಯ ಹಾಡುಗಳಿಗೆ ಜನಪ್ರಿಯರು. ತಾವೇ ಸ್ವತಃ ಹಾಡುಗರೂ ಸಹಾ.
"https://kn.wikipedia.org/wiki/ಚಂದ್ರಶೇಖರ_ಕಂಬಾರ" ಇಂದ ಪಡೆಯಲ್ಪಟ್ಟಿದೆ