ಸಿ. ರಾಜಗೋಪಾಲಚಾರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
 
==ಕಾಂಗ್ರೆಸ್ಸಿನಲ್ಲಿ==
[[ಜವಹರಲಾಲ್ ನೆಹರೂ]], [[ಸರ್ದಾರ್ ವಲ್ಲಭಭಾಯ್ ಪಟೇಲ್ | ಸರ್ದಾರ ವಲ್ಲಭಭಾಯ್ ಪಟೇಲ್]], [[ರಾಜೇಂದ್ರ ಪ್ರಸಾದ್]] ಹಾಗೂ [[ಮೌಲಾನಾ ಅಬುಲ್ ಕಲಮ್ ಆಜಾದ್]] ರೊಂದಿಗೆ ಸ್ವಾತಂತ್ರ್ಯ ಪೂರ್ವ ಭಾರತದ ಕಾಂಗ್ರೆಸ್ಸಿನ ಅತ್ಯುಚ್ಚ ನಾಯಕಮಣಿಗಳ ಪಂಕ್ತಿಯಲ್ಲಿ ರಾಜಾಜಿಯವರ ಹೆಸರೂ ಕೇಳಿಬರುತ್ತಿತ್ತು. ಸೇಲಂ ನ ಈ ಪ್ರಚಂಡ ವಕೀಲರನ್ನು ಒಂದು ಕಾಲದಲ್ಲಿ ಮಹಾತ್ಮಾ ಗಾಂಧಿಯವರ ಉತ್ತರಾಧಿಕಾರಿ ಎಂದೂ ಪರಿಗಣಿಸಲಾಗುತ್ತಿತ್ತು.
ರಾಜಾಜಿ [[ಮಹಾತ್ಮ ಗಾ೦ಧಿ]]ಯವರ ಬೀಗರೂ ಹೌದು - ರಾಜಾಜಿಯವರ ಮಗಳನ್ನು ಗಾಂಧಿಯವರ ಮಗನಿಗೆ ಕೊಟ್ಟಿತ್ತು. ಖ್ಯಾತ ಪತ್ರಕರ್ತ ರಾಜಮೋಹನ ಗಾಂಧಿ ಇವರಿಬ್ಬರ ಮೊಮ್ಮಗ. ಗಾಂಧಿಯವರ ಮರಣದವರೆಗೂ ಅವರ ನೆರಳಿನಲ್ಲೇ ಇದ್ದ ರಾಜಾಜಿ, ನೆಹರೂ ಮತ್ತು ಪಟೇಲರನ್ನು ಗಾಂಧಿಯವರ “ ತಲೆ, ಹೃದಯ ಮತ್ತು ಕೈಗಳು” ಎಂದೇ ಭಾವಿಸಲಾಗಿತ್ತು. ಇವರು ಮೂವರ ಪರಸ್ಪರ ಸಂಬಂಧ ಸಿಹಿ-ಕಹಿಯದಾಗಿದ್ದರೂ, ಗಾಂಧಿಯವ ವ್ಯಕ್ತಿತ್ವ ಹಾಗೂ ಎದುರಿಗಿದ್ದ ಒಂದೇ ಗುರಿ ಇವರನ್ನು ಒಟ್ಟುಗೂಡಿಸಿತ್ತು. ಆದರೂ ಇವರಿಗೆ ಪರಸ್ಪರ ಬಗ್ಯೆ ಅಪಾರ ಗೌರವವಿತ್ತು. ನೆಹರೂ ತಮ್ಮ ಆತ್ಮಕಥೆಯಲ್ಲಿ ರಾಜಾಜಿಯವರ “ ಪ್ರಖರ ಬುಧ್ಧಿಮತ್ತೆ, ನಿಸ್ಸ್ವಾರ್ಥ ಮನೋಭಾವ, ಹಾಗೂ ಅವರ ಪ್ರಚಂಡ ವಿಮರ್ಶಾ ಶಕ್ತಿ ಇವೆಲ್ಲವೂ ನಮ್ಮ ಗುರಿ ಸಾಧಿಸುವೆಡೆಯಲ್ಲಿ ದೊಡ್ಡ ಆಸ್ತಿಯಾಗಿತ್ತು” ಎಂದು ಬರೆಯುತ್ತಾರೆ.
"https://kn.wikipedia.org/wiki/ಸಿ._ರಾಜಗೋಪಾಲಚಾರಿ" ಇಂದ ಪಡೆಯಲ್ಪಟ್ಟಿದೆ