ಶಿಖಂಡಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು (Script) File renamed: File:Mahabharata00ramauoft 0117 49.jpgFile:Bhishma refuses to fight with Shikandi.jpg File renaming criterion #2: Change from completely meaningless names into suitable n...
೯ ನೇ ಸಾಲು:
ಆದರೆ ಪ್ರಿಯಕರ ಅಂಬೆಯನ್ನು ತಿರಸ್ಕರಿಸುತ್ತಾನೆ.ಈಗ ಅಂಬೆಯದು ವಿಚಿತ್ರ ಪರಿಸ್ಥಿತಿ.ಇತ್ತ ಪ್ರಿಯಕರನಿಂದಲೂ ತಿರಸ್ಕೃತಗೊಂಡು ಅತ್ತ ವಿಚಿತ್ರವೀರ್ಯನನ್ನೂ ಮದುವೆಯಾಗದೇ ಕಂಗೆಡುತ್ತಾಳೆ.ಹತಾಶೆಗೊಂಡ ಅಂಬೆ ತೀರ ಕೊನೆಗೆ
ಭೀಷ್ಮನನ್ನೇ ಮದುವೆಯಾಗುವಂತೆ ಒತ್ತಾಯಿಸುತ್ತಾಳೆ.ಭೀಷ್ಮ ಒಪ್ಪುವದಿಲ್ಲ.ಹೀಗೆ ಎಲ್ಲ ಕಡೆಗಳಿಂದಲೂ ತಿರಸ್ಕೃತಗೊಂಡ ಅಂಬೆ ಆಗ ಕೋಪದಿಂದ ಭೀಷ್ಮನೆದುರು ಶಪಥಗೈಯುತ್ತಾಳೆ.ಮುಂದಿನ ಜನ್ಮದಲ್ಲಾದರೂ ನಿನ್ನ ಸಾವಿಗೆ ಕಾರಣಳಾಗುವೆ ಎಂದು ಭೀಷ್ಮನೆಡೆಗೆ ಕೋಪದಿಂದ ಗರ್ಜಿಸುತ್ತ ತನ್ನನ್ನು ತಾನು ಅಗ್ನಿಗೆ ಅರ್ಪಿಸಿಕೊಳ್ಳುತ್ತಾಳೆ.
[[File:Mahabharata00ramauoftBhishma 0117refuses 49to fight with Shikandi.jpg|thumb|204x204px|ಶಿಖಂಡಿಯೊಂದಿಗೆ ಹೋರಾಡಲು ನಿರಾಕರಿಸುತ್ತಿರು ಭೀಷ್ಮ]]
ಹಾಗೆ ಆತ್ಮಾಹುತಿ ಮಾಡಿಕೊಂಡ ಅಂಬೆ ದ್ರುಪದನ ಮಗಳಾಗಿ ಜನಿಸುತ್ತಾಳೆ.ಆಕೆಯ ಹುಟ್ಟಿನ ಸಮಯದಲ್ಲಿ [[ಅಶರೀರವಾಣಿ]]ಯೊಂದು ಈಕೆಯ ಹಿನ್ನೆಲೆಯನ್ನು ತಂದೆ ದ್ರುಪದನಿಗೆ ತಿಳಿಸುತ್ತದೆ.ಆ ಕಾರಣಕ್ಕೆ ಹೆಣ್ಣುಮಗುವನ್ನು ಗಂಡಸಿನಂತೆ ಬೆಳೆಸುವಂತೆ ಸೂಚಿಸುತ್ತದೆ.ಹಾಗಾಗಿ ಶಿಖಂಡಿ ಹೆಣ್ಣಾದರೂ ಗಂಡಸಿನಂತೆ ಬೆಳೆಯುತ್ತದೆ.ಮುಂದೆ [[ಕುರುಕ್ಷೇತ್ರ ಯುದ್ಧ]]ದ ಸಮಯದಲ್ಲಿ [[ಕೃಷ್ಣ]] ಭೀಷ್ಮನಿಗೆದುರಾಗಿ ಶಿಖಂಡಿಯನ್ನೇ ತಂದು ನಿಲ್ಲಿಸುತ್ತಾನೆ.ಭೀಷ್ಮ ಹೆಣ್ಣಿನ ಎದುರು ಯುದ್ಧ ಮಾಡಲಾರೆ ಎಂದು ಶಸ್ತ್ರ ಕೆಳಗಿಡುತ್ತಾನೆ.ಆಗ ಕೃಷ್ಣ [[ಅರ್ಜುನ]]ನಿಗೆ ಮೋಸದಿಂದ ಭೀಷ್ಮನೊಂದಿಗೆ ಹೋರಾಡುವಂತೆ ಪ್ರೆರೇಪಿಸಿ ಭೀಷ್ಮನನ್ನು ಹೊಡೆದುರುಳಿಸುತ್ತಾನೆ.
 
"https://kn.wikipedia.org/wiki/ಶಿಖಂಡಿ" ಇಂದ ಪಡೆಯಲ್ಪಟ್ಟಿದೆ